ಕನ್ನಡಪ್ರಭ ವಾರ್ತೆ ಮಣಿಪಾಲ
ಮುಖ್ಯ ಅತಿಥಿ, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾತನಾಡಿ, ವಿದ್ಯಾರ್ಥಿಗಳು ಮಾದಕ ವ್ಯಸನ ಹಾಗೂ ದುಶ್ಚಟಗಳಿಗೆ ಒಮ್ಮೆ ಬಿದ್ದರೆ ಬದುಕಿನಲ್ಲಿ ಎದ್ದು ಬರಲು ಕಷ್ಟ ಸಾಧ್ಯ. ಆದ್ದರಿಂದ ಈ ವ್ಯಸನಗಳಿಂದ ಜಾಗೃತರಾಗಿರಬೇಕು ಎಂದು ಕರೆ ನೀಡಿದರು.ಮುಖ್ಯ ಅತಿಥಿ ಉಡುಪಿ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲೆ ಲೀಲಾಬಾಯಿ ಭಟ್, ಯುವಜನತೆ ದೇಶದ ಆಸ್ತಿ. ಈ ಆಸ್ತಿ ವ್ಯಸನಗಳಿಂದ ನಾಶವಾಗದಂತೆ ನೋಡಿಕೊಳ್ಳುವುದು ನಮ್ಮಲ್ಲರ ಜವಾಬ್ದಾರಿ ಎಂದರು.ಡಾ. ಎ.ವಿ. ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ. ಪಿ.ವಿ. ಭಂಡಾರಿ, ಮದ್ಯ, ಮಾದಕ ವಸ್ತುಗಳ ಸೇವನೆಯಿಂದ ಯುವ ಜನತೆಯ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸಿದರು.ಮಾಹೆಯ ವಿದ್ಯಾರ್ಥಿ ವ್ಯವಹಾರಗಳ ವಿಭಾಗದ ನಿರ್ದೇಶಕಿ ಡಾ. ಗೀತಾ ಮಯ್ಯ ಸ್ವಾಗತಿಸಿದರು. ಉಪನಿರ್ದೇಶಕ ಡಾ. ಅರವಿಂದ್ ಕುಮಾರ್ ಪಾಂಡೆ ಪ್ರತಿಜ್ಞಾ ವಿಧಿ ಬೋಧಿಸಿದರು. ಡಾ.ರಶ್ಮಿ ಯೋಗೇಶ್ ಪೈ ವಂದಿಸಿದರು. ಕೆಎಂಸಿಯ ಸಹಾಯಕ ಪ್ರಾಧ್ಯಾಪಕಿ ಡಾ.ರೀನಾ ಪರ್ವಿನ್ ಕಾರ್ಯಕ್ರಮ ನಿರೂಪಿದರು.
ಈ ಕಾರ್ಯಾಗಾರದಲ್ಲಿ ಉಡುಪಿಯ ಪ್ರತಿ ಪ.ಪೂ. ಕಾಲೇಜಿನ ಎನ್‌ಎಸ್‌ಎಸ್, ಎನ್‌ಸಿಸಿ, ಸೌಟ್ಸ್ ಆ್ಯಂಡ್ ಗೈಡ್ಸ್‌ನಲ್ಲಿ ಸಕ್ರಿಯವಾಗಿರುವ ಇಬ್ಬರು ವಿದ್ಯಾರ್ಥಿಗಳು ಮತ್ತು ನರ್ಸಿಂಗ್ ವಿದ್ಯಾರ್ಥಿಗಳನ್ನೊಳಗೊಂಡ 373 ವಿದ್ಯಾರ್ಥಿಗಳು ಪ್ರಯೋಜನವನ್ನು ಪಡೆದರು.