ಮಾಹೆ-ಸ್ಪೆಷಲ್ ಒಲಿಂಪಿಕ್ಸ್ ಭಾರತ್ ಒಪ್ಪಂದ

KannadaprabhaNewsNetwork |  
Published : May 07, 2026, 02:45 AM IST
ಮಾಹೆ ವಿವಿ ಮತ್ತು ಸ್ಪೆಷಲ್ ಒಲಿಂಪಿಕ್ಸ್ ಭಾರತ್ ಸಂಸ್ಥೆಗಳ ಒಪ್ಪಂದಕ್ಕೆ ಸಹಿ ಹಾಕಿದವು.  | Kannada Prabha

ಸಾರಾಂಶ

ಮಾಹೆ-ಸ್ಪೆಷಲ್ ಒಲಿಂಪಿಕ್ಸ್ ಭಾರತ್ ಒಪ್ಪಂದ

ಮಣಿಪಾಲ: ವಿಶೇಷಚೇತನರ ಸಬಲೀಕರಣಕ್ಕಾಗಿ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವಿವಿಯ ಸ್ಪೆಷಲ್ ಒಲಿಂಪಿಕ್ಸ್ ಭಾರತ್ ಸಂಸ್ಥೆಯೊಂದಿಗೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದೆ. ಮಾಹೆಯ ಕುಲಸಚಿವ ಡಾ. ಪಿ. ಗಿರಿಧರ್ ಕಿಣಿ ಮತ್ತು ಸ್ಪೆಷಲ್ ಒಲಿಂಪಿಕ್ಸ್ ಭಾರತ್‌ನ ಅಧ್ಯಕ್ಷ ಡಾ. ಮಲ್ಲಿಕಾ ನಡ್ಡಾ ಈ ಒಪ್ಪಂದಕ್ಕೆ ಸಹಿ ಮಾಡಿದರು.ಈ ಮೂಲಕ ಮಾಹೆ ಮತ್ತು ಸ್ಪೆಷಲ್ ಒಲಿಂಪಿಕ್ಸ್ ಭಾರತ್ ಸಂಸ್ಥೆಗಳು ಜೊತೆಯಾಗಿ ಶಿಕ್ಷಣ ಮತ್ತು ಸಮಾಜದ ವಿವಿಧ ಹಂತಗಳಲ್ಲಿ ವಿಶೇಷ ಮಕ್ಕಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಲಿವೆ. ಅವರ ಬಗ್ಗೆ ಜನರಲ್ಲಿ ಸಹಾನುಭೂತಿ ಬೆಳೆಸುವ ಹಾಗೂ ಎಲ್ಲರನ್ನೂ ಸಮಾನವಾಗಿ ಕಾಣುವ ಭವಿಷ್ಯ ಕಟ್ಟಲು ಪ್ರೇರಣೆ ನೀಡುವುದು ಈ ಒಪ್ಪಂದದ ಗುರಿಯಾಗಿದೆ.ಸ್ಪೆಷಲ್ ಒಲಿಂಪಿಕ್ಸ್ ಏಷ್ಯಾ ಪೆಸಿಫಿಕ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ದೀಪಕ್ ನಟಾಲಿ, ಮಾಹೆ ಸಹ ಕುಲಾಧಿಪತಿ ಡಾ.ಎಚ್. ಎಸ್. ಬಲ್ಲಾಳ್, ಎಂಇಎಂಜಿ ಸಲಹೆಗಾರ ಲೆಫ್ಟಿನೆಂಟ್ ಜನರಲ್ (ಡಾ.) ಎಂ.ಡಿ. ವೆಂಕಟೇಶ್ ಹಾಗೂ ಮಾಹೆಯ ಸಹಕುಲಪತಿ ಡಾ. ನಾರಾಯಣ ಸಭಾಹಿತ್ ಮತ್ತು ಸ್ಪೆಷಲ್ ಒಲಿಂಪಿಕ್ಸ್ ಭಾರತ್‌ನ ಪ್ರಧಾನ ಕಾರ್ಯದರ್ಶಿ ಡಿ. ಜಿ. ಚೌಧರಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಡುಪಿ: ಅಗ್ನಿಶಾಮಕ ದಳದ ಬಲವರ್ಧನೆ ಬಿಜೆಪಿ ಯುವಮೋರ್ಚಾ ಮನವಿ
ಎರಡು ವರ್ಷಗಳ ಉಚಿತ ಪಿಯುಸಿ ಶಿಕ್ಷಣ-ಪ್ರಾಚಾರ್ಯ ಪ್ರಸನ್ನ ಕೆ.ಎಲ್‌.