ಮಹಾಶಿವರಾತ್ರಿ: 450 ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ

KannadaprabhaNewsNetwork |  
Published : Mar 06, 2024, 02:17 AM IST
ಸಾರಿಗೆ ಬಸ್‌ | Kannada Prabha

ಸಾರಾಂಶ

ಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.ಈ ಹಬ್ಬ ಮುಗಿದ ನಂತರ ಮರಳಿ ಹೋಗುವವರಿಗೆ ಬೆಂಗಳೂರು ಮತ್ತು ಇತರೆ ಸ್ಥಳಗಳಿಗೆ ಸಂಚಾರ ದಟ್ಟಣೆಗನುಗುಣವಾಗಿ ಹೆಚ್ಚುವರಿ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ.

ಕನ್ನಡಪ್ರಭ ವಾರ್ತೆ ಕಲಬುರಗಿ

2024ನೇ ಸಾಲಿನ ಮಹಾಶಿವರಾತ್ರಿ ಹಾಗೂ ಶ್ರೀಶೈಲ ಮಲ್ಲಿಕಾರ್ಜನ ದೇವರ ರಥೋತ್ಸವ ನಿಮಿತ್ತ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ತಾಲ್ಲೂಕು/ಜಿಲ್ಲಾ ಕೇಂದ್ರಗಳಿಂದ ಬೆಂಗಳೂರು, ಶ್ರೀಶೈಲಂ ಮತ್ತು ಇತರೆ ಪ್ರಮುಖ ಸ್ಥಳಗಳಿಗೆ ಒಟ್ಟು 450 ಹೆಚ್ಚುವರಿ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದ್ದು, ಸಾರ್ವಜನಿಕ ಪ್ರಯಾಣಿಕರು ಇದರ ಸದುಪಯೋಗಪಡೆದುಕೊಳ್ಳಬೇಕೆಂದು ಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ಈ ಹಬ್ಬ ಮುಗಿದ ನಂತರ ಮರಳಿ ಹೋಗುವವರಿಗೆ ಬೆಂಗಳೂರು ಮತ್ತು ಇತರೆ ಸ್ಥಳಗಳಿಗೆ ಸಂಚಾರ ದಟ್ಟಣೆಗನುಗುಣವಾಗಿ ಹೆಚ್ಚುವರಿ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ. ಮಾ.10ರ ವರೆಗೆ ಶ್ರೀಶೈಲ ಮಲ್ಲಿಕಾರ್ಜುನ ದೇವರ ಜಾತ್ರೆಗೆ ರಾಯಚೂರು ವಿಭಾಗದ ವ್ಯಾಪ್ತಿಯ ವಿವಿಧ ತಾಲ್ಲೂಕು ಸ್ಥಳಗಳಿಂದ ಹಾಗೂ ಮಾ.6ರಿಂದ 11ರ ವರೆಗೆ ನಿಗಮದ ವ್ಯಾಪ್ತಿಯ ಇತರೆ ತಾಲ್ಲೂಕು/ಜಿಲ್ಲಾ ಸ್ಥಳಗಳಿಂದ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ.

ಮಾ.7ರಿಂದ 9ರ ವರೆಗೆ ಬೆಂಗಳೂರಿನಿಂದ ಇತರೆ ಸ್ಥಳಗಳಿಗೆ ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಮಾಡಲಾಗುತ್ತಿದೆ. ಹಬ್ಬದ ನಂತರ ಮಾ.10ರಿಂದ 12ರ ವರೆಗೆ ಕ.ಕ.ರ.ಸಾ ನಿಗಮದ ವ್ಯಾಪ್ತಿಯ ವಿವಿಧ ವಿಭಾಗಗಳಿಂದ ಬೆಂಗಳೂರು ಮತ್ತು ಇತರೆ ಸ್ಥಳಗಳಿಗೆ ಸಂಚಾರ ದಟ್ಟಣೆಗನುಗುಣವಾಗಿ ಹೆಚ್ಚುವರಿ ಬಸ್‍ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ಕರ್ನಾಟಕ ಹಾಗೂ ಅಂತರ ರಾಜ್ಯದಲ್ಲಿ ಇರುವ 16 ಗಣಕೀಕೃತ ಬುಕ್ಕಿಂಗ್ ಕೌಂಟರ್‍ಗಳ ಮುಖಾಂತರ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.

ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್ ಅಪ್ ಪಾಯಿಂಟ್‍ನ ಹೆಸರನ್ನು ಗಮನಿಸಬೇಕು. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟ್ ಕಾಯ್ದಿರಿಸಿದಲ್ಲಿ ಶೇ.5ರಷ್ಟು ರಿಯಾಯತಿ ನೀಡಲಾಗುವುದಲ್ಲದೇ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ.10 ರಿಯಾಯತಿ ನೀಡಲಾಗುತ್ತದೆ. ಇದಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ