ನ. ೩ರಂದು ಲಕ್ಷ್ಮೇಶ್ವರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ

KannadaprabhaNewsNetwork |  
Published : Nov 01, 2025, 02:15 AM IST
ಲಕ್ಷ್ಮೇಶ್ವರದಲ್ಲಿ ನವೆಂಬರ್ ೩ರಂದು ಜರುಗಲಿರುವ ತಾಲೂಕು ಮಟ್ಟದ ಮಹರ್ಷಿ ವಾಲ್ಮೀಕಿ ಹಾಗೂ ವೀರ ಮದಕರಿ ನಾಯಕರ ಜಯಂತಿಯ ಪ್ರಚಾರ ಪತ್ರಿಕೆಗಳನ್ನು ಶುಕ್ರವಾರ ಮಹರ್ಷಿ ವಾಲ್ಮೀಕಿ ನಾಯಕ ವಿವಿಧೋದ್ದೇಶಗಳ ಸಂಘದ ತಾಲೂಕು ಅಧ್ಯಕ್ಷ ಭೀಮಣ್ಣ ಯಂಗಾಡಿ ಹಾಗೂ ಸದಸ್ಯರು ಬಿಡುಗಡೆ ಮಾಡಿದರು. | Kannada Prabha

ಸಾರಾಂಶ

ಲಕ್ಷ್ಮೇಶ್ವರ ಪಟ್ಟಣದ ಸೋಮೇಶ್ವರ ತೇರಿನ ಆವರಣದಲ್ಲಿ ನ. ೩ರಂದು ಬೆಳಗ್ಗೆ ೧೦ಕ್ಕೆ ತಾಲೂಕು ಮಟ್ಟದ ಮಹರ್ಷಿ ವಾಲ್ಮೀಕಿ ಹಾಗೂ ವೀರ ಮದಕರಿ ನಾಯಕರ ಜಯಂತಿ ನಡೆಯಲಿದೆ. ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಲಕ್ಷ್ಮೇಶ್ವರ: ಪಟ್ಟಣದ ಸೋಮೇಶ್ವರ ತೇರಿನ ಆವರಣದಲ್ಲಿ ನ. ೩ರಂದು ಬೆಳಗ್ಗೆ ೧೦ಕ್ಕೆ ತಾಲೂಕು ಮಟ್ಟದ ಮಹರ್ಷಿ ವಾಲ್ಮೀಕಿ ಹಾಗೂ ವೀರ ಮದಕರಿ ನಾಯಕರ ಜಯಂತಿ ನಡೆಯಲಿದೆ.

ಈ ಕುರಿತು ಶುಕ್ರವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಹರ್ಷಿ ವಾಲ್ಮೀಕಿ ನಾಯಕ ವಿವಿಧೋದ್ದೇಶಗಳ ಸಂಘದ ತಾಲೂಕು ಘಟಕದ ಅಧ್ಯಕ್ಷ ಭೀಮಣ್ಣ ಯಂಗಾಡಿ ಮಾಹಿತಿ ನೀಡಿದರು.

ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವಿಜಯ ಕರಡಿ ಮಾತನಾಡಿ, ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ. ಪ್ರಸನ್ನಾನಂದಪುರಿ ಸ್ವಾಮೀಜಿ ಹಾಗೂ ಚಿತ್ರದುರ್ಗದ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಡಾ. ಬಸವಮೂರ್ತಿ ಮಾದಾರಚನ್ನಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿಕೊಳ್ಳುವರು. ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಸಂಸದ ಬಸವರಾಜ ಬೊಮ್ಮಾಯಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಶಾಸಕ ಡಾ. ಚಂದ್ರು ಲಮಾಣಿ, ಸಂಘದ ಅಧ್ಯಕ್ಷ ಭೀಮಣ್ಣ ಯಂಗಾಡಿ ಅಧ್ಯಕ್ಷೆ ವಹಿಸಿಕೊಳ್ಳುವರು ಎಂದು ತಿಳಿಸಿದರು.

ಸಮಾಜದ ಮುಖಂಡ ಎನ್.ಎನ್. ನೆಗಳೂರ ಮಾತನಾಡಿ, ಕಾರ್ಮಿಕ ಸಚಿವ ಸಂತೋಷ ಲಾಡ್, ಚಿತ್ರನಟ ಕಿಚ್ಚ ಸುದೀಪ ಆಗಮಿಸುವರು. ಡಾ. ಪ್ರಭುರಾಜ ಕೆ.ಎನ್. ಉಪನ್ಯಾಸ ನೀಡುವರು ಎಂದು ಹೇಳಿದರು.

ಸಂಘದ ಯುವ ಮುಖಂಡ ಪ್ರಕಾಶ ಬೆಂತೂರ ಮಾತನಾಡಿ, ಮಾಜಿ ಸಚಿವ ಬಿ. ಶ್ರೀರಾಮುಲು ಅವರು ವಾಲ್ಮೀಕಿ ಮತ್ತು ವೀರ ಮದಕರಿ ನಾಯಕರ ಭಾವಚಿತ್ರಗಳ ಮೆರವಣಿಗೆಗೆ ಚಾಲನೆ ನೀಡುವರು. ಮೆರವಣಿಗೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬಂದ ಕಲಾವಿದರಿಂದ ಕಲಾ ಪ್ರದರ್ಶನ ನಡೆಯುವುದು. ನೂರಾರು ಮಹಿಳೆಯರ ಕುಂಭದೊಂದಿಗೆ ಭಾಗವಹಿಸುವರು. ತೇರಿನ ಮನೆಯಿಂದ ಆರಂಭವಾಗುವ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ ಎಂದು ತಿಳಿಸಿದರು.

ಸಭೆಯಲ್ಲಿ ಸಂಘದ ಕಾರ್ಯದರ್ಶಿ ಹನುಮಂತ ಜಾಲಿಮರದ, ಉಪಾಧ್ಯಕ್ಷ ರಾಜು ಓಲೆಕಾರ, ನಾಗರಾಜ ಹಾವಳಕೇರಿ, ಸುರೇಶ ಹಾವನೂರ, ಚಂದ್ರು ತಳವಾರ, ರಾಮಣ್ಣ ಕಲಕೋಟಿ, ಕೆ.ಒ. ಹೂಲಿಕಟ್ಟಿ, ಕಲ್ಲಪ್ಪ ಗಂಗಣ್ಣವರ, ಬಸವರಾಜ ದೊಡ್ಡಮನಿ ಇದ್ದರು. ಇದೇ ಸಂದರ್ಭದಲ್ಲಿ ಸಮಾರಂಭದ ಪ್ರಚಾರ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ