ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಟರಿ ಭಾರತೀನಗರ ಸೆಂಟ್ರಲ್, ಬೆಂಗಳೂರಿನ ಶಂಕರ್ ಕಣ್ಣಿನ ಆಸ್ಪತ್ರೆಯಿಂದ ಆಯೋಜಿಸಿದ್ದ ಕಣ್ಣಿನ ಉಚಿತ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿ, ದೃಷ್ಟಿದೋಷ ಸೇರಿದಂತೆ ವಿವಿಧ ಕಣ್ಣಿನ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿ ಚಿಕಿತ್ಸೆ ಪಡೆಯುವುದರಿಂದ ಗಂಭೀರ ಸಮಸ್ಯೆಗಳನ್ನು ತಡೆಗಟ್ಟಬಹುದು ಎಂದರು.
ಸಮಾಜದ ಬಡವರು ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ಉಚಿತವಾಗಿ ಕಣ್ಣಿನ ತಪಾಸಣೆ, ಚಿಕಿತ್ಸೆ ಹಾಗೂ ಅಗತ್ಯವಿರುವವರಿಗೆ ಕನ್ನಡಕ ಮತ್ತು ಶಸ್ತ್ರಚಿಕಿತ್ಸೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಶಿಬಿರ ಆಯೋಜಿಸಲಾಗಿದೆ. ರೋಟರಿ ಸಂಸ್ಥೆ ಮುಂದಿನ ದಿನಗಳಲ್ಲಿಯೂ ಆರೋಗ್ಯ ಕ್ಷೇತ್ರದಲ್ಲಿ ಇಂತಹ ಜನಪರ ಸೇವಾ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಿದೆ ಎಂದರು.ರೋಟರಿ ಭಾರತೀನಗರ ಸೆಂಟ್ರಲ್ ಕಾರ್ಯದರ್ಶಿ ಡಾ.ಸೌಮ್ಯ ರಾಜೇಶ್ ಮಾತನಾಡಿ, ಕಣ್ಣಿನ ಪೊರೆ ಸೇರಿದಂತೆ ಹಲವು ಸಮಸ್ಯೆಗಳಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯದಿದ್ದರೆ ದೃಷ್ಟಿಗೆ ತೊಂದರೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಗ್ರಾಮೀಣ ಭಾಗದ ಜನರಿಗೆ ಸುಲಭವಾಗಿ ಆರೋಗ್ಯ ಸೇವೆ ದೊರಕಬೇಕು ಎಂಬ ಉದ್ದೇಶದಿಂದ ಈ ಶಿಬಿರವನ್ನು ಆಯೋಜಿಸಲಾಗಿದೆ ಎಂದರು.
ಶಿಬಿರದಲ್ಲಿ ಶಂಕರ್ ಕಣ್ಣಿನ ಆಸ್ಪತ್ರೆ ನುರಿತ ವೈದ್ಯರು ಹಾಗೂ ಸಿಬ್ಬಂದಿ ಭಾಗವಹಿಸಿ ನೂರಕ್ಕೂ ಹೆಚ್ಚು ಮಂದಿಯ ಕಣ್ಣುಗಳನ್ನು ತಪಾಸಣೆ ನಡೆಸಿದರು. ಕಣ್ಣಿನ ಆರೋಗ್ಯ ಮತ್ತು ಸುರಕ್ಷತೆ ಕುರಿತು ವೈದ್ಯರು ಸಾರ್ವಜನಿಕರಿಗೆ ಅಗತ್ಯ ಅರಿವು ಮೂಡಿಸಿದರು. ತಪಾಸಣೆ ವೇಳೆ ಕಣ್ಣಿನ ಪೊರೆ ಸಮಸ್ಯೆ ಹೊಂದಿರುವವರನ್ನು ಗುರುತಿಸಿ, ಉಚಿತ ಶಸ್ತ್ರಚಿಕಿತ್ಸೆಗಾಗಿ ಆಯ್ಕೆ ಮಾಡಲಾಯಿತು.