ಕನ್ನಡಪ್ರಭ ವಾರ್ತೆ ಗದಗ
ನಗರದ ತಾಪಂ ಸಭಾಭವನದಲ್ಲಿ ಹಮ್ಮಿಕೊಂಡ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯ ಸೂಚನೆಯಂತೆ ರಾಜ್ಯ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯವು ಆದೇಶ ಮಾಡಿದೆ. ಗ್ರಾಮೀಣ ಜನರಿಗೆ ಸರ್ಕಾರಿ ಸೇವೆಗಳು ಹಾಗೂ ಸವಲತ್ತುಗಳು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಕೇಂದ್ರ ಸರ್ಕಾರ ಹಲವು ಪ್ರಮುಖ ಸುಧಾರಣೆಗಳು ಮತ್ತು ಕಾರ್ಯಕ್ರಮ ಜಾರಿಗೆ ತರಲು ನಿರ್ಧರಿಸಿದೆ. ಗ್ರಾಮೀಣ ಪ್ರದೇಶದಲ್ಲಿ ವ್ಯಾಪಕ ಜನಜಾಗೃತಿ ಮೂಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಗ್ರಾಮಸಭೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರೇರೇಪಿಸಲು ಹಾಗೂ ಸರ್ಕಾರದ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ, ಜನರ ಯೋಜನೆ ಅಭಿಯಾನದ ಅಂಗವಾಗಿ ಮಹಾತ್ಮಗಾಂಧಿ ಸುಧಾರಣೋತ್ಸವವನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದರು.
ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್ಗಾರ್ ಆ್ಯಂಡ್ ಆಜೀವಿಕ ಮಿಷನ್ (ಗ್ರಾಮೀಣ) ಅಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ 2027-28ನೇ ಸಾಲಿನ ಕಾರ್ಮಿಕ ಆಯವ್ಯಯವನ್ನು ಮತ್ತು ಗ್ರಾಪಂ ಅಭಿವೃದ್ಧಿ ಯೋಜನೆಯೊಂದಿಗೆ ಸಮನ್ವಯಗೊಳಿಸಿ ಸಿದ್ಧಪಡಿಸಬೇಕಾಗಿರುತ್ತದೆ. ಈ ಯೋಜನೆಯಡಿ ಅನುಷ್ಠಾನ ಇಲಾಖೆಗಳ ಒಗ್ಗೂಡಿಸುವಿಕೆ ಮೂಲಕ ಸ್ಯಾಚುರೇಶನ್ ಆಧಾರಿತವಾಗಿ ಗ್ರಾಮೀಣ ಮೂಲಸೌಕರ್ಯಗಳನ್ನು ಸೃಜಿಸುವುದು ಕಡ್ಡಾಯವಾಗಿರುತ್ತದೆ ಎಂದರು.ಗ್ರಾಪಂ ಮಟ್ಟದಲ್ಲಿ ಅನುಷ್ಠಾನಗೊಳಿಸುವ ಕಾಮಗಾರಿಗಳು ಸೇರಿದಂತೆ ಒಗ್ಗೂಡಿಸುವಿಕೆ ಕಾಮಗಾರಿಗಳನ್ನು ಯುಕ್ತಧಾರ ತಂತ್ರಾಂಶದ ಮೂಲಕ ಗುರುತಿಸಿ, ಸ್ಥಳ ಪರಿಶೀಲನೆ ನಡೆಸಿ, ತಂತ್ರಾಂಶದಲ್ಲಿ ಇಂಧೀಕರಿಸಬೇಕಿದೆ. ಈ ಸಂಬಂಧ ಈಗಾಗಲೇ ಅನುಷ್ಠಾನ ಹಂತದ ಅಧಿಕಾರಿಗಳಿಗೆ ಅಗತ್ಯ ತರಬೇತಿ ನೀಡಲಾಗಿದೆ. ತರಬೇತಿಯಲ್ಲಿ ಸೂಚಿಸಿದ ನಿರ್ದೇಶನಗಳಂತೆ ಕ್ರಮ ಕೈಗೊಳ್ಳುವುದು ಕಡ್ಡಾಯವಾಗಿದೆ ಎಂದರು.
ಗ್ರಾಮಸಭೆಗಳ ಆಯೋಜನೆ ಮತ್ತು ಅನುಮೋದನೆ:
ಜಿಪಂ ಎಡಿಪಿಸಿ ಕಿರಣಕುಮಾರ ಎಸ್.ಎಚ್. ವಿಕಸಿತ ಗ್ರಾಪಂ ಪ್ಲಾನ್ ಕುರಿತು ಮಾಹಿತಿ ನೀಡಿದರು.