ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿ 157ನೇ ಜನ್ಮದಿನಾಚರಣೆ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 122ನೇ ಜನ್ಮದಿನಾಚರಣೆಯನ್ನು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಆಚರಿಸಲಾಯಿತು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಅವರು ಮಹಾತ್ಮಾ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.ಉಡುಪಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಯಾನಂದ್ ಕಿದಿಯೂರು ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಕುರಿತು ಉಪನ್ಯಾಸ ನೀಡಿದರುಮಾಜಿ ಸಚಿವ ವಿನಯಕುಮಾರ್ ಸೊರಕೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಫೂರ್, ಮಾಜಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್, ನಾಯಕರಾದ ದಿನೇಶ್ ಪುತ್ರನ್, ಮಹಾಬಲ ಕುಂದರ್, ನರಸಿಂಹಮೂರ್ತಿ, ಭುಜಂಗ ಶೆಟ್ಟಿ, ಕೇಶವ ಕೋಟ್ಯಾನ್, ಹರೀಶ್ ಶೆಟ್ಟಿ ಪಾಂಗಳ, ಕುಶಲ್ ಶೆಟ್ಟಿ, ಕೀರ್ತಿ ಶೆಟ್ಟಿ, ಅಮೃತ್ ಶೆಣೈ, ಯುವರಾಜ್ ಪುತ್ತೂರು, ಭಾಸ್ಕರ್ ರಾವ್ ಕಿದಿಯೂರು, ವಿಶ್ವಾಸ್ ಅಮೀನ್, ಪ್ರಖ್ಯಾತ್ ಶೆಟ್ಟಿ, ಪ್ರಶಾಂತ್ ಜತ್ತನ್ನ, ಮೀನಾಕ್ಷಿ ಮಾಧವ ಬನ್ನಂಜೆ, ಮಮತಾ ಶೆಟ್ಟಿ ಇನ್ನಿತರರು ಉಪಸ್ಥಿತರಿದ್ದರು. ಉಡುಪಿ ಬ್ಲಾಕ್ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಕುಮಾರ್ ಮಂಚಿ ಕಾರ್ಯಕ್ರಮ ನಿರೂಪಿಸಿ, ಭರತ್ ಕುಮಾರ್ ಅವರು ಧನ್ಯವಾದ ಸಲ್ಲಿಸಿದರು