ಸತೀಶ್ ಜವರೇಗೌಡರಿಗೆ ಮಹಾತ್ಮಗಾಂಧಿ ಸದ್ಭಾವನಾ ಪ್ರಶಸ್ತಿ

KannadaprabhaNewsNetwork |  
Published : Sep 21, 2024, 01:51 AM ISTUpdated : Sep 21, 2024, 01:52 AM IST
18ಕೆಎಂಎನ್ ಡಿ13 | Kannada Prabha

ಸಾರಾಂಶ

ಸಾಂಸ್ಕೃತಿಕ ಸಂಘಟನೆ, ಸೃಜನಶೀಲ ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಟಿ.ಸತೀಶ್ ಜವರೇಗೌಡರು ಸಲ್ಲಿಸಿರುವ ಎರಡು ದಶಕಗಳ ಗಣನೀಯ ಸೇವೆ, ಸಾಧನೆಯನ್ನು ಪರಿಗಣಿಸಿ ಮಹಾತ್ಮಗಾಂಧಿ ಸದ್ಭಾವನಾ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಸಾಹಿತಿ ಮಂಗಲ ಟಿ.ಸತೀಶ್ ಜವರೇಗೌಡರಿಗೆ ಬೆಂಗಳೂರಿನ ಕನ್ನಡಾಂಬೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘ ಮತ್ತು ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಕೊಡಮಾಡುವ ರಾಜ್ಯ ಮಟ್ಟದ ರಾಷ್ಟ್ರಪಿತ ಮಹಾತ್ಮಗಾಂಧಿ ಸದ್ಭಾವನಾ ಪ್ರಶಸ್ತಿ ದೊರೆತಿದೆ.

ಸಾಂಸ್ಕೃತಿಕ ಸಂಘಟನೆ, ಸೃಜನಶೀಲ ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಟಿ.ಸತೀಶ್ ಜವರೇಗೌಡರು ಸಲ್ಲಿಸಿರುವ ಎರಡು ದಶಕಗಳ ಗಣನೀಯ ಸೇವೆ, ಸಾಧನೆಯನ್ನು ಪರಿಗಣಿಸಿ ಮಹಾತ್ಮಗಾಂಧಿ ಸದ್ಭಾವನಾ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಚಲನಚಿತ್ರ ನಿರ್ದೇಶಕ ಡಾ.ಗುಣವಂತ ಮಂಜು ತಿಳಿಸಿದ್ದಾರೆ.

ಸೆ.21ರಂದು ಮೈಸೂರಿನ ವಿಜಯನಗರದ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯಲಿರುವ ಸುಗಮ ಸಂಗೀತ, ಜಾನಪದ ಗಾಯನ ಮತ್ತು ಭರತನಾಟ್ಯ ಪ್ರದರ್ಶನ ಸಮಾರಂಭದಲ್ಲಿ ಪ್ರತಿಷ್ಠಿತ ಪಂಪ ಪ್ರಶಸ್ತಿ ಪುರಸ್ಕೃತ ಪ್ರಸಿದ್ಧ ಸಾಹಿತಿ ಡಾ.ಸಿ.ಪಿ. ಕೃಷ್ಣಕುಮಾರ್ (ಸಿಪಿಕೆ) ಹಾಗೂ ಪ್ರಸಿದ್ಧ ಶಿಕ್ಷಣ ತಜ್ಞ, ಹಿರಿಯ ರಾಜಕೀಯ ವಿಶ್ಲೇಷಕ ಮತ್ತು ಸಾಹಿತಿ ಪ್ರೊ. ಕೆ.ಇ. ರಾಧಕೃಷ್ಣ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.ಕಲಾವಿದರಿಗೆ ಮಾಶಾಸನ 3 ಸಾವಿರಕ್ಕೆ ಹೆಚ್ಚಳ ಸ್ವಾಗತಮಳವಳ್ಳಿ: ಸಂಕಷ್ಟದಲ್ಲಿರುವ ಕಲಾವಿದರ ಮಾಶಾಸನವನ್ನು 3 ಸಾವಿರಕ್ಕೆ ಹೆಚ್ಚಳ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಧಾರವನ್ನು ಡಾ.ರಾಜ್ ಕುಮಾರ್ ಕಲಾ ಸಂಘದ ಅಧ್ಯಕ್ಷ ದೊಡ್ಡಯ್ಯ ಸ್ವಾಗತಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿರುವ ಬಹುತೇಕ ಕಲಾವಿದರು ನಮ್ಮ ಕುಟುಂಬದ ನಿರ್ವಹಣೆಗೆ ಆರ್ಥಿಕ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ಕಷ್ಟಗಳಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಾವಿದರಿಗೆ ನಾಗರಿಕ ಸೌಲಭ್ಯಗಳನ್ನು ಒದಗಿಸಿಕೊಡಲು ಮುಂದಾಗಲಿ ಎಂದು ಕೋರಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!