ಮಾಹೆಗೆ ಪ್ರತಿಷ್ಠಿತ ಫಿಕ್ಕಿ ಪ್ರಶಸ್ತಿ

KannadaprabhaNewsNetwork |  
Published : Oct 08, 2025, 01:01 AM IST
06ಫಿಕ್ಕಿನವದೆಹಲಿಯಲ್ಲಿ ಮಾಹೆಯ ಮಾಹೆ ಉಪಕುಲಪತಿ ಲೆ.ಜ. ಡಾ. ಎಂ. ಡಿ. ವೆಂಕಟೇಶ್ ಫಿಕ್ಕಿ ಪ್ರಶಸ್ತಿಯನ್ನು ಸ್ವೀಕರಿಸಿದರು. | Kannada Prabha

ಸಾರಾಂಶ

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)ಗೆ 20ನೇ ಫಿಕ್ಕಿ ಉನ್ನತ ಶಿಕ್ಷಣ ಶೃಂಗಸಭೆ 2025ರಲ್ಲಿ ‘ಸಂಶೋಧನೆ ಮತ್ತು ನಾವೀನ್ಯತೆಯಲ್ಲಿ ಶ್ರೇಷ್ಠತೆ (ಖಾಸಗಿ)’ಗಾಗಿ ಪ್ರತಿಷ್ಠಿತ ಫಿಕ್ಕಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಪ್ರಶಸ್ತಿಯನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ದೆಹಲಿಯ ಭಾರತ್ ಮಂಟಪದಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಿದರು.

ಕನ್ನಡಪ್ರಭ ವಾರ್ತೆ ಮಣಿಪಾಲ

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)ಗೆ 20ನೇ ಫಿಕ್ಕಿ ಉನ್ನತ ಶಿಕ್ಷಣ ಶೃಂಗಸಭೆ 2025ರಲ್ಲಿ ‘ಸಂಶೋಧನೆ ಮತ್ತು ನಾವೀನ್ಯತೆಯಲ್ಲಿ ಶ್ರೇಷ್ಠತೆ (ಖಾಸಗಿ)’ಗಾಗಿ ಪ್ರತಿಷ್ಠಿತ ಫಿಕ್ಕಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಈ ಪ್ರಶಸ್ತಿಯನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ದೆಹಲಿಯ ಭಾರತ್ ಮಂಟಪದಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಿದರು.

ಮಾಹೆ ಉಪಕುಲಪತಿ ಲೆ.ಜ. ಡಾ.ಎಂ.ಡಿ. ವೆಂಕಟೇಶ್, ಮಾಹೆಯ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು. ಮಾಹೆಯ ಸಾರ್ವಜನಿಕ ಸಂಪರ್ಕ, ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮ ನಿರ್ದೇಶಕ ಭರತ್ ಕುಮಾರ್ ಮತ್ತು ಮಾಹೆ ಬೆಂಗಳೂರು ಕ್ಯಾಂಪಸ್‌ನ ಕಾರ್ಪೊರೇಟ್ ಎಂಗೇಜ್‌ಮೆಂಟ್ ಮತ್ತು ವೃತ್ತಿ ಸೇವೆಗಳ ಉಪನಿರ್ದೇಶಕಿ ಏಕಲಬ್ಯಾ ಬರೂಹ್ ಉಪಸ್ಥಿತರಿದ್ದರು.

ಈ ಮಾನ್ಯತೆಯ ಬಗ್ಗೆ ಮಾಹೆ ಸಹ ಕುಲಪತಿ ಡಾ. ಎಚ್.ಎಸ್. ಬಲ್ಲಾಳ ಮಾತನಾಡಿ, ಸಮಾಜದಲ್ಲಿ ಪರಿಣಾಮಾತ್ಮಕ ಬದಲಾವಣೆಗಳನ್ನು ತರುವ ಮಾಹೆ ಧ್ಯೇಯಕ್ಕೆ ಫಿಕ್ಕಿಯ ಈ ಮನ್ನಣೆಗೆ ಕೃತಜ್ಞತೆಗಳು. ಮಾಹೆಯ ಶೈಕ್ಷಣಿಕ ಮತ್ತು ಉದ್ಯಮಕ್ಕೆ ಸೇತುವೆಯಾಗುವ ವಿಶ್ವ ದರ್ಜೆಯ ಸಂಶೋಧನಾ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವಲ್ಲಿ ನಿರಂತರ ಪ್ರಯತ್ನಗಳನ್ನು ಈ ಪ್ರಶಸ್ತಿ ದೃಢೀಕರಿಸುತ್ತದೆ. ನೈಜ ಜಗತ್ತಿನ ಸವಾಲುಗಳಿಗೆ ಪರಿಹಾರಗಳಾಗಿ ನವೀನ ವಿಚಾರಗಳನ್ನು ಬೆಳೆಸಲು ಮತ್ತು ಸಂಸ್ಕೃತಿಯನ್ನು ಪೋಷಿಸಲು ಮಾಹೆ ಬದ್ಧವಾಗಿದೆ ಎಂದಿದ್ದಾರೆ.ಲೆ.ಜ. ಡಾ. ಎಂ.ಡಿ. ವೆಂಕಟೇಶ್ ಮಾತನಾಡಿ, ಈ ಪ್ರಶಸ್ತಿಯು ಮಾಹೆ ಸಮುದಾಯದ ನವೀನ ಮನೋಭಾವ ಮತ್ತು ಸಂಶೋಧನಾ ಶ್ರೇಷ್ಠತೆಗೆ ಸಾಕ್ಷಿಯಾಗಿದೆ. ನಮ್ಮ ಸಂಶೋಧಕರು, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಜ್ಞಾನದ ಗಡಿಗಳನ್ನು ವಿಸ್ತರಿಸುತ್ತಲೇ ಇದ್ದಾರೆ. ತಮ್ಮ ಕೆಲಸದ ಮೂಲಕ ಅರ್ಥಪೂರ್ಣ ಪರಿಣಾಮವನ್ನು ಸೃಷ್ಟಿಸುತ್ತಿದ್ದಾರೆ. ಈ ಮನ್ನಣೆಯು ನಮ್ಮ ಸಂಶೋಧನಾ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸಲು, ಅಂತರ್‌ಶಿಸ್ತೀಯ ಸಹಯೋಗಗಳನ್ನು ವಿಸ್ತರಿಸಲು ಮತ್ತು ಉನ್ನತ ಶಿಕ್ಷಣದ ನಾವೀನ್ಯತೆಯ ಮುಂಚೂಣಿಯಲ್ಲಿ ಉಳಿಯಲು ಮಾಹೆಗೆ ಸ್ಫೂರ್ತಿ ನೀಡುತ್ತದೆ ಎಂದು ಹೇಳಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

10 ಪ್ಯಾರಾದಲ್ಲಿ ಕೇಂದ್ರ ವಿರುದ್ಧ ಟೀಕಾ ಪ್ರಹಾರ
ಬೇಡಿಕೆಗೆ ತಕ್ಕಷ್ಟು ಬರುತ್ತಿಲ್ಲ ಮೈಸೂರು ರೇಷ್ಮೆ ಸೀರೆ