ಉಡುಪಿ ಜಿಲ್ಲಾ ಮಹರ್ಷಿ ವಾಲ್ಮೀಕಿ ಸಂಘಟನೆ ವತಿಯಿಂದ ವಾಲ್ಮೀಕಿ ಜಯಂತ್ಯೋತ್ಸವವನ್ನು ನಗರದ ಮಥುರಾ ಕಂಫರ್ಟ್ಸ್‌ನಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕಲಾರಾಧಕ, ಕಲಾವಿದ ಪಾಡಿಗಾರು ಲಕ್ಷ್ಮೀ ನಾರಾಯಣ ಉಪಾಧ್ಯ ಅವರನ್ನು ಗೌರವಿಸಿ ಅಭಿನಂದಿಸಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಉಡುಪಿ ಜಿಲ್ಲಾ ಮಹರ್ಷಿ ವಾಲ್ಮೀಕಿ ಸಂಘಟನೆ ವತಿಯಿಂದ ವಾಲ್ಮೀಕಿ ಜಯಂತ್ಯೋತ್ಸವವನ್ನು ನಗರದ ಮಥುರಾ ಕಂಫರ್ಟ್ಸ್‌ನಲ್ಲಿ ಆಯೋಜಿಸಲಾಗಿತ್ತು. ಸಮಾಜ ಸೇವಕ ವಿಶ್ವನಾಥ ಶೆಣೈ, ವಾಲ್ಮೀಕಿ ಮಹರ್ಷಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಕಾರ್ಯಕ್ರಮದಲ್ಲಿ ಕಲಾರಾಧಕ, ಕಲಾವಿದ ಪಾಡಿಗಾರು ಲಕ್ಷ್ಮೀ ನಾರಾಯಣ ಉಪಾಧ್ಯ ಅವರನ್ನು ಗೌರವಿಸಿ ಅಭಿನಂದಿಸಲಾಯಿತು.ಮುಖ್ಯ ಅತಿಥಿಯಾಗಿ ಭಾರತ್ ಸ್ಕೌಟ್ ಜಿಲ್ಲಾ ಆಯುಕ್ತ ಜನಾರ್ದನ್ ಕೊಡವೂರು ಮಾತನಾಡಿ, ಸಂಘಟನೆಯಲ್ಲಿ ಬಲವಿದೆ. ಒಟ್ಟಾಗಿ ಸೇರಿ ಕೆಲಸ ಮಾಡಿದಾಗ ಸರ್ಕಾರದ ಮಟ್ಟಕ್ಕೂ ನಮ್ಮ ಬೇಡಿಕೆಯನ್ನು ತಲುಪಿಸಲು ಸಾಧ್ಯವಿದೆ ಎಂದರು.ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಅಧ್ಯಕ್ಷ ರವಿರಾಜ್ ಎಚ್.ಪಿ. ಮಾತನಾಡಿ, ಜಯಂತ್ಯೋತ್ಸವವನ್ನು ಆಚರಿಸುವ ಮೂಲಕ ಶ್ರೇಷ್ಠ ದಾರ್ಶನಿಕ ವಾಲ್ಮೀಕಿ ಮಹರ್ಷಿಯನ್ನು ನೆನಪಿಸುವ ಮಹತ್ ಕಾರ್ಯವನ್ನು ಮಾಡಿರುವುದು ಶ್ಲಾಘನೀಯ ಎಂದರು.ಮಹರ್ಷಿ ವಾಲ್ಮೀಕಿ ಸಂಘಟನೆಯ ಗೌರವಾಧ್ಯಕ್ಷ ಸಿದ್ದಬಸಯ್ಯ ಸ್ವಾಮೀಜಿ ಚಿಕ್ಕಮಠ ಉಪನ್ಯಾಸ ನೀಡಿದರು. ಈ ಸಂದರ್ಭ ಉಡುಪಿ ತಾಲೂಕು ಘಟಕದ ಗೌರವ ಕಾರ್ಯದರ್ಶಿ ರಂಜನಿ ವಸಂತ್, ನಗರಸಭಾ ಸದಸ್ಯೆ ಅಮೃತ ಕೃಷ್ಣಮೂರ್ತಿ, ಸಂಘದ ಪದಾಧಿಕಾರಿಗಳಾದ ಶಾಂತಪ್ಪ ದೊರೆ, ಆನಂದ ವಾಲ್ಮೀಕಿ, ಗೋಪಾಲ ದೇವದುರ್ಗ, ಶಿವರಾಜ್ ವಾಲಿಕಾರ್, ಕನಕ, ದೇವು ದೊರೆ, ಗೋಪಾಲ ದೊರೆ, ಸಂಗನಗೌಡ ಸಾತಿಹಾಳ ಉಪಸ್ಥಿತರಿದ್ದರು. ಉಡುಪಿ ತಾಲ್ಲೂಕು ಕಸಾಪ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು ಕಾರ್ಯಕ್ರಮ ನಿರೂಪಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.