ಸುನಿಲ್ ಕುಮಾರ್ ಮೇಲೆ ಕ್ರಮಕ್ಕೆ ಮಹಿಳಾ ಕಾಂಗ್ರೆಸ್ ಮನವಿ

KannadaprabhaNewsNetwork |  
Published : May 15, 2026, 02:30 AM IST
14ಮಹಿಳಾ | Kannada Prabha

ಸಾರಾಂಶ

ಮಾಜಿ ಪ್ರಧಾನಮಂತ್ರಿ ದಿ. ಇಂದಿರಾ ಗಾಂಧಿ ಅವರ ಕುರಿತು ಸುಳ್ಳು ಸುದ್ದಿಯನ್ನು ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿರುವ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ವಿರುದ್ಧ ಪ್ರಕರಣ ದಾಖಲಿಸಿ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ಅವರ ನೇತೃತ್ವದಲ್ಲಿ ಮಹಿಳಾ ಕಾಂಗ್ರೆಸ್ ನಿಯೋಗವು ಗುರುವಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ಉಡುಪಿ: ಮಾಜಿ ಪ್ರಧಾನಮಂತ್ರಿ ದಿ. ಇಂದಿರಾ ಗಾಂಧಿ ಅವರ ಕುರಿತು ಸುಳ್ಳು ಸುದ್ದಿಯನ್ನು ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿರುವ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ವಿರುದ್ಧ ಪ್ರಕರಣ ದಾಖಲಿಸಿ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ಅವರ ನೇತೃತ್ವದಲ್ಲಿ ಮಹಿಳಾ ಕಾಂಗ್ರೆಸ್ ನಿಯೋಗವು ಗುರುವಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ಸಚಿವರಾಗಿ ಕಾರ್ಯನಿರ್ವಹಿಸಿ ಒಂದು ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕರು ಇಂತಹ ಸುಳ್ಳು ಸುದ್ದಿಯನ್ನು ಪರೀಶೀಲಿಸದೇ ತಮ್ಮ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿರುವುದು ಅಕ್ಷಮ್ಯ ಅಪರಾಧ. ದೇಶಕ್ಕೆ ದಿ. ಇಂದಿರಾ ಗಾಂಧಿಯವರ ಕೊಡುಗೆ ಅಪಾರ. ಅಂತಹ ಮೇರು ನಾಯಕಿಯ‌ನ್ನು ಅಪಮಾನ ಮಾಡಿರುವುದು ಶಾಸಕ ಸುನಿಲ್ ಕುಮಾರ್ ಅವರಿಗೆ ಶೋಭೆ ತರುವುದಿಲ್ಲ. ಇನ್ನಾದರೂ ಶಾಸಕ ಸುನಿಲ್ ಕುಮಾರ್ ಅವರು ಬಿಜೆಪಿ ಐ.ಟಿ ಸೆಲ್‌ನ ಸುಳ್ಳು ಮಾಹಿತಿಯನ್ನು ಪರಿಶೀಲಿಸಿ ಹಂಚುವುದು ಉತ್ತಮ.ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಗೀತಾ ವಾಗ್ಳೆ, ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಬಾನು ಭಾಸ್ಕರ್, ಕಾರ್ಕಳ ಪುರಸಭೆಯ ಮಾಜಿ ಅಧ್ಯಕ್ಷೆಯರಾದ ಪ್ರತಿಮಾ ರಾಣೆ ಹಾಗೂ ರೆಹಮತ್, ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯೆ ಚರಿತ್ರಾ ಎಮ್, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಗಳಾದ ಪುಷ್ಪ ಅಂಚನ್ ಹಾಗೂ ಸಂಧ್ಯಾ ತಿಲಕ್‌ರಾಜ್ ಅವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಾಲೂಕು ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಐತಿಚಂಡ ರಮೇಶ್ ಉತ್ತಪ್ಪಗೆ ಆಹ್ವಾನ
ಕೊಡವೂರು ಮಹಾರುದ್ರಯಾಗ: ಅದ್ಧೂರಿ ಹೊರೆ ಕಾಣಿಕೆ ಮೆರವಣಿಗೆ