ಕನ್ನಡಪ್ರಭ ವಾರ್ತೆ ಅರಕಲಗೂಡು
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಸನ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಮತ್ತು ಸಾರ್ವಜನಿಕ ಆಸ್ಪತ್ರೆಯ ಐಸಿಟಿಸಿ ವಿಭಾಗ, ದೊಡ್ಡಮಗ್ಗೆ ಗ್ರಾಮ ಪಂಚಾಯತಿ, ಚೈತನ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಹಾಸನ ಇವರ ಸಹಯೋಗದಲ್ಲಿ ಶ್ರೀರಾಂಪುರದಲ್ಲಿ ಆಯೋಜಿಸಿದ್ದ ಉಚಿತ ಅರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ನೂರು ಹೈ ರಿಸ್ಕ್ ಇರುವಂತಹ ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು ಆ ಗ್ರಾಮಗಳಲ್ಲಿ ವಲಸಿಗರು ಹಾಗೂ ಟ್ರಕ್ಕರ್ ಮತ್ತು ಡ್ರೈವರ್ ಮುಂತಾದ ರಿಸ್ಕ್ ವರ್ತನೆಯಲ್ಲಿರುವಂತ ಜನರನ್ನು ಗುರುತಿಸಿ, ಅವರಿಗೆ ಸೂಕ್ತ ಎಚ್ಐವಿ ತಪಾಸಣೆಗಳನ್ನು ಮಾಡುವುದರ ಮೂಲಕ ಪ್ರತಿಯೊಂದು ಗ್ರಾಮದಲ್ಲಿಯೂ ತಪಾಸಣಾ ಶಿಬಿರ ಆಯೋಜಿಸಿ, ಎಚ್ಐವಿ ಹರಡುವ ವಿಧಾನ ಹಾಗೂ ಬರದಂತೆ ಮುನ್ನೆಚ್ಚರಿಕೆ ವಹಿಸಬೇಕಾದ ಕ್ರಮಗಳ ಕುರಿತು ಜನರಿಗೆ ಅರಿವು ಮೂಡಿಸುತ್ತಿದ್ದೇವೆ ಎಂದರು.ಇತ್ತೀಚಿನ ದಿನಗಳಲ್ಲಿ ಪುರುಷರಲ್ಲಿ ಲೈಂಗಿಕ ಕ್ರಿಯೆ ಹೆಚ್ಚು ಕಂಡು ಬರುತ್ತಿರುವುದರಿಂದ ಎಚ್ಐವಿ ಖಚಿತ ಪ್ರಕರಣಗಳು ಯುವಕರಲ್ಲಿ ಹೆಚ್ಚು ಪ್ರಮಾಣದಲ್ಲಿ ಕಂಡು ಬರುತ್ತಿರುವುದು ನೋವಿನ ಸಂಗತಿ. ಹಾಗಾಗಿ ಈ ರೀತಿಯ ತಪಾಸಣಾ ಶಿಬಿರಗಳ ಮೂಲಕ ಪ್ರತಿಯೊಂದು ಗ್ರಾಮದಲ್ಲಿಯೂ ಎಚ್ಐವಿ ಕಾಯಿಲೆಯ ಕುರಿತು ಜನರಲ್ಲಿ ಜಾಗೃತಿ ಕೈಗೊಳ್ಳುವುದು ಮುಖ್ಯ ಉದ್ದೇಶವಾಗಿರುತ್ತದೆ ಎಂದು ಹೇಳಿದರು.
ಶಿಬಿರದಲ್ಲಿ 55ಕ್ಕೂ ಹೆಚ್ಚು ಮಂದಿ ಭಾಗವಹಿಸಿ ಮಧುಮೇಹ, ಅಧಿಕ ರಕ್ತದೋತ್ತಡ, ಎಚ್ಐವಿ ಹಾಗೂ ಕ್ಷಯ ರೋಗ ಪರೀಕ್ಷೆಯನ್ನು ಮಾಡಿಸಿಕೊಂಡರು. ದೊಡ್ಡಮಗ್ಗೆ ಗ್ರಾಪಂ ಪಿಡಿಒ ನಾಗರಾಜ್, ಕಾರ್ಯದರ್ಶಿ ಕುಮಾರಸ್ವಾಮಿ, ದೊಡ್ಡಮಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮೋಹನ, ಆರೋಗ್ಯ ಸಂರಕ್ಷಣಾಧಿಕಾರಿ ಪವಿತ್ರ, ಐಸಿಟಿಸಿ ಪ್ರಯೋಗಶಾಲಾ ತಂತ್ರಜ್ಞರಾದ ಗೌರಮ್ಮ, ಎನ್ ಸಿ ಡಿ ವಿಭಾಗದ ಶುಶ್ರೂಷಕರಾದ ಲಲಿತಾ, ಕ್ಷೇತ್ರ ಕಾರ್ಯಕರ್ತ ಪ್ರಕಾಶ್, ಹಾಸನದ ಚೈತನ್ಯ ಗ್ರಾಮೀಣ ಅಭಿವೃದ್ಧಿ ಸಂಘದ ಕ್ಷೇತ್ರ ಕಾರ್ಯಕರ್ತ ಚಂದ್ರಶೇಖರ್, ಆಶಾ ಕಾರ್ಯಕರ್ತೆ ಮಂಗಳಾ, ಗ್ರಾಪಂ ಸಿಬ್ಬಂದಿಗಳು ಶಿಬಿರದಲ್ಲಿ ಭಾಗವಹಿಸಿದ್ದರು.