15ರಿಂದ ಮಹಾಶಿವರಾತ್ರಿ ಮಹೋತ್ಸವ: ಜಯಂತಿ ಅಕ್ಕ

KannadaprabhaNewsNetwork |  
Published : Feb 13, 2026, 02:15 AM IST
 | Kannada Prabha

ಸಾರಾಂಶ

ಫೆ. 15ರಂದು ಸಂಜೆ ಉದ್ಘಾಟನಾ ಸಮಾರಂಭ ಜರುಗಲಿದ್ದು, ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ ಮಹಾದ್ವಾರವನ್ನು ಉದ್ಘಾಟಿಸಲಿದ್ದಾರೆ.

ಗದಗ: ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಫೆ. 15ರಿಂದ 17ರ ವರೆಗೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ಮಹಾಶಿವರಾತ್ರಿ ಮಹೋತ್ಸವ ಹಾಗೂ ನಾಗೇಶ್ವರ ಜ್ಯೋತಿರ್ಲಿಂಗ ದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಈಶ್ವರೀಯ ವಿಶ್ವವಿದ್ಯಾಲಯದ ಜಯಂತಿ ಅಕ್ಕ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗುಜರಾತಿನ ದ್ವಾರಕಾ ಸಮೀಪದ ದಾರುಕಾವನದಲ್ಲಿರುವ ಪ್ರಸಿದ್ಧ ನಾಗೇಶ್ವರ ಜ್ಯೋತಿರ್ಲಿಂಗದ ಮಾದರಿಯನ್ನು ಇಲ್ಲಿ ನಿರ್ಮಿಸಲಾಗುತ್ತಿದ್ದು, ಸಾರ್ವಜನಿಕರಿಗೆ ಸ್ಥಳೀಯವಾಗಿಯೇ ದರ್ಶನ ಪಡೆಯುವ ಅವಕಾಶ ಕಲ್ಪಿಸಲಾಗಿದೆ. ಪ್ರತಿದಿನ ಸಂಜೆ 5 ರಿಂದ ರಾತ್ರಿ 10ರ ವರೆಗೆ ಸಾರ್ವಜನಿಕರಿಗೆ ಪ್ರವೇಶಾವಕಾಶ ಇರಲಿದೆ ಎಂದರು.

ಫೆ. 15ರಂದು ಸಂಜೆ ಉದ್ಘಾಟನಾ ಸಮಾರಂಭ ಜರುಗಲಿದ್ದು, ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ ಮಹಾದ್ವಾರವನ್ನು ಉದ್ಘಾಟಿಸಲಿದ್ದಾರೆ. ವಿಧಾನಪರಿಷಥ್ ಸದಸ್ಯ ಎಸ್.ವಿ. ಸಂಕನೂರ ದೀಪಾರಾಧನೆ ನೆರವೇರಿಸಲಿದ್ದಾರೆ. ರಾಜಯೋಗಿನಿ ಬ್ರಹ್ಮಕುಮಾರಿ ಜಯಂತಿ ಅಕ್ಕ ಆಧ್ಯಾತ್ಮಿಕ ರಹಸ್ಯದ ಕುರಿತು ಮಾತನಾಡುವರು.

​ಫೆ. 16ರಂದು ಕಾಯಕ ಯೋಗಿಗಳಿಗೆ ಗೌರವಾರ್ಪಣಾ ಮಹೋತ್ಸವ ನಡೆಯಲಿದೆ. ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ್ ಕೆ.ಆರ್. ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸುವರು. ​ಫೆ. 17ರಂದು ಸಾಂಸ್ಕೃತಿಕ ಮಹೋತ್ಸವದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ನೆರವೇರಿಸುವರು. ಅಂದು ಸಂಜೆ ನಗರದ ವಿವಿಧ ನೃತ್ಯ ಮತ್ತು ಸಂಗೀತ ಅಕಾಡೆಮಿಗಳಿಂದ ಕಲಾ ಪ್ರದರ್ಶನ ನಡೆಯಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ರೇಖಾ ಅಕ್ಕ, ಜೋಶ್ನಾ ಮುಂತಾದವರು ಇದ್ದರು.​ವಿಶೇಷ ಮೆರವಣಿಗೆ

ಮಹೋತ್ಸವದ ಅಂಗವಾಗಿ ಫೆ. 14ರಂದು ನಗರದ ಮುಖ್ಯ ರಸ್ತೆಗಳಲ್ಲಿ ಭವ್ಯ ಜ್ಯೋತಿರ್ಲಿಂಗ ರಥ ಹಾಗೂ 2026ರ ಸಂಕೇತವಾಗಿ 26 ಕಾರುಗಳ ಮೆರವಣಿಗೆ ನಡೆಯಲಿದೆ. ಅಂದು ಬೆಳಗ್ಗೆ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಶಿವ ಧ್ವಜಾರೋಹಣ ನೆರವೇರಲಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುವ ಪೀಳಿಗೆ ಪೋಷಕಾಂಶಗಳ ಕೊರತೆ
ಪುಟ 2ಕ್ಕೆ ಬಾಟಮ್....ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ