ಕನ್ನಡಪ್ರಭ ವಾರ್ತೆ ಉಡುಪಿ
ಅವರು ಬುಧವಾರ ಜಿಲ್ಲಾಡಳಿತ ವತಿಯಿಂದ ಇತರ ಸಂಘಟನೆಗಳ ಸಹಯೋಗದಲ್ಲಿ ನಗರದ ಅಜ್ಜರಕಾಡು ಪುರಭವನದಲ್ಲಿ ನಡೆದ 155 ನೇ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಚರಕದ ರಾಟೆಗೆ ನೂಲು ಹಾಕುವ ಮೂಲಕ ಚಾಲನೆ ನೀಡಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗಾಂಧೀಜಿಯವರ ಆತ್ಮಚರಿತ್ರೆಯನ್ನು ಓದಿದಾಗ ಅವರು ವಿಶ್ವ ನಾಯಕನಾಗಿ ಬೆಳೆಯುವ ಹಂತವನ್ನು ಹಾಗೂ ಇತರರ ಲೇಖನಗಳಲ್ಲಿ ಅವರ ಬದುಕಿನ ಏಳು-ಬೀಳುಗಳನ್ನು ಸಂಕ್ಷಿಪ್ತವಾಗಿ ಗಮನಿಸಿದಾಗ ಒಬ್ಬ ಸಾಮಾನ್ಯ ವ್ಯಕ್ತಿ ಮಹಾತ್ಮರಾಗಿರುವುದನ್ನು ಕಾಣಬಹುದಾಗಿದೆ ಎಂದರು.ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ ಕಾರ್ಯಕ್ರಮ ಉದ್ಘಾಟಿಸಿದರು. ಅತಿಥಿಯಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಮುಖ್ಯ ಆಯುಕ್ತ ಜಯಕರ ಶೆಟ್ಟಿ ಇಂದ್ರಾಳಿ ಉಪಸ್ಥಿತರಿದ್ದರು.
ಈ ಸಂದರ್ಭ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ಆಯೋಜಿಸಲಾದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು ಹಾಗೂ ಗಾಂಧೀಜಿಯವರ ಸವಿನೆನಪುಗಳ ಭಿತ್ತಿಪತ್ರವನ್ನು ಬಿಡುಗಡೆಗೊಳಿಸಲಾಯಿತು.
ಕಾರ್ಯಕ್ರಮಕ್ಕೂ ಮುನ್ನ ಬೆಳಗ್ಗೆ ನಗರದ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಡಿಸಿ, ಎಡಿಸಿ, ಎಸ್ಪಿ, ಸಿಇಓ ಭಾಗವಹಿಸಿದರು. ನಂತರ ನಗರದ ಪ್ರಮುಖ ಬೀದಿಗಳಲ್ಲಿ ಸ್ವಚ್ಛತಾ ನಡಿಗೆ ನಡೆಯಿತು. ನಂತರ ಅಜ್ಜರಕಾಡು ಭುಜಂಗ ಪಾರ್ಕ್ ನಲ್ಲಿ ಗಾಂಧಿ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಲಾಯಿತು.