ಮಾಹೆ: ಯುಕೆ-ಇಂಡಿಯಾ ಹೆಲ್ತ್ ಟೆಕ್ ಆಕ್ಸಿಲರೇಟರ್ ಆರಂಭ

KannadaprabhaNewsNetwork |  
Published : Jul 24, 2026, 01:45 AM IST
ಮಾಹೆಯಲ್ಲಿ ಯುಕೆ-ಇಂಡಿಯಾ ಹೆಲ್ತ್ ಟೆಕ್ ಆಕ್ಸಿಲರೇಟರ್ಗೆ ಚಾಲನೆ ನೀಡಲಾಯಿತು | Kannada Prabha

ಸಾರಾಂಶ

ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ) ವತಿಯಿಂದ ಬ್ರಿಟಿಷ್ ಹೈಕಮಿಷನ್ ಸಹಭಾಗಿತ್ವದಲ್ಲಿ ಆಯೋಜಿಸಲಾಗಿರುವ 3 ದಿನಗಳ ಯುಕೆ–ಇಂಡಿಯಾ ಹೆಲ್ತ್ ಟೆಕ್ ಆಕ್ಸಿಲರೇಟರ್‌ 5ನೇ ಆವೃತ್ತಿಗೆ ಬುಧವಾರ ಚಾಲನೆ ನೀಡಲಾಯಿತು.

ಮಣಿಪಾಲ: ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ) ವತಿಯಿಂದ ಬ್ರಿಟಿಷ್ ಹೈಕಮಿಷನ್ ಸಹಭಾಗಿತ್ವದಲ್ಲಿ ಆಯೋಜಿಸಲಾಗಿರುವ 3 ದಿನಗಳ ಯುಕೆ–ಇಂಡಿಯಾ ಹೆಲ್ತ್ ಟೆಕ್ ಆಕ್ಸಿಲರೇಟರ್‌ 5ನೇ ಆವೃತ್ತಿಗೆ ಬುಧವಾರ ಚಾಲನೆ ನೀಡಲಾಯಿತು.ಭಾರತ ಮತ್ತು ಬ್ರಿಟನ್ ನಡುವಿನ ಆರೋಗ್ಯ ತಂತ್ರಜ್ಞಾನ ಮತ್ತು ಡಿಜಿಟಲ್ ಆರೋಗ್ಯ ಕ್ಷೇತ್ರಗಳಲ್ಲಿ ಬಾಂಧವ್ಯವನ್ನು ವೃದ್ಧಿಗೊಳಿಸುವ ಉದ್ದೇಶದಿಂದ ಕಳೆದ 3 ವರ್ಷಗಳಿಂದ ಈ ಸಮಾವೇಶವನ್ನು ಆಯೋಜಿಸಲಾಗುತ್ತಿದೆ.

ಉದ್ಘಾಟನಾ ಸಮಾರಂಭದಲ್ಲಿ ದೆಹಲಿಯ ಬ್ರಿಟಿಷ್ ಹೈಕಮಿಷನ್‌ನ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಪ್ರಾದೇಶಿಕ ನಿರ್ದೇಶಕಿ ಸೋಫಿಯಾ ನೆಸ್ಟಿಯಸ್ ಬೂತ್ ಅವರು ಆರೋಗ್ಯ ಮತ್ತು ಜೀವ ವಿಜ್ಞಾನ ಕ್ಷೇತ್ರದ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಹಾಗೂ ಎರಡು ದೇಶಗಳ ನಡುವಿನ ದೀರ್ಘಕಾಲದ ದ್ವಿಪಕ್ಷೀಯ ಸಂಬಂಧವನ್ನು ವೃದ್ಧಿಸಲು ಇಂತಹ ಜಂಟಿ ಜ್ಞಾನ ವಿನಿಮಯ ಮತ್ತು ತಂತ್ರಜ್ಞಾನ ಚಾಲಿತ ಪರಿಹಾರಗಳು ಅತ್ಯಗತ್ಯ ಎಂದರು.

ಭುವನೇಶ್ವರದ ಸಿಟಿ ನಾಲೆಡ್ಜ್ ಇನ್ನೋವೇಶನ್ ಕ್ಲಸ್ಟರ್ ಫೌಂಡೇಶನ್ ಅಧ್ಯಕ್ಷ ಡಾ. ಮೃತ್ಯುಂಜಯ್ ಸುವಾರ್, ಶೈಕ್ಷಣಿಕ ಕ್ಷೇತ್ರ, ಉದ್ಯಮಗಳು, ಸ್ಟಾರ್ಟ್‌ಅಪ್‌ಗಳು ಮತ್ತು ಸರ್ಕಾರದ ನಡುವೆ ಕೊಂಡಿಯಾಗಿ ಕಾರ್ಯನಿರ್ವಹಿಸುವ ಸದೃಢ ನಾವೀನ್ಯ ಪರಿಸರ ವ್ಯವಸ್ಥೆ ರೂಪಿಸುವ ಇಂತಹ ಕಾರ್ಯಕ್ರಮಗಳು ಇಂದಿನ ಅಗತ್ಯವಾಗಿದೆ ಎಂದರು.ಮಾಹೆಯ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್, ಆರೋಗ್ಯ ಕ್ಷೇತ್ರದಲ್ಲಿ ಹೊಸ ಆವಿಷ್ಕಾರಗಳಿಗೆ ದೇಶಗಳ ಗಡಿಗಳನ್ನು ಮೀರಿದ ಬಾಂಧವ್ಯದ ಅಗತ್ಯವಿದೆ. ಈ ನಿಟ್ಟಿನಲ್ಲಿ ಯುಕೆ-ಇಂಡಿಯಾ ಹೆಲ್ತ್ ಟೆಕ್ ಆಕ್ಸಿಲರೇಟರ್‌ ಮಹತ್ವದ ಪಾತ್ರ ವಹಿಸುತ್ತವೆ ಎಂದರು.ದೆಹಲಿಯ ಬ್ರಿಟಿಷ್ ಹೈಕಮಿಷನ್‌ನ ಹಿರಿಯ ಸಲಹೆಗಾರ್ತಿ ಡಾ. ನೇಹಾ ಶರ್ಮಾ ಅವರು ಕಾರ್ಯಕ್ರಮದ ರೂಪುರೇಷೆಗಳನ್ನು ವಿವರಿಸಿದರು. ಕರ್ನಾಟಕದ ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಚಂದ್ರು ಅಯ್ಯರ್, ಮಾಹೆ ಕುಲಪತಿ ಡಾ. ಶರತ್ ಕೆ. ರಾವ್, ಬ್ರಿಟಿಷ್ ಹೈಕಮಿಷನ್‌ನ ಅಧಿಕಾರಿಗಳು ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಆರೋಗ್ಯ ಸಚಿವ ಯು.ಟಿ. ಖಾದರ್, ಅನಿವಾರ್ಯ ಕಾರಣಗಳಿಂದ ಅನುಪಸ್ಥಿತರಿದ್ದು ತಮ್ಮ ಸಂದೇಶವನ್ನು ಕಳುಹಿಸಿ ಶುಭ ಹಾರೈಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಿಮ್ಮಲ್ಲಿ ಧಮ್ ಇದ್ದರೆ ನನ್ನೊಂದಿಗೆ ನೇರವಾಗಿ ಹೋರಾಡಿ: ಮುಶ್ರೀಫ್‌
ಎಸ್‌ಐಆರ್; 1,52,389 ಗಣತಿ ನಮೂನೆಗಳ ಡಿಜಿಟೈಜೇಷನ್