ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಮಹಾಂತ ಶ್ರೀಗಳು

KannadaprabhaNewsNetwork |  
Published : Aug 03, 2024, 12:34 AM IST

ಸಾರಾಂಶ

ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ.ಮಹಾಂತ ಶಿವಯೋಗಿಗಳು ಎಂದು ಪ್ರಾಚಾರ್ಯ ಡಾ.ಅರುಣಕುಮಾರ ಗಾಳಿ ಅವರು ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ.ಮಹಾಂತ ಶಿವಯೋಗಿಗಳು ಎಂದು ಪ್ರಾಚಾರ್ಯ ಡಾ.ಅರುಣಕುಮಾರ ಗಾಳಿ ಅವರು ಹೇಳಿದರು.

ಅವರು ಬಾಗಲಕೋಟೆ ನವನಗರದ ಸ.ಪ್ರ.ದ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮದಲ್ಲಿ ಲಿಂಗೈಕ್ಯ ಡಾ.ಮಹಾಂತ ಶಿವಯೋಗಿಗಳವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

ಪೂಜ್ಯ ಡಾ.ಮಹಾಂತ ಶಿವಯೋಗಿಗಳು ವ್ಯಸನ ಮುಕ್ತ ವ್ಯಕ್ತಿ, ಕುಟುಂಬ, ಸಮಾಜ, ಗ್ರಾಮಗಳ ನಿರ್ಮಾಣ ಮಾಡುವ ಜೊತೆಗೆ ತಮ್ಮ ಜೋಳಿಗೆ ಕಾರ್ಯಕ್ರಮದಲ್ಲಿ ನಾಡಿನ ಪ್ರಖ್ಯಾತ ವೈದ್ಯರು, ಸಮಾಜ ವಿಜ್ಞಾನಿಗಳು, ಸಾಹಿತಿಗಳು, ಸಾಮಾಜಿಕ ಕಳಕಳಿಯ ಕವಿಗಳು, ಧರ್ಮ ಗುರುಗಳನ್ನು ಆಹ್ವಾನಿಸಿ ಅವರಿಂದ ಉಪನ್ಯಾಸಗಳನ್ನು ಮಾಡಿಸುವ ಮೂಲಕ ವ್ಯಸನಗಳ ಮನಪರಿವರ್ತನೆ ಮಾಡುವುದರ ಜೊತೆಗೆ ಮಕ್ಕಳು, ವಿದ್ಯಾರ್ಥಿಗಳು, ಯುವ ಜನಾಂಗ ದುಶ್ಚಟಗಳಿಗೆ ಬಲಿಯಾದಂತೆ ಅರಿವು ಮೂಡಿಸುತ್ತಿದ್ದರು. ಇದರಿಂದಾಗಿ ಲಕ್ಷಾಂತರ ಜನರು ವ್ಯಸನಗಳಿಂದ ಮುಕ್ತರಾಗಿ ಅವರ ಕುಟುಂಬಗಳು ನೆಮ್ಮದಿಯ ಜೀವನ ಸಾಗಿಸುತ್ತಿವೆ ಮಾಡಿದ್ದರೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚೈತ್ರ ‌ನವರಾತ್ರಿ ನಿಮಿತ್ತ ಕನ್ನಡ ಗೀತೆ ಜತೆ ಮೋದಿ ಶುಭಾಶಯ -ದಿನಕ್ಕೊಂದು ಭಾಷೆಯ ಗೀತೆ ಪೋಸ್ಟ್‌
ಸೌದೆ ಒಲೆಗೆ ಖಾನಾವಳಿ ಮೊರೆ-ಒಂದು ಕ್ವಿಂಟಲ್ ಕಟ್ಟಿಗೆಗೆ 900 ರು. ವೆಚ್ಚ