ಮಲೆ ಮಹದೇಶ್ವರದಲ್ಲಿ ವೈಭವದ ಮಹಾರಥೋತ್ಸವ

KannadaprabhaNewsNetwork |  
Published : Feb 19, 2026, 01:45 AM IST
ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾಶಿವರಾತ್ರಿ ಮಹಾ ರಥೋತ್ಸವ ಸಂಪನ್ನ  | Kannada Prabha

ಸಾರಾಂಶ

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಮಹಾರಥೋತ್ಸವ ನಡೆಯಿತು.

- ಕಳೆದ 5 ದಿನಗಳಿಂದ ನಡೆಯುತ್ತಿರುವ ಉತ್ಸವಗಳು ಸಂಪನ್ನ । 5 ದಿನದಲ್ಲಿ 9-10 ಲಕ್ಷ ಭಕ್ತರಿಂದ ದೇವರ ದರ್ಶನ

---

ಜಿ ದೇವರಾಜ ನಾಯ್ಡು

ಕನ್ನಡಪ್ರಭ ವಾರ್ತೆ ಹನೂರುಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಮಹಾರಥೋತ್ಸವ ನಡೆಯಿತು.ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕಳೆದ 5 ದಿನಗಳಿಂದ ನಡೆಯುತ್ತಿರುವ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಹಲವು ವಿಶೇಷತೆಗಳೊಂದಿಗೆ ಬುಧವಾರ ಬೆಳಗ್ಗೆ 10.05ರಿಂದ 11ರವರೆಗೆ ಮಹಾ ರಥೋತ್ಸವು ಸಾಲೂರು ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಸಂಪನ್ನಗೊಂಡಿತು.

ಮಹಾರಥೋತ್ಸವ ವಿಶೇಷತೆ:

ಪ್ರತಿ ವರ್ಷದಂತೆ ಮಹಾರಥೋತ್ಸವಕ್ಕೂ ಮಹದೇಶ್ವರ ಉತ್ಸವ ಮೂರ್ತಿಗೆ ಬೇಡಗಂಪಣ ಅರ್ಚಕರ ನೇತೃತ್ವದಲ್ಲಿ ಬೆಳಗ್ಗೆ 7 ಗಂಟೆಗೆ ಕೆಂಪು ಅನ್ನ ತಯಾರಿಸಿ (ಬಲಿ ಅನ್ನ) ರಥದ ಚಕ್ರಗಳಿಗೆ ಬಲಿ ಅನ್ನ ಇಟ್ಟು ನಂತರ ಮಹಾ ಮಂಗಳಾರತಿ ಪೂಜೆ ಸಲ್ಲಿಸಲಾಯಿತು. ಬಳಿಕ ಬೆಲ್ಲದ ಆರತಿ, ನಂತರ ಬೂದು ಕುಂಬಳಕಾಯಿ ಒಡೆದ ನಂತರ ಸಾಲೂರು ಮಠದ ಶ್ರೀಗಳು ತೆಂಗಿನಕಾಯಿ ಒಡೆಯುವ ಮೂಲಕ ಮಹಾರಥೋತ್ಸವಕ್ಕೆ ಸಾಂಪ್ರದಾಯಿವಾಗಿ ಚಾಲನೆ ನೀಡಿದರು.ಡ್ರೋನ್‌ ಕ್ಯಾಮರಾದಲ್ಲಿ ವೈಭವ:

ಮಹಾರಥೋತ್ಸವ ಹಿನ್ನೆಲೆಯಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಡ್ರೋನ್‌ ಕ್ಯಾಮೆರಾವನ್ನು ತರಲಾಗಿತ್ತು. ಇದರ ಮೂಲಕ ಮಹದೇಶ್ವರನ ವಿಜೃಂಭಣೆಯ ರಥೋತ್ಸವ ಸೆರೆಯಾಗಿದ್ದು, ಭಕ್ತರು ಇದನ್ನು ಕಣ್ತುಂಬಿಕೊಂಡರು.ಬಿಳಿ ಆನೆ ಉತ್ಸವ:

ರಥೋತ್ಸವ ನಂತರ ಪಾರ್ವತಿ ಪರಮೇಶ್ವರರ ಉತ್ಸವ ಮೂರ್ತಿಯನ್ನು ಬಿಳಿ ಆನೆಯ ಮೇಲೆ ಪ್ರತಿಷ್ಠಾಪಿಸಿ ದೇವಾಲಯದ ಆವರಣದಲ್ಲಿ ಮೆರವಣಿಗೆ ಮಾಡಿಸಿ ನಂತರ ಹೊರಭಾಗದಲ್ಲೂ ವಾದ್ಯಗಳೊಂದಿಗೆ ಮೆರವಣಿಗೆ ಮಾಡಿ ಉತ್ಸವ ಮೂರ್ತಿಯನ್ನು ಪೂಜೆ ಸಲ್ಲಿಸಿ ಮಹಾ ಮಂಗಳಾರತಿಯೊಂದಿಗೆ ಪೂಜೆಯ ನಂತರ ಬಿಳಿ ಆನೆ ಉತ್ಸವ ಸಾಂಪ್ರದಾಯದಂತೆ ಜರುಗಿತು.ಗುರು ಬ್ರಹ್ಮೋತ್ಸವ:

ಮಲೆ ಮಹದೇಶ್ವರ ಉತ್ಸವಮೂರ್ತಿಗೆ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪಲ್ಲಕ್ಕಿಯಲ್ಲಿಟ್ಟು ಗುರು ಬ್ರಹ್ಮೋತ್ಸವ ಉತ್ಸವ ಮೂರ್ತಿಯನ್ನು ವಾದ್ಯ ಮೇಳಗಳ ಜೊತೆ ವೀರಗಾಸೆ ಕತ್ತಿ ವರಸೆ, ನವಿಲೂರು ವಾದ್ಯ ಮೇಳಗಳ ಜೊತೆ ದೇವಾಲಯದ ಸುತ್ತಲೂ ಪ್ರದಕ್ಷಿಣೆ ಹಾಕಿ ನಂತರ ಉತ್ಸವ ಮೂರ್ತಿಗೆ ಧೂಪದ ಅಭಿಷೇಕ ಬಿಲ್ವಾರ್ಚನೆ, ಅಭಿಷೇಕ ಮಹಾಮಂಗಳಾರತಿ ಮಾಡಲಾಯಿತು.

ವಾರದಲ್ಲಿ 9-10 ಲಕ್ಷ ಭಕ್ತರಿಂದ ದರ್ಶನ:ಈ ಶಿವರಾತ್ರಿ ಜಾತ್ರೆಯಲ್ಲಿ ಕ್ಷೇತ್ರಕ್ಕೆ ಕಳೆದ ಒಂದು ವಾರದಿಂದ 9ರಿಂದ 10 ಲಕ್ಷಕ್ಕೂ ಹೆಚ್ಚು ಅಧಿಕ ಭಕ್ತರು ಮಾದಪ್ಪನ ದರ್ಶನ ಪಡೆದಿದ್ದು, ತಮಿಳುನಾಡು ಸೇರಿದಂತೆ ಹೊರರಾಜ್ಯಗಳ ಭಕ್ತರೂ ಸಹ ದರ್ಶನ ಪಡೆದಿದ್ದಾರೆ. 6 ಲಕ್ಷಕ್ಕೂ ಅಧಿಕ ಲಾಡು ಪ್ರಸಾದ ಸಹ ಈ ಜಾತ್ರೆಯಲ್ಲಿ ಮಾರಾಟ ಮಾಡಲಾಗಿದೆ.---

ಮಹಾ ರಥೋತ್ಸವದಲ್ಲಿ ಭಕ್ತಾದಿಗಳು ಪಾಲ್ಗೊಂಡಿದ್ದ ಅವರಿಗೆ ವಿಶೇಷವಾಗಿ ದಾಸೋಹ ವ್ಯವಸ್ಥೆ ನೆರಳಿನ ವ್ಯವಸ್ಥೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕ್ರಮವಹಿಸಿದೆ. ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್‌, ಜಿಲ್ಲಾಧಿಕಾರಿ ಶ್ರೀ ರೂಪಾ ಹಾಗೂ ಶಾಸಕ ಎಂ.ಆರ್‌. ಮಂಜುನಾಥ್ ಅವರ ನೇತೃತ್ವದಲ್ಲಿ ಜಾತ್ರೆ ಉತ್ತಮವಾಗಿ ನಡೆದಿದೆ.

- ಎ.ಇ. ರಘು ಕಾರ್ಯದರ್ಶಿ, ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ

---

18ಸಿಎಚ್ಎನ್‌11

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ನಡೆದ ಮಹಾರಥೋತ್ಸವ ಡ್ರೋನ್‌ ಕ್ಯಾಮೆರಾದಲ್ಲಿ ಸೆರೆಹಿಡಿದ ಚಿತ್ರ.

18ಮಪಲ12 ಹನೂರು ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಮಹಾರಥೋತ್ಸವ ದಲ್ಲಿ ಭಾಗವಹಿಸಿದ್ದ ಮಾದಪ್ಪನ ಭಕ್ತಾದಿಗಳು 18ಸಿಎಚ್ಎನ್‌15ಹನೂರು ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆದ ಮಹಾ ರಥೋತ್ಸವ ಮುನ್ನ ಪಾರ್ವತಿ ಪರಮೇಶ್ವರ ಮೂರ್ತಿ ಮೆರವಣಿಗೆಯಲ್ಲಿ ಪಾಲ್ಗೊಂಡಿರುವ ಸಾಲೂರುಮಟದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಎ. ಇ .ರಘು , ಇತರರು. 18ಮಪಲ13 ಹನೂರು ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆದ ಮಹಾರಥೋತ್ಸವದ ಪ್ರಯುಕ್ತ ಬಿಳಿ ಕುದುರೆ ಉತ್ಸವ ಸಂಭ್ರಮ ಸಡಗರದೊಂದಿಗೆ ನಡೆಯಿತು... 18ಸಿಎಚ್ಎನ್14

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮದ್ಯದಂಗಡಿಯಲ್ಲಿದ್ದ ಬಾಲಕಿ ರಕ್ಷಣೆ: ಮಾಲೀಕನ ವಿರುದ್ಧ ಕೇಸ್‌
ಭಕ್ತ ಸಮೂಹದೊಂದಿಗೆ ವಿಜೃಂಭಣೆಯಿಂದ ಜರುಗಿದ ಸವದತ್ತಿಶ್ರೀ ಎಲ್ಲಮ್ಮ ದೇವಿ ಜಾತ್ರೆ