26 ರಂದು ಕಾರ್ಕಳ ಮಹಾಮಸ್ತಕಾಭಿಷೇಕ ಮಹೋತ್ಸವ-2027ರ ಸಮಾಲೋಚನಾ ಸಭೆ

KannadaprabhaNewsNetwork |  
Published : Jan 25, 2026, 03:00 AM IST
ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌  | Kannada Prabha

ಸಾರಾಂಶ

ಜೈನ ಧರ್ಮ ಜೀರ್ಣೋದ್ಧಾರಕ ಸಂಘ ಕಾರ್ಕಳ ಇದರ ನೇತೃತ್ವದಲ್ಲಿ 2027ರ ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ ನಡೆಯಲಿದೆ. ಈ ಐತಿಹಾಸಿಕ ಮಹಾಮಸ್ತಕಾಭಿಷೇಕ ಮಹೋತ್ಸವದ ಸಮಾಲೋಚನಾ ಸಭೆ ಜ. 26 ರಂದು ಸಂಜೆ 3.00ಕ್ಕೆ ಕಾರ್ಕಳ ದಾನಶಾಲೆ ಭಗವಾನ್ ಶ್ರೀ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆಯಲಿದೆ ಎಂದು ಶ್ರೀ ಜೈನಧರ್ಮ ಜೀರ್ಣೋದ್ಧಾರಕ ಸಂಘ ಕಾರ್ಕಳ ಇದರ ಕಾರ್ಯಾಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್

ಮಂಗಳೂರು: ಜೈನ ಧರ್ಮ ಜೀರ್ಣೋದ್ಧಾರಕ ಸಂಘ ಕಾರ್ಕಳ ಇದರ ನೇತೃತ್ವದಲ್ಲಿ 2027ರ ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ ನಡೆಯಲಿದೆ. ಈ ಐತಿಹಾಸಿಕ ಮಹಾಮಸ್ತಕಾಭಿಷೇಕ ಮಹೋತ್ಸವದ ಸಮಾಲೋಚನಾ ಸಭೆ ಜ. 26 ರಂದು ಸಂಜೆ 3.00ಕ್ಕೆ ಕಾರ್ಕಳ ದಾನಶಾಲೆ ಭಗವಾನ್ ಶ್ರೀ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆಯಲಿದೆ ಎಂದು ಶ್ರೀ ಜೈನಧರ್ಮ ಜೀರ್ಣೋದ್ಧಾರಕ ಸಂಘ ಕಾರ್ಕಳ ಇದರ ಕಾರ್ಯಾಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.ಕಾರ್ಕಳದಲ್ಲಿ ಸುಮಾರು 200 ವರ್ಷಗಳ ಹಿಂದೆ ನಿರ್ಮಿಸಿ, ಪ್ರತಿಷ್ಠಾಪಿಸಿದ ಶ್ರೀ ಬಾಹುಬಲಿ ಸ್ವಾಮಿಯ ಮೂರ್ತಿ ನಿರ್ಮಾಣ, ಪ್ರತಿಷ್ಠಾಪನೆ ಮತ್ತು ಮಹಾಮಸ್ತಾಕಾಭಿಷೇಕದ ಚರಿತ್ರೆ ಒಂದು ಐತಿಹಾಸಿಕ ಅಧ್ಯಾಯ. ಮಾತ್ರವಲ್ಲ 18 ಪ್ರಾಚೀನ ಜಿನ ಮಂದಿರಗಳಿಂದಾಗಿ ‘ಜೈನಕಾಶಿ’ ಎಂದೇ ವಿಶ್ವವಿಖ್ಯಾತವಾದ ಕಾರ್ಕಳದಲ್ಲಿ ಬಾಹುಬಲಿ ಸ್ವಾಮಿಗೆ 12 ವರ್ಷಗಳಿಗೊಮ್ಮೆ ಮಹಾಮಸ್ತಾಕಾಭಿಷೇಕ ನಡೆಯುತ್ತಿದೆ. ಈ ಹಿಂದೆ 1990, 2002, 2015ರಲ್ಲಿ ವೈಭವದೊಂದಿಗೆ ಮಹಾಮಸ್ತಾಕಾಭಿಷೇಕ ನಡೆದಿತ್ತು. ಇದೀಗ 2027ರಲ್ಲಿ ನಡೆಯುವ ಮಹಾಮಸ್ತಾಕಾಭಿಷೇಕವನ್ನು ಅತ್ಯಂತ ವೈಭವಯುತವಾಗಿ ನಡೆಸಲು ನಿರ್ಧರಿಸಲಾಗಿದೆ.ಈ ಬಾರಿಯ ಸಮಾಲೋಚನಾ ಸಭೆಯು ಜೈನ ಧರ್ಮ ಜೀರ್ಣೋದ್ಧಾರಕ ಸಂಘದ ಅಧ್ಯಕ್ಷ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನಡೆಯಲಿದೆ.ಮಹಾಮಸ್ತಕಾಭಿಷೇಕ ಮಹೋತ್ಸವದ ನಿಮಿತ್ತ ವಿವಿಧ ಸಮಿತಿಗಳನ್ನು ರಚಿಸಲಿರುವುದರಿಂದ ಜೈನ ಸಮಾಜದ ಎಲ್ಲ ಶ್ರಾವಕ-ಶ್ರಾವಕಿಯರು ಈ ಸಭೆಗೆ ಆಗಮಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕು ಎಂದು ಡಾ. ಎಂ.ಎನ್. ರಾಜೇಂದ್ರ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಸ್ಟೆಲ್ ಮಕ್ಕಳಿಗೆ ಹೊಸ ಜಾತಿ ಪ್ರಮಾಣಪತ್ರ ಶಾಕ್‌
₹400 ಕೋಟಿ ಇದ್ದ 2 ಕಂಟೇನರ್‌ ಲಾರಿಗಳೇ ಬೆಳಗಾವೀಲಿ ನಾಪತ್ತೆ!