ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳು ಕೇವಲ ಜಯಂತಿಗೆ ಸೀಮಿತಗೊಳಿಸದೆ, ಪ್ರತಿನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.
ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ
ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳು ಕೇವಲ ಜಯಂತಿಗೆ ಸೀಮಿತಗೊಳಿಸದೆ, ಪ್ರತಿನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.
ಪಟ್ಟಣದ ಗುರುಭವನದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪಟ್ಟಣದಲ್ಲಿ ೧.೫ ಕೋಟಿ ರು. ವೆಚ್ಚದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿದೆ.ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ ಮುಖ್ಯಮಂತ್ರಿಗಳಿಂದಲೇ ಉದ್ಘಾಟಿಸಲಾಗಿದೆ. ಭವನಕ್ಕೆ ಕಾಂಪೌಂಡ್ ನಿರ್ಮಿಸಲಾಗುವುದು ಎಂದರು.
ಉಪನ್ಯಾಸಕ ಡಾ.ಬಸವರಾಜ ನಾಗವ್ವನವರ ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರ ಸುಮಾರು ಮೂರು ಸಾವಿರ ವರ್ಷಗಳ ಹಿಂದಿನ ಜೀವನ ಮತ್ತು ಇತಿಹಾಸವನ್ನು ಇಂದಿನ ಪೀಳಿಗೆಗೆ ಪರಿಚಯಿಸಬೇಕಾಗಿದೆ ಎಂದರು.
ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಾಯಕ ಸಮುದಾಯದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಕಾರ್ಯಕ್ರಮದಲ್ಲಿ ಶಾಸಕರು ಸನ್ಮಾನಿಸಲಾಯಿತು.
ಸರ್ಕಾರಿ ಕಾರ್ಯಕ್ರಮಗಳಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಖಾಯಂ ಆಹ್ವಾನ.ಆದರೆ ವಾಲ್ಮೀಕಿ ಜಯಂತಿಗೆ ಆಶಾ ಕಾರ್ಯಕರ್ತರು ಸಭೆಯಲ್ಲಿ ಆಗಮಿಸಿದ್ದರು. ನಾಯಕ ಸಮಾಜದ ಬಿಜೆಪಿಯಲ್ಲಿ ಗುರುತಿಸಿಕೊಂಡ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದ ಮುಖಂಡರು ಸಭೆಗೆ ಬಂದಿರಲಿಲ್ಲ.
ವಾಲ್ಮೀಕಿ ಜಯಂತಿಗೆ ಗಣ್ಯರು ಗೈರು:
ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಬೇಕಿದ್ದ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ, ಸಂಸದ ಸುನೀಲ್ ಬೋಸ್, ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ, ಹನೂರು ಶಾಸಕ ಎಂ.ಆರ್.ಮಂಜುನಾಥ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ,ಮಧು ಜಿ.ಮಾದೇಗೌಡ, ಕೆ.ವಿವೇಕಾನಂದ,ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪಿ.ಮರಿಸ್ವಾಮಿ,ಜಿಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರ ಅಧ್ಯಕ್ಷ ಹೆಚ್.ಬಿ.ಚಂದ್ರು,ಪುರಸಭೆ ಆಡಳಿತಾಧಿಕಾರಿ, ಉಪ ವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ತಾಪಂ ಆಡಳಿತಾಧಿಕಾರಿ ಹಾಗೂ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಬಿ.ಆರ್.ಗಿರೀಶ್ ಗೈರಾಗಿದ್ದರು.
ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ತಾಪಂ ಮಾಜಿ ಉಪಾಧ್ಯಕ್ಷ ಬಂಗಾರನಾಯಕ, ತಹಸೀಲ್ದಾರ್ ತನ್ಮಯ್ ಎಂ.ಎಸ್., ತಾಪಂ ಇಒ ಷಣ್ಮುಖಂ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮೋಹನ್ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ. ಅಲೀಂ ಪಾಷಾ, ಸಿಡಿಪಿಒ ಹೇಮಾವತಿ ಎಂ,ತಾಪಂ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು, ಪುರಸಭೆ ಮಾಜಿ ಉಪಾಧ್ಯಕ್ಷರಾದ ಲಿಂಗರಾಜು,ಶ್ರೀನಿವಾಸ್ ಕಣ್ಣಪ್ಪ, ಸುರೇಶ್ ಕಾರ್ಗಳ್ಳಿ, ಅಣ್ಣಯ್ಯಸ್ವಾಮಿ, ಮಾಜಿ ಸದಸ್ಯ ಎನ್.ಕುಮಾರ್, ತಾಪಂ ವಕೀಲರ ಸಂಘದ ಅಧ್ಯಕ್ಷ ವೆಂಕಟೇಶ್, ಗ್ರಾಪಂ ಮಾಜಿ ಸದಸ್ಯ ಹಂಗಳ ವೃಷಬೇಂದ್ರ, ನಾಯಕ ಸಮುದಾಯದ ಮುಖಂಡರು ಹಾಜರಿದ್ದರು.
ವಾಲ್ಮೀಕಿ ಜಯಂತೀಲಿ ಬಿಜೆಪಿಗರ ಸುಳಿವೇ ಇರಲಿಲ್ಲ!
ಗುಂಡ್ಲುಪೇಟೆ : ಪಟ್ಟಣದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸರ್ಕಾರಿ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಹಾಗೂ ಶಾಸಕರು ಹೊರತು ಪಡಿಸಿದರೆ ಕಾಂಗ್ರೆಸ್ ಕಾರ್ಯಕರ್ತರೇ ದಂಡೇ ಇತ್ತು.ಆದರೆ ವಾಲ್ಮೀಕಿ ಜಯಂತಿಗೆ ಬಿಜೆಪಿ ಕಾರ್ಯಕರ್ತರಾಗಲಿ, ಮುಖಂಡರಾಗಲಿ ಸುಳಿಯಲೇ ಇಲ್ಲ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.