ಎಸ್‌ಐಆರ್‌, ಗೃಹಜ್ಯೋತಿಗೆ ಸಹಕರಿಸಲು ಮಹಿಳಾ ಕಾಂಗ್ರೆಸ್‌ಗೆ ಕರೆ

KannadaprabhaNewsNetwork |  
Published : Jul 19, 2026, 03:45 AM IST
18ಮಹಿಳಾ | Kannada Prabha

ಸಾರಾಂಶ

ಜಿಲ್ಲಾ ಮಹಿಳಾ ಕಾಂಗ್ರೆಸ್‌ ಸಭೆ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ಅಧ್ಯಕ್ಷತೆಯಲ್ಲಿ ಶನಿವಾರ ನಗರದ ಕಾಂಗ್ರೆಸ್ ಭವನದಲ್ಲಿ ನಡೆಯಿತು.

ಉಡುಪಿ: ಜಿಲ್ಲಾ ಮಹಿಳಾ ಕಾಂಗ್ರೆಸ್‌ ಸಭೆ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ಅಧ್ಯಕ್ಷತೆಯಲ್ಲಿ ಶನಿವಾರ ನಗರದ ಕಾಂಗ್ರೆಸ್ ಭವನದಲ್ಲಿ ನಡೆಯಿತು. ಈ ಸಂದರ್ಭ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿಯ‌ ನೂತನ ಮಹಿಳಾ ಜಿಲ್ಲಾಧ್ಯಕ್ಷೆಯಾಗಿ ಆಯ್ಕೆಯಾಗಿರುವ ನಿರೀಕ್ಷಾ ಮೆಂಡನ್ ಅವರನ್ನು ಗೌರವಿಸಲಾಯಿತು.

ಸಭೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಉಪಸ್ಥಿತರಿದ್ದು, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಆಯಾ ಬಿಎಲ್‌ಒಗಳೊಂದಿಗೆ ಅಲ್ಲಿನ ಸ್ಥಳೀಯ ಬ್ಲಾಕ್ ಮಹಿಳಾ ಕಾಂಗ್ರೆಸ್‌ ಪದಾಧಿಕಾರಿಗಳು ಉಪಸ್ಥಿತರಿದ್ದು, ಪ್ರತಿಯೊಂದು ಅರ್ಹ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಬೇಕು ಎಂದು ಕರೆ ನೀಡಿದರು. ಜಿಲ್ಲಾಧ್ಯಕ್ಷೆ ಜ್ಯೋತಿ ಹೆಬ್ಬಾರ್, ಗೃಹ ಜ್ಯೋತಿ ಮರು ನೋಂದಣಿ ಪ್ರಕ್ರಿಯೆಯಲ್ಲಿ ಆಯಾ ಅರ್ಹ ಫಲಾನುಭವಿಗಳಿಗೆ ಸಹಾಯ ಮಾಡಲು ಉಡುಪಿ ಜಿಲ್ಲಾ ಮತ್ತು ಎಲ್ಲ ಬ್ಲಾಕ್ ಮಹಿಳಾ ಕಾಂಗ್ರೆಸ್‌ನ ಪದಾಧಿಕಾರಿಗಳು ಸಹಕರಿಸಬೇಕು ಎಂದು ತಿಳಿಸಿದರು. ಈ ಸಭೆಯಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಗೀತಾ ವಾಗ್ಳೆ, ಹಿರಿಯ ಮಹಿಳಾ ಕಾಂಗ್ರೆಸ್‌ನ ನಾಯಕಿಯರಾದ ಸರಸು ಬಂಗೇರ, ಮಾಲಿನಿ ರೈ, ಬ್ಲಾಕ್ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ದೇವಕಿ ಸಣ್ಣಯ್ಯ, ಸುಮ ಅಡ್ಯಂತಾಯ, ಅನಿತಾ ಬಾಬು ಪೂಜಾರಿ, ಶಾಂತಾ ರೈ, ರೇಖಾ ಸುವರ್ಣ, ಮಹಿಳಾ ಕಾಂಗ್ರೆಸ್‌ನ ನಾಯಕಿಯರಾದ ಮೀನಾಕ್ಷಿ ಮಾಧವ ಬನ್ನಂಜೆ, ಗೋಪಿ ನಾಯ್ಕ್, ದೇವಕಿ ಕೋಟ್ಯಾನ್, ಸರಸ್ವತಿ, ಜ್ಯೋತಿ ಪುತ್ರನ್, ಮಮತಾ ಕಿಶೋರ್ ಶೆಟ್ಟಿ, ರೋಶ್ನಿ ಶೆಟ್ಟಿ, ಜಾನಕಿ ನಾಯ್ಕ್, ವಾಣಿ ಶೆಟ್ಟಿ, ಶೋಭಾ ನಾಯ್ಕ್, ಸುಧಾ ಪೂಜಾರಿ, ಲೀಲಾವತಿ, ಸುಮನಾ ಹಾಗೂ ಮಹಿಳಾ ಕಾಂಗ್ರೆಸ್‌ನ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಗಳಾದ ಪುಷ್ಪ ಅಂಚನ್ ಸ್ವಾಗತಿಸಿ, ಸಂಧ್ಯಾ ತಿಲಕ್‌ರಾಜ್ ಅವರು ವರದಿ ವಾಚಿಸಿದರು. ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಮಮತಾ ಶೆಟ್ಟಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀಟ್ : ವಿವೇಕಾನಂದ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅತ್ಯುನ್ನತ ಸಾಧನೆ
ನೀಟ್- 2026 ಸಾಧಕರಿಗೆ ಜ್ಞಾನಸುಧಾ ಟ್ರಸ್ಟ್‌ನಿಂದ ಪ್ರೋತ್ಸಾಹಧನ ಘೋಷಣೆ