ಮಹಾತ್ಮನ ಶಾಂತಿ, ಶಾಸ್ತ್ರೀಜೀ ಅವರ ಕ್ರಾಂತಿ ಮರೆಯಬಾರದು

KannadaprabhaNewsNetwork |  
Published : Oct 03, 2024, 01:18 AM IST
 ಗುಬ್ಬಿ  ತಾಲೂಕು ಆಡಳಿತ ಸೌಧದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ 155 ನೇ ಹಾಗೂ ದೇಶದ ಎರಡನೇ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿಯವರ 120 ನೇ ಜಯಂತಿಯನ್ನು ತಹಶೀಲ್ದಾರ್ ಆರತಿ ಬಿ. ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. | Kannada Prabha

ಸಾರಾಂಶ

ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ 155 ನೇ ಹಾಗೂ ದೇಶದ ಎರಡನೇ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿಯವರ 120 ನೇ ಜಯಂತಿಯನ್ನು ಗುಬ್ಬಿ ತಾಲೂಕು ಆಡಳಿತ ಸೌಧದಲ್ಲಿ ತಹಶೀಲ್ದಾರ್ ಆರತಿ ಬಿ. ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.

ಕನ್ನಡ ಪ್ರಭ ವಾರ್ತೆ ಗುಬ್ಬಿ

ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ 155 ನೇ ಹಾಗೂ ದೇಶದ ಎರಡನೇ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿಯವರ 120 ನೇ ಜಯಂತಿಯನ್ನು ತಾಲೂಕು ಆಡಳಿತ ಸೌಧದಲ್ಲಿ ತಹಶೀಲ್ದಾರ್ ಆರತಿ ಬಿ. ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.

ತಮ್ಮ ಜೀವನದುದ್ದಕ್ಕೂ ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷ್ ಆಡಳಿತದ ವಿರುದ್ಧ ಸಂಪೂರ್ಣ ತಾಳ್ಮೆ ಮತ್ತು ಧೈರ್ಯದಿಂದ ಹೋರಾಡಿದ ಅಹಿಂಸೆಯ ಬೋಧಕರು. ರಘುಪತಿ ರಾಘವ ರಾಜಾರಾಮ್ ಪತೀತ ಪಾವನ ಸೀತಾರಾಮ್ ಎಂಬ ಘೋಷ ವಾಕ್ಯದೊಂದಿಗೆ ಗಾಂಧೀಜಿಯವರು ಬ್ರಿಟಿಷರ ವಿರುದ್ಧ ಹೋರಾಡಿ ಅಹಿಂಸಾ ಮಾರ್ಗದ ಮೂಲಕ ವಿಶ್ವಕ್ಕೆ ಶಾಂತಿ ಮಂತ್ರವನ್ನು ಹೇಳಿಕೊಟ್ಟು, ನಮ್ಮ ದೇಶಕ್ಕೆ ಸ್ವಾತಂತ್ರ್ಯವನ್ನು ದೊರಕಿಸಿಕೊಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದರು. ಇವರ ಜನ್ಮ ದಿನವಾದ ಇಂದು ಅವರನ್ನು ಗೌರವಪೂರ್ವಕವಾಗಿ ಸ್ಮರಿಸುವ ಅಗತ್ಯತೆ ಇದೆ ಎಂದು ತಹಶೀಲ್ದಾರ್ ಆರತಿ ಬಿ. ತಿಳಿಸಿದರು.

ಜೈ ಜವಾನ್ ಜೈ ಕಿಸಾನ್ ಎಂಬ ಘೋಷಣೆಯಿಂದ ಸಮರ್ಥ ಭಾರತಕ್ಕೆ ನಾಂದಿ ಹಾಡಿದ ಸ್ವಾತಂತ್ರ್ಯ ಹೋರಾಟಗಾರರು, ದೇಶದ ಎರಡನೇ ಪ್ರಧಾನಮಂತ್ರಿಗಳು, ಭಾರತ ರತ್ನ ಪುರಸ್ಕೃತರಾದ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಸವಾಲಿನ ಸಮಯದಲ್ಲಿ ನಾಯಕತ್ವದ ಪ್ರದರ್ಶನ ಮಾಡುವ ಮೂಲಕ ಭಾರತದ ಇತಿಹಾಸದಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದಾರೆ. ಸಾರ್ವಜನಿಕ ಸೇವೆಗೆ ಅವರ ಸಮರ್ಪಣೆ ನಮಗೆಲ್ಲರಿಗೂ ಉಜ್ವಲ ಉದಾಹರಣೆಯಾಗಿದೆ. ದೇಶದ ಅಪ್ರತಿಮ ನಾಯಕ, ಮಹಾನ್ ದೇಶ ಭಕ್ತ, ಪ್ರಭುದ್ಧತೆಯಿಂದ ಸಮರ್ಪಕವಾಗಿ ಆಡಳಿತ ನಡೆಸಿ, ಸರಳ, ಸಜ್ಜನ ನಾಯಕರಾಗಿದ್ದ ಇವರು ದೇಶದ ರೈತ ಹಾಗೂ ಸೈನಿಕರ ಬಗ್ಗೆ ಮಹತ್ವವನ್ನು ಸಾರಿದ ಶಾಸ್ತ್ರಿಯವರನ್ನು ಗೌರವ ಪೂರ್ವಕವಾಗಿ ಸ್ಮರಿಸುತ್ತಾ, ಅವರು ಹಾಕಿಕೊಟ್ಟ ಮಾರ್ಗದಲ್ಲಿ ಪ್ರತಿಯೊಬ್ಬ ದೇಶಭಕ್ತರು ಸಾಗಬೇಕಿದೆ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಶಿರಸ್ತೇದಾರ್ ಗಳಾದ ಖಾನ್, ಕಲ್ಲೇಶ್, ಸಿಡಿಪಿಓ ಮಹೇಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕರುಣಾಕರ್ ಶೆಟ್ಟಿ,

ಕಂದಾಯ ನಿರೀಕ್ಷಕ ಎಸ್.ಕುಮಾರ್ ತಾಲೂಕು ಸಿಬ್ಬಂದಿ ಉಪಸ್ಥಿತರಿದ್ದರು.

2 ಜಿ ಯು ಬಿ 1

ಗುಬ್ಬಿತಾಲೂಕು ಆಡಳಿತ ಸೌಧದಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀಯವರ 120 ನೇ ಜಯಂತಿಯನ್ನು ಆಚರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇನ್ಫೋಸಿಸ್ ಮಾರಿದ್ದ ಜಮೀನು ನೋಂದಣಿ ಮಾಡಿಕೊಟ್ಟ ಸಬ್ ರಿಜಿಸ್ಟ್ರಾರ್ ಅಮಾನತು
ಬಳ್ಳಾರಿ ಗನ್‌ಮ್ಯಾನ್‌ ಸೇರಿ ಕೈ, ಬಿಜೆಪಿಯ 26 ಜನ ಸೆರೆ