ಪ್ರಹ್ಲಾದ್‌ಜೋಶಿ, ಕಂಗನಾ ರಾಜೀನಾಮೆಗಾಗಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

KannadaprabhaNewsNetwork |  
Published : Jul 30, 2026, 01:45 AM IST
ಪ್ರಹ್ಲಾದ್‌ಜೋಶಿ, ಕಂಗನಾ ರಣಾವತ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರತಿಭಟನೆ | Kannada Prabha

ಸಾರಾಂಶ

ಪ್ರಹ್ಲಾದ್‌ಜೋಶಿ ಶಿಕ್ಷಣ ಸಚಿವರಾಗಲು ಸೂಕ್ತರಲ್ಲ. ಅವರು ಅತ್ಯಾಚಾರಿಗಳ ಪರವಾಗಿ ಮಾತನಾಡಿದ್ದರು. ಅದನ್ನು ನಾವು ತೀವ್ರವಾಗಿ ಖಂಡಿಸುತ್ತೇನೆ ಎಂದರು.

ಸತ್ತಿರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಜಮಾಯಿಸಿ ಆಕ್ರೋಶ

ಕನ್ನಡಪ್ರಭ ವಾರ್ತೆ, ಚಾಮರಾಜನಗರಅತ್ಯಾಚಾರಿಗಳನ್ನು ಬೆಂಬಲಿಸುವ ಪ್ರಹ್ಲಾದ್‌ಜೋಶಿ ಅವರನ್ನು ಶಿಕ್ಷಣ ಸಚಿವರನ್ನಾಗಿ ನೇಮಿಸಿರುವ ಕೇಂದ್ರ ಸರ್ಕಾರದ ಕ್ರಮ ಹಾಗೂ ಸಂಸದೆ ಕಂಗನಾ ರಣಾವತ್ ಮಹಿಳೆಯರು ಮತ್ತು ಜೆನ್-ಝೀ ಪ್ರತಿಭಟನಾಕಾರರ ವಿರುದ್ಧ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.ನಗರದ ಸತ್ತಿರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಸಮಿತಿ ರಾಜ್ಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ಜಿಲ್ಲಾಧ್ಯಕ್ಷೆ ಎಸ್. ನಾಗರತ್ನ ಕೆಂಗಾಕಿ ನೇತೃತ್ವದಲ್ಲಿ ಜಮಾಯಿಸಿದ ಕಾರ್ಯಕರ್ತರು ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರಮೋದಿ, ನೂತನ ಶಿಕ್ಷಣ ಸಚಿವ ಪ್ರಹ್ಲಾದ್‌ ಜೋತಿ, ಸಂಸದೆ ಕಂಗನಾ ರಣಾವತ್ ವಿರುದ್ಧ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.ಪಂಚ ಗ್ಯಾರಂಟಿ ಯೋಜನೆಗಳ ಸಮಿತಿ ರಾಜ್ಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಮಾತನಾಡಿ, ಅತ್ಯಾಚಾರಿಗಳನ್ನು ಬೆಂಬಲಿಸುವ ಪ್ರಹ್ಲಾದ್‌ ಜೋಶಿ ಅವರನ್ನು ಶಿಕ್ಷಣ ಸಚಿವರನ್ನಾಗಿ ನೇಮಿಸಿರುವ ಕೇಂದ್ರ ಸರ್ಕಾರದ ಕ್ರಮ ಹಾಗೂ ಸಂಸದೆ ಕಂಗನಾ ರಣಾವತ್ ಮಹಿಳೆಯರು ಮತ್ತು ಜೆನ್-ಝೀ ಪ್ರತಿಭಟನಾಕಾರರ ವಿರುದ್ಧ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ದೇಶ, ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಅದರಂತೆ ಚಾಮರಾಜನಗರ ಜಿಲ್ಲೆಯಲ್ಲಿ ಪ್ರತಿಭಟನೆ ಮಾಡಲಾಗಿದೆ ಎಂದರು. ಪ್ರಹ್ಲಾದ್‌ಜೋಶಿ ಶಿಕ್ಷಣ ಸಚಿವರಾಗಲು ಸೂಕ್ತರಲ್ಲ. ಅವರು ಅತ್ಯಾಚಾರಿಗಳ ಪರವಾಗಿ ಮಾತನಾಡಿದ್ದರು. ಅದನ್ನು ನಾವು ತೀವ್ರವಾಗಿ ಖಂಡಿಸುತ್ತೇನೆ ಎಂದರು. ತತ್‌ಕ್ಷಣವೇ ಪಹ್ಲಾದ್‌ಜೋಶಿ, ಸಂಸದೆ ಕಂಗನಾ ರಣಾವತ್ , ಜಂತರ್ ಮಂತರ್ ಹೋರಾಟಕ್ಕೆ ಕಾರಣರಾಗಿರುವ ಪ್ರಧಾನಿ ನರೇಂದ್ರಮೋದಿ, ಅಮಿತ್‌ ಶಾ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಎಸ್.ನಾಗರತ್ನ ಕೆಂಗಾಕಿ, ರಾಜ್ಯ ಕಾರ್ಯದರ್ಶಿ ಲತಾಜತ್ತಿ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕಲವಾಡಿ ಗುರುಸ್ವಾಮಿ, ಕೃಷ್ಣಮೂರ್ತಿ, ಮಹದೇವಯ್ಯ, ನಗರಸಭಾ ಮಾಜಿ ಅಧ್ಯಕ್ಷೆ ಚಿನ್ನಮ್ಮ, ಬ್ಲಾಕ್ ಅಧ್ಯಕ್ಷರಾದ ನಾಗಶ್ರೀ, ಭಾಗ್ಯ, ಶಕುಂತಲಾ, ಕಾರ್ಯದರ್ಶಿ ಕೃಷ್ಣವೇಣಿ, ಪುಟ್ಟಮ್ಮ, ಕೇತಮ್ಮ, ಪದ್ಮ ಪುರುಷೋತ್ತಮ, ಮಹಿಳಾ ಘಟಕದ ಪದಾಧಿಕಾರಿಗಳು ಭಾಗವಹಿಸಿದ್ದರು.

------29ಸಿಎಚ್ಎನ್15ಚಾಮರಾಜನಗರ ಜಿಲ್ಲಾ ಮಹಿಳಾ ಕಾಂಗ್ರೆಸ್‌ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಡತನ ಮೀರಿ ನೀಟ್‌ ಪರೀಕ್ಷೆಯಲ್ಲಿ ಸಾಧನೆಗೈದ ಕುಮಾರಸ್ವಾಮಿ
ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಚನ್ನಪಟ್ಟಣದಲ್ಲಿ ಪ್ರತಿಭಟನೆ