ಬೈಕ್ ರ್‍ಯಾಲಿ ನಡೆಸಿ ವಿಶ್ವ ಹಾಲು ದಿನದ ಮಹತ್ವ ಸಾರಿದ ಮೈಮುಲ್

KannadaprabhaNewsNetwork |  
Published : Jun 02, 2024, 01:45 AM IST
46 | Kannada Prabha

ಸಾರಾಂಶ

ನಂದಿನಿ ಹಾಲು ಕೇಳಿ ಪಡೆಯಿರಿ, ಶುದ್ಧ, ಆರೋಗ್ಯಕರ ನಂದಿನಿ ಪ್ರತಿ ಮನೆಯ ಗೆಳೆಯ, ನಮ್ಮ ನಡೆ ನಂದಿನಿಯ ಕಡೆ, ನಂದಿನಿ ಉತ್ಪನ್ನ ಬೆಳೆಸೋಣ ರೈತರ ಋಣ ತಿರಿಸೋಣ ಮುಂತಾದ ನಾಮಫಲಕಗಳನ್ನು ಹಿಡಿದು ನೂರಾರು ಮಂದಿ ಚಳಿ ಮಂಜಿನ ನಡುವೆ ಬೈಕ್ ನಲ್ಲಿ ಸಂಚರಿಸುವ ಮೂಲಕ ವಿಶ್ವ ಹಾಲು ದಿನದ ಮಹತ್ವ, ವಿಶೇಷತೆ ಸಾರಿ ನಂದಿನಿ ಹಾಲಿನ ಬಳಕೆ ಅರಿವು ಮೂಡಿಸಿದರು.

ಕನ್ನಡಪ್ರಭ ವಾರ್ತೆ ಮೈಸೂರು

ನಂದಿನಿ ಹಾಲು ಕೇಳಿ ಪಡೆಯಿರಿ, ಶುದ್ಧ, ಆರೋಗ್ಯಕರ ನಂದಿನಿ ಪ್ರತಿ ಮನೆಯ ಗೆಳೆಯ, ನಮ್ಮ ನಡೆ ನಂದಿನಿಯ ಕಡೆ, ನಂದಿನಿ ಉತ್ಪನ್ನ ಬೆಳೆಸೋಣ ರೈತರ ಋಣ ತಿರಿಸೋಣ ಮುಂತಾದ ನಾಮಫಲಕಗಳನ್ನು ಹಿಡಿದು ನೂರಾರು ಮಂದಿ ಚಳಿ ಮಂಜಿನ ನಡುವೆ ಬೈಕ್ ನಲ್ಲಿ ಸಂಚರಿಸುವ ಮೂಲಕ ವಿಶ್ವ ಹಾಲು ದಿನದ ಮಹತ್ವ, ವಿಶೇಷತೆ ಸಾರಿ ನಂದಿನಿ ಹಾಲಿನ ಬಳಕೆ ಅರಿವು ಮೂಡಿಸಿದರು.

ಮೈಸೂರು ಜಿಲ್ಲಾ ಹಾಲು ಒಕ್ಕೂಟದಿಂದ ಪ್ರತಿ ವರ್ಷದಂತೆ ಈ ಬಾರಿಯೂ ಭಿನ್ನವಾಗಿ ಪೌಷ್ಟಿಕತೆ ಮತ್ತು ಸುಸ್ಥಿರ ಹೈನು ಉದ್ಯಮದೊಂದಿಗೆ ಸಂಭ್ರಮಿಸೋಣ ಎಂಬ ದ್ಯೇಯ ವಾಕ್ಯದೊಂದಿಗೆ ಬೈಕ್ ರ್ಯಾಲಿ ನಡೆಸಿದರು. ಬನ್ನೂರು ಮುಖ್ಯರಸ್ತೆಯ ಮೈಮುಲ್ ಕಟ್ಟಡದ ಮುಂಭಾಗದಿಂದ ಪ್ರಾರಂಭಗೊಂಡ ಬೈಕ್ ಜಾಥಾದಲ್ಲಿ ನೂರಾರು ಮಂದಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಆಡಳಿತ ಮಂಡಳಿ ಪಾಲ್ಗೊಂಡು ಸಂಭ್ರಮಿಸಿದರು. ಬೈಕ್ ರ್ಯಾಲಿ ಟೆರಿಷಿಯನ್ ಕಾಲೇಜು ವೃತ್ತ, ಹಳೆ ಡೇರಿ ಕಟ್ಟಡ, ನಜರಬಾದ್ ಪೋಲೀಸ್ ಠಾಣೆ ಮಾರ್ಗವಾಗಿ ಸಾಗಿ ಹಾರ್ಡಿಂಗ್ ವೃತ್ತದ ಮೂಲಕ ಗೌನ್ ಹೌಸ್ ತಿರುವಿನೊಂದಿಗೆ ಶಕ್ತಿಧಾಮದಲ್ಲಿ ಅಂತ್ಯಗೊಳಿಸಿದರು. ಬಳಿಕ ಶಕ್ತಿಧಾಮದ ಮಕ್ಕಳಿಗೆ ವಿಶ್ವ ಹಾಲು ದಿನದ ಅಂಗವಾಗಿ ಹಾಲು ಮತ್ತು ಹಾಲಿನ ಉತ್ಪನ್ನಗಳಾದ ಪೇಡ ಸಿಹಿ ವಿತರಿಸಿದರು.

ಈ ವೇಳೆ ಮಾತನಾಡಿದ ಕೆಎಂಎಫ್ ಎಂಡಿ ಎಂ.ಕೆ. ಜಗದೀಶ್, ಜೂ.1 ರಂದು ಅಂತಾರಾಷ್ಟ್ರೀಯ ಹಾಲಿನ ದಿನಾಚರಣೆ ಆಯೋಜಿಸುತ್ತೇವೆ. ಇದರ ಮುಖ್ಯ ಉದ್ದೇಶ ಹಾಲಿನ ಮಹತ್ವವನ್ನು ಸಾರುವುದು. ಹಾಲಿನ ಉತ್ಪಾದನೆ ಮತ್ತು ಬಳಕೆಯನ್ನು ಹೆಚ್ಚಳ ಮಾಡುವ ಕಾರ್ಯಕ್ರಮ ಇದಾಗಿದೆ. ಹಾಲು ಒಂದು ಸಂಪೂರ್ಣ ಆಹಾರವಾಗಿದೆ. ಒಬ್ಬ ಮನುಷ್ಯನಿಗೆ ಹಾಗೂ ಮಕ್ಕಳಿಗೆ ಬೇಕಾದ ಎಲ್ಲಾ ಪೋಷಕಾಂಶಗಳನ್ನು ಹಾಲು ಒಳಗೊಂಡಿದೆ. ಹೆಚ್ಚು ಹಾಲನ್ನು ಬಳಕೆ ಮಾಡುವುದರಿಂದ ದೈಹಿಕವಾಗಿ ಆರೋಗ್ಯ ಹೊಂದಬಹುದು. ಈ ಕಾರಣಕ್ಕಾಗಿ ಮೈಸೂರಿನ ಎಲ್ಲಾ ಘಟಕಗಳ ಮುಖ್ಯಸ್ಥರು, ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಒಳಗೊಂಡಂತೆ ಬೈಕ್ ರ್ಯಾಲಿ ಹಮ್ಮಿಕೊಂಡು ಹಲವೆಡೆ ಅರಿವು ಮೂಡಿಸುವ ಕೆಲಸ ಮಾಡಿದ್ದೇವೆ ಎಂದರು.

ಶುಕ್ರವಾರ ಕೆಎಂಎಫ್ ಇತಿಹಾಸದಲ್ಲೇ ಅತಿ ಹೆಚ್ಚು ಹಾಲಿನ ಶೇಖರಿಸಿದ್ದು, ಬರೋಬ್ಬರಿ 94 ಲಕ್ಷ 26 ಸಾವಿರ ಕೆಜಿ ಹಾಲನ್ನು ಶೇಖರಿಸಿ ದಾಖಲೆ ಬರೆದಿದ್ದೇವೆ. ಸದ್ಯದಲ್ಲೇ ನಾವು ಒಂದು ಕೋಟಿ ಹಾಲಿನ ಶೇಖರಣೆ ಗುರಿ ಸಾಧಿಸುವ ವಿಶ್ವಾಸವಿದೆ. ಈ ಬಾರಿ ಬೇಸಿಗೆಯಲ್ಲಿಯೂ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಾಲು, ಮೊಸರು ಹಾಗೂ ಮಜ್ಜಿಗೆ ಉತ್ಪನ್ನಗಳನ್ನು ನೀಡಿದ್ದೇವೆ. ವಿಶೇಷವಾಗಿ ಗರಿಷ್ಟ 39 ಸಾವಿರ ಲೀಟರ್ ಐಸ್ ಕ್ರೀಮ್ ಮಾರಾಟ ಮಾಡಿದ್ದೇವೆ. ಕಳೆದ ವರ್ಷ 16 ಸಾವಿರ ಲೀಟರ್ ಮಾಡಿದ್ದು, ಈಗ ದುಪ್ಪಟ್ಟು ಹೆಚ್ಚಳದಲ್ಲಿ ಮಾರಾಟ ಮಾಡಿದ್ದೇವೆ ಎಂದು ಅವರು ಹೇಳಿದರು.

ಪ್ರತಿ ಪಾರ್ಲರ್ ಗಳಲ್ಲಿಯೂ ಉತ್ಪನ್ನ ಸಿಗುವಂತೆ ಮಾಡಿದ್ದು, ಪ್ರತಿ ರೈತರಿಗೆ ನಿಗದಿತ ಅವಧಿಯಲ್ಲಿ ಅನುದನ ಬಿಡುಗಡೆಗೆ ಕ್ರಮಹಿಸಿದ್ದೇವೆ. ಗ್ರಾಮೀಣ ಭಾಗದ ಒಕ್ಕೂಟದಲ್ಲಿ ಆಚರಣೆಗೆ ಸೂಚಿಸಿದ್ದು, ಗ್ರಾಮೀಣ ಭಾಗದಲ್ಲಿ ಹಸುಗೆ ತಾಯಿ ಸ್ಥಾನ ನೀಡಿ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಇನ್ನೂ ನಂದಿನಿ ಪಾರ್ಲರ್ ಗಳಲ್ಲಿ ಅನ್ಯ ಉತ್ಪನ್ನಗಳ ಮಾರಾಟಕ್ಕೆ ವಿಜಲಿನ್ಸ್ ತಂಡಗಳು ನಿರಂತರವಾಗಿ ಪರಿಶೀಲನೆ ನಡೆಸಿ ಕ್ರಮಕೈಗೊಳ್ಳುತ್ತಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಜಿಲ್ಲಾ ಹಾಲು ಒಕ್ಕೂಟದ ಎಂಡಿ ಬಿ.ಎನ್. ವಿಜಯಕುಮಾರ್ ಮಾತನಾಡಿ, ಮೈಸೂರಿನ ಜನತೆಗೆ ವಿಶ್ವ ಹಾಲಿನ ದಿನದ ಶುಭಾಶಯ. ಜಿಲ್ಲಾ ಹಾಲು ಒಕ್ಕೂಟದಿಂದ ಕಳೆದ ಮೂರು ವರ್ಷದಿಂದ ಈ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಮೊದಲ ಬಾರಿಗೆ ನಡಿಗೆ ಮೂಲಕ ಅರಿವು ಮೂಡಿಸಿದ್ದೇವು. ಕಳೆದ ಬಾರಿ ಕೆಲವೊಂದು ಆಶ್ರಮದಲ್ಲಿ ಅರಿವು ಮೂಡಿಸಿದ್ದೇವು. ಈ ಬಾರಿ ಬೈಕ್ ರ್ಯಲಿ ಮೂಲಕ ಆಚರಿಸಿದ್ದೇವೆ. ಹಾಲು ಒಂದು ಸಮತೋಲನ ಆಹಾರವಾಗಿದ್ದು, ಇದರಲ್ಲಿ ಎಲ್ಲಾ ರೀತಿಯ ಖನಿಜ, ಪೋಷಕಾಂಶಯುಕ್ತ ಪದಾರ್ಥ ಇರಲಿದೆ. ಹೀಗಾಗಿ ರೈತರು ಹಾಗೂ ಗ್ರಾಹಕರಿಗೆ ಈ ದಿನದ ಶುಭಾಶಯ ಕೋರುತ್ತಾ, ಹಾಲನ್ನು ಹೆಚ್ಚಾಗಿ ಬಳಸಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಿ ಎಂದು ಹೇಳಿದರು.

ಮಾರುಕಟ್ಟೆ ವ್ಯವಸ್ಥಾಪಕ ಎಚ್.ಕೆ. ಜಯಶಂಕರ್, ಆಡಳಿತ ಮಂಡಳಿ ಅಧಿಕಾರಿ ಹಾಗೂ ಸಿಬ್ಬಂದಿ ಇದ್ದರು.

ಮುಂಬೈನಲ್ಲಿ 2 ಲಕ್ಷ ಲೀಟರ್ ಹಾಲು ಮಾರಾಟ

ಹಾಲಿನ ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮುಂಬೈನಲ್ಲಿಯೂ ಪ್ರತಿನಿತ್ಯ 2 ಲಕ್ಷ ಲೀಟರ್ ಹಾಲಿನ ಮಾರಾಟಕ್ಕೆ ಕ್ರಮವಹಿಸಲಾಗಿದೆ. ಇನ್ನೂ ಒಂದು ಲಕ್ಷ ಲೀಟರ್ ಹೆಚ್ಚಿನ ಹಾಲು ಮಾರಾಟಕ್ಕೆ ಕ್ರಮ ಕೈಗೊಳ್ಳಲಾಗಿದೆ. ಅಂತೆಯೇ ಚೆನ್ನೈ ಮಾರುಕಟ್ಟೆಯಲ್ಲಿ ಕೂಡ 35 ಲೀಟರ್ ಹಾಲು ಪ್ರತಿದಿನ ಮಾರಾಟ ಮಾಡಲಾಗುತ್ತಿದೆ. ಇನ್ನೂ 50 ರಿಂದ 1 ಲಕ್ಷ ಲೀಟರ್ ಹಾಲು ಮಾರಾಟ ಹೆಚ್ಚಳಕ್ಕೆ ಕ್ರಮವಹಿಸಲಾಗಿದೆ. ಇನ್ನೂ ಇದೇ ಜಾಗದಲ್ಲಿ ಬಿಎಸ್ ಎನ್ ಎಲ್ ಸಹಯೋಗದೊಂದಿಗೆ 16 ಪಾರ್ಲರ್ ನಿರ್ಮಿಸುವ ಮಾತುಕತೆ ಆಗಿದ್ದು, ಆ ಬಗ್ಗೆಯೂ ಕ್ರಮವಹಿಸಲಾಗುವುದು.

-ಎಂ.ಕೆ. ಜಗದೀಶ್, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಟಿ ಆತ್ಮ*ತ್ಯೆಗೆ ಸರ್ಕಾರಿ ನೌಕರಿಗೆ ಸೇರುವಂತೆ ಕುಟುಂಬ ಒತ್ತಡ ಕಾರಣ?
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ