- ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕಿ ಡಾ.ಡಿ. ಸುಂದರಿ ಫೋಟೋ- 10ಎಂವೈಎಸ್47
ಕನ್ನಡಪ್ರಭ ವಾರ್ತೆ ಮೈಸೂರು
ಕರ್ನಾಟಕದಲ್ಲಿ ಹುಟ್ಟಿದ ವಚನ ಚಳವಳಿ ಇಡೀ ಪ್ರಪಂಚಕ್ಕೆ ಬೆಳಕು ನೀಡಿದ್ದು ವಿಶೇಷ. ಮನುಷ್ಯ ಮನುಷ್ಯನಾಗಿ, ಮನುಷ್ಯರನ್ನು ಮನುಷ್ಯರಾಗಿ ಕಾಣಬೇಕೆಂಬ ಸಾರವನ್ನು ಸಾರಲು ಹುಟ್ಟಿದ್ದು ವಚನ ಸಾಹಿತ್ಯ. ಸಮ ಸಮಾಜದ ನಿರ್ಮಾಣಕ್ಕೆ ಬಸವಣ್ಣ ಚಿಂತನೆಗಳು ಅತ್ಯವಶ್ಯಕ ಎಂದು ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕಿ ಡಾ.ಡಿ. ಸುಂದರಿ ತಿಳಿಸಿದರು.ನಗರದ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಬಸವ ಜಯಂತಿಯಲ್ಲಿ ಮಾತನಾಡಿದ ಅವರು, ಬಸವಣ್ಣನವರ ಚಿಂತನೆಗಳು ಸರ್ವಕಾಲಿಕ ಪ್ರಸ್ತುತತೆಯನ್ನು ಹೊಂದಿರುವುದು ಸತ್ಯ. ಅವರ ಕಾಯಕ ಸಿದ್ಧಾಂತ ಮತ್ತು ದಾಸೋಹ ಇಂದಿಗೆ ಹೆಚ್ಚು ಪ್ರಸ್ತುತ ಎಂದರು.
ಬಸವಣ್ಣನವರ ಮೌಢ್ಯ ವಿರೋಧಿ ಚಿಂತನೆಗಳು, ಜಾತಿ ವಿರೋಧಿ ಚಿಂತನೆಗಳು, ಸ್ತ್ರೀ ಸಮಾನತೆಯ ನಿಲುವುಗಳು, ಸಮ ಸಮಾಜದ ನಿರ್ಮಾಣಕ್ಕೆ ಅವರು ನೀಡಿದ ಸಂದೇಶಗಳನ್ನು ವಿಸ್ತಾರವಾಗಿ ತಿಳಿಸಿದ ಅವರು, ಜಾತಿಯನ್ನು ವಿರೋಧಿಸಿ ಮನುಷ್ಯರನ್ನು ಮನುಷ್ಯರಾಗಿ ಕಂಡ ಬಸವಣ್ಣನವರ ಹಾದಿಯಲ್ಲಿ ಸಾಗಿ ಸಮ ಸಮಾಜವನ್ನು ಸೃಷ್ಟಿಸಲು ನಮಗೆ ಇಂದಿಗೂ ಸಾಧ್ಯವಾಗಿಲ್ಲ ಎಂದು ತಿಳಿಸಿದರು.
ಕಾಲೇಜಿನ ಪತ್ರಾಂಕಿತ ವ್ಯವಸ್ಥಾಪಕಿ ನಾಗರತ್ನಮ್ಮ, ಸಾಂಸ್ಕೃತಿಕ ವೇದಿಕೆಯ ಅಧ್ಯಾಪಕ ಕಾರ್ಯದರ್ಶಿ ನಂಜುಂಡಯ್ಯ ಅವರು ಬಸವಣ್ಣನವರ ವಚನಗಳನ್ನು ಹಾಡಿದರು. ವಿದ್ಯಾರ್ಥಿನಿ ಅಧ್ಯಕ್ಷೆ ರಕ್ಷಿತಾ, ಕಾರ್ಯದರ್ಶಿ ಜೇನುಶ್ರೀ ಇದ್ದರು. ವಿದ್ಯಾರ್ಥಿನಿ ಬಿಂದು ಅವಧಾನಿ ನಿರೂಪಿಸಿದರು. ಸಾಂಸ್ಕೃತಿಕ ವೇದಿಕೆಯ ಅಧ್ಯಾಪಕ ಖಜಾಂಚಿ ಅಶ್ವಿನಿ ವಂದಿಸಿದರು.