ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಡಾ.ಮ.ನಿ.ಪ್ರ.ಮಹಾಂತ ಶ್ರೀಗಳ ಜಯಂತಿ ಪ್ರಯುಕ್ತ ನಡೆದ ವ್ಯಸನಮುಕ್ತ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ವ್ಯಸನಕ್ಕೆ ದಾಸರಾದ ಅನೇಕ ಕುಟುಂಬಗಳು ಸಂಕಷ್ಟದಲ್ಲಿರುವುದನ್ನು ಮನಗಂಡು ದುಶ್ಚಟಗಳ ತೊಲಗಿಸಲು ಶ್ರಮವಹಿಸಿ ಅನೇಕ ಯುವಜನರ, ಕುಟುಂಬಗಳ ಸುಧಾರಣೆ ತರುವಲ್ಲಿ ಅವರ ಕೊಡುಗೆ ಅಪಾರವಾಗಿದೆ. ಎಲ್ಲ ವರ್ಗದವರ ಮನೆಮನೆಗೂ ತೆರಳಿ, ಮದ್ಯವ್ಯಸನ, ತಂಬಾಕು ಸೇವನೆ, ಧೂಮಪಾನ, ಆಲಸ್ಯತನ, ಸುಳ್ಳು ಹೇಳುವುದು, ಅಪ್ರಾಮಾಣಿಕತೆ ಅಂತಹ ಕೆಟ್ಟ ವ್ಯಸನಗಳನ್ನು ತಮ್ಮ ಜೋಳಿಗೆಗೆ ಹಾಕಿಸಿಕೊಳ್ಳುವ ಮೂಲಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಹಗಲಿರುಳು ಶ್ರಮಿಸಿದ್ದಾರೆ ಎಂದು ತಿಳಿಸಿದರು.ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಮಾತನಾಡಿ, ಮನಸ್ಸು, ದೇಹ, ಕುಟುಂಬ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ವ್ಯಸನಕ್ಕೆ ಅಂಟಿಕೊಳ್ಳುವುದು ಸಾಮಾಜಿಕ ಪಿಡುಗಾಗಿದೆ. ವ್ಯಸನಗಳ ಬಗ್ಗೆ ಯುವಜನರು ದೂರವಿರಬೇಕು. ದುಷ್ಚಟಗಳಿಗೆ ಬಲಿಯಾಗದೇ ತಮ್ನನ್ನು ಕುಂಟುಬದ ಶ್ರೇಯಸ್ಸಿಗಾಗಿ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಂಡು ಸುಂದರ ಬದುಕು ಕಟ್ಟಿಕೊಳ್ಳುವಂತೆ ಕರೆ ನೀಡಿದರು.
ಈ ವೇಳೆ ಮದ್ಯಪಾನ, ಮಾದಕ ವಸ್ತು, ತಂಬಾಕು ವಸ್ತುಗಳ ವ್ಯಸನ ಮುಕ್ತಗೊಳಿಸುವ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ ಸ್ವಾಗತಿಸಿದರು. ಜಿಲ್ಲಾ ವಿಕಲಚೇತನರ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ ನಿರೂಪಿಸಿದರು.
ಡಾ.ಮಹಾಂತ ಶಿವಯೋಗಿಗಳ ಜಯಂತಿ ಪ್ರಯುಕ್ತ ವ್ಯಸನಮುಕ್ತ ದಿನ ಜಾಥಾಗೆ ನಗರದ ಸಿದ್ದೇಶ್ವರ ದೇವಸ್ಥಾನದಿಂದ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೆಶಕ ಚಂದ್ರಶೇಖರ ಹೊಸಮನಿ ಉಪಸ್ಥಿತರಿದ್ದರು. ಘೋಷಣೆಗಳನ್ನು ಕೂಗುವ ಮೂಲಕ ಸಾರ್ವಜನಿಕರಿಗೆ ದುಷ್ಚಟಗಳ ದುಷ್ಪರಿಣಾಮಗಳ ಬಗ್ಗೆ ಕರಪತ್ರ ವಿತರಿಸಿ ಜಾಗೃತಿ ಮೂಡಿಸಿದರು.