ಕನ್ನಡಪ್ರಭ ವಾರ್ತೆ ಉಡುಪಿ
ಗುರುವಾರ ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜೈನ್ ಮಿಲನ್ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಭಗವಾನ್ ಮಹಾವೀರರ ಭಾವ ಚಿತ್ರಕ್ಕೆ ಪುಷ್ಪರ್ಚಾನೆ ಸಲ್ಲಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಪ್ರಸ್ತುತ ಸಮಯದಲ್ಲಿ ಮಹಾವೀರರ ಅಹಿಂಸ ತತ್ವಗಳು ಇನ್ನಷ್ಟು ಪ್ರಚಾರಗೊಳಿಸುವುದರಿಂದ ಜನರ ಶಾಂತಿಯುತ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದರು.ಪ್ರೊ. ವೃಷಭರಾಜ್ ಜೈನ್ ಉಪನ್ಯಾಸ ನೀಡಿ ಮಾತನಾಡಿ, ಸಾಮಾನ್ಯ ಜೀವನವನ್ನು ತೊರೆದು ಆಧ್ಯಾತ್ಮಿಕತೆ ಅಳವಡಿಸಿಕೊಂಡ ಮಹಾವೀರರು ಅಹಿಂಸೆಯೇ ಪರಮ ಧರ್ಮ ಎಂಬುದನ್ನು ನಂಬಿದವರು. ಅವರ 5 ತತ್ವಗಳಾದ ಅಹಿಂಸೆ, ಸತ್ಯ, ಅಸ್ತೇಯ, ಅಪರಿಗ್ರಹ ಹಾಗೂ ಬ್ರಹ್ಮಚಾರ್ಯವನ್ನು ಅನುಸರಿಸುವುದರಿಂದ ಉತ್ತಮ ಜೀವನ ನಿರ್ಮಾಣ ಸಾಧ್ಯ ಎಂದು ತಮ್ಮ ತತ್ವಗಳಲ್ಲಿ ಸಾರಿದ್ದಾರೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ಇಲಾಖೆಯ ವರ್ಷಾ ಬಿ. ಕೋಟ್ಯಾನ್ ನಿರೂಪಿಸಿದರು. ಜೈನ್ ಮಿಲನ್ ನ ಕಾರ್ಯದರ್ಶಿ ಡಾ. ನಿತಿನ್ ಕುಮಾರ್ ವಂದಿಸಿದರು.