ರಾಮನಗರ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಹಾಶಿವರಾತ್ರಿ ಹಬ್ಬವನ್ನು ಭಾನುವಾರ ಜನರು ಶ್ರದ್ಧಾಭಕ್ತಿಯಿಂದ ಆಚರಿಸಿದರು.
ಭಕ್ತರು ಬೆಳಗ್ಗೆಯಿಂದಲೇ ಶಿವನ ದೇಗುಲಗಳಲ್ಲಿ ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಪುನೀತರಾದರು. ಮಹಿಳೆಯರು ಜಾಗರಣೆ ವೃತಾಚರಣೆ ಮಾಡಿದರು. ಶಿವರಾತ್ರಿ ಅಂಗವಾಗಿ ದೇವಾಲಯಗಳಲ್ಲಿ ಹರಿಕಥೆ, ಶಿವ ಪಾರಾಯಣ, ಜಪ-ತಪಗಳು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ರಾತ್ರಿಯಿಡೀ ಸಂಭ್ರಮದಿಂದ ನೆರವೇರಿದವು.
ರಾಮನಗರದ ಐಜೂರಿನ ಮಲ್ಲೇಶ್ವರ ದೇವಸ್ಥಾನದಲ್ಲಿ ಹಬ್ಬದ ಪ್ರಯುಕ್ತ ವಿಶೇಷ ಅಲಂಕಾರಗೊಳಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಭಕ್ತರು ಬೆಳಗ್ಗೆಯಿಂದಲೇ ದೇವರ ದರ್ಶನ ಪಡೆಯಲು ಸಾಲುಗಟ್ಟಿ ನಿಂತಿದ್ದರು. ದೇವರಿಗೆ ವಿಷೇಶವಾಗಿ ಹೋಮಹವನಗಳನ್ನು ನೆರವೇರಿಸಲಾಯಿತು.ವಿಜಯನಗರದಲ್ಲಿನ ಶ್ರೀ ಮುನೇಶ್ವರ ಸ್ವಾಮಿ ದೇವಾಲಯ, ಶಿವನಹಳ್ಳಿ ವೀರಭದ್ರಸ್ವಾಮಿ, ಧಾರಾಪುರ ಬಳಿಯಿರುವ ಅರ್ಧನಾರೀಶ್ವರ ದೇವಾಲಯ, ಬಿಡದಿ ಪಟ್ಟಣದ ಬಸವೇಶ್ವರ ದೇವಾಲಯ, ಶಿವಲಿಂಗಸ್ವಾಮಿ ದೇವಾಲಯ, ಕೇತಗಾನಹಳ್ಳಿಯ ಕಗ್ಗಲ್ ಬೀರೇಶ್ವರಸ್ವಾಮಿ ದೇಗುಲ, ನಿಂಗೇಗೌಡನದೊಡ್ಡಿಯ ಪುರಾತನ ಶಿವನ ದೇವಾಲಯ, ಬಿಲ್ಲಕೆಂಪನಹಳ್ಳಿ ಮಹದೇಶ್ವರ ದೇವಾಲಯ, ಬಾನಂದೂರಿನ ಬಸವೇಶ್ವರ ಮತ್ತು ಮಹದೇಶ್ವರ ದೇವಾಲಯಗಳಲ್ಲಿ ಮಹಾ ಶಿವರಾತ್ರಿಯ ಪ್ರಯುಕ್ತ ವಿಶೇಷ ಪೂಜೆಗಳು ದಿನಪೂರ್ತಿ ನೆರೆವೇರಿದವು.
ಗ್ರಾಮೀಣ ಪ್ರದೇಶಗಳಲ್ಲಿಯೂ ಈಶ್ವರ, ಶಿವನ, ಶನೇಶ್ವರ ದೇಗುಲಗಳಲ್ಲಿ ಮಹಾಶಿವರಾತ್ರಿ ಅಂಗವಾಗಿ ವಿಶೇಷ ಪೂಜೆ, ಹೋಮ, ಅಭಿಷೇಕ ನಡೆದವು. ಭಕ್ತರು ದೇಗುಲಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಶಿವನ ದೇಗುಲಗಳಲ್ಲಿ ಗಂಗಾಜಲವನ್ನು ಭಕ್ತರಿಗೆ ವಿತರಿಸಲಾಯಿತು.ಜಿಲ್ಲೆಯ ಎಲ್ಲ ಶಿವಾಲಯಗಳಲ್ಲೂ ಶಿವರಾತ್ರಿ ಹಬ್ಬದ ಅಂಗವಾಗಿ ಬೆಳಗ್ಗೆಯಿಂದಲೇ ದೇವರಿಗೆ ಅಭಿಷೇಕ, ಅರ್ಚನೆ, ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ಸಂಜೆ ಪೌರಾಣಿಕ, ಐತಿಹಾಸಿಕ, ಧಾರ್ಮಿಕ ಮತ್ತು ಆಧ್ಯಾತ್ಮಿಕ ಹಿನ್ನಲೆಯಿರುವ ನೃತ್ಯ, ನಾಟಕಗಳು, ಭಜನೆ, ಗಾಯನ, ವಾದ್ಯಮೇಳ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಭಕ್ತರು ದೇವರ ದರ್ಶನ ಪಡೆದು ಪುನೀತರಾದರು.
15ಕೆಆರ್ ಎಂಎನ್ 3.ಜೆಪಿಜಿರಾಮನಗರ ತಾಲೂಕಿನ ಧಾರಾಪುರ ಬಳಿಯಿರುವ ಅರ್ಧನಾರೀಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಭಕ್ತರು ದರ್ಶನ ಪಡೆದರು.