ಆರೋಗ್ಯ ಕಾಪಾಡಿಕೊಂಡು ಉತ್ತಮ ಜೀವನಶೈಲಿ ರೂಢಿಸಿಕೊಳ್ಳಿ: ಕ್ಯಾನ್ಸರ್ ತಜ್ಞ ಡಾ.ಶೇಖರ್ ಪಾಟೀಲ್

KannadaprabhaNewsNetwork |  
Published : Feb 10, 2025, 01:45 AM IST
ಉಕ್ಕಿನಾಳದಲ್ಲಿ ತಮ್ಮ ತಂದೆ ದಿ. ಬಸನಗೌಡ ಮಾಲಿ ಪಾಟೀಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಖ್ಯಾತ ಕ್ಯಾನ್ಸರ್ ತಜ್ಞ ಹಾಗೂ ಟ್ರಸ್ಟ್ ಮುಖ್ಯಸ್ಥ ಡಾ. ಶೇಖರ್ ಪಾಟೀಲ್ ಮಾತನಾಡಿದರು. | Kannada Prabha

ಸಾರಾಂಶ

ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಉಚಿತ ಆರೋಗ್ಯ ಶಿಬಿರ ಏರ್ಪಡಿಸಲಾಗಿದೆ. ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಂಡು ಜೀವನಶೈಲಿ ಸಾಧ್ಯವಾದಷ್ಟು ಬದಲಾವಣೆ ಮಾಡಿಕೊಳ್ಳುವುದು ಉತ್ತಮ ಎಂದು ಖ್ಯಾತ ಕ್ಯಾನ್ಸರ್ ತಜ್ಞ ಹಾಗೂ ಟ್ರಸ್ಟ್ ಮುಖ್ಯಸ್ಥ ಡಾ.ಶೇಖರ್ ಪಾಟೀಲ್ ತಿಳಿಸಿದರು.

ಬಸನಗೌಡ ಪಾಟೀಲ್‌ ಚಾರಿಟೇಬಲ್‌ ಟ್ರಸ್ಟ್‌ನಿಂದ ಆಯೋಜನೆ । 2500 ಜನರ ತಪಾಸಣೆ

ಕನ್ನಡಪ್ರಭ ವಾರ್ತೆ ಶಹಾಪುರ

ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಉಚಿತ ಆರೋಗ್ಯ ಶಿಬಿರ ಏರ್ಪಡಿಸಲಾಗಿದೆ. ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಂಡು ಜೀವನಶೈಲಿ ಸಾಧ್ಯವಾದಷ್ಟು ಬದಲಾವಣೆ ಮಾಡಿಕೊಳ್ಳುವುದು ಉತ್ತಮ ಎಂದು ಖ್ಯಾತ ಕ್ಯಾನ್ಸರ್ ತಜ್ಞ ಹಾಗೂ ಟ್ರಸ್ಟ್ ಮುಖ್ಯಸ್ಥ ಡಾ.ಶೇಖರ್ ಪಾಟೀಲ್ ತಿಳಿಸಿದರು.

ತಾಲೂಕಿನ ಉಕ್ಕಿನಾಳದಲ್ಲಿ ಶೇಖರ್‌ರ ತಂದೆ ದಿ. ಬಸನಗೌಡ ಮಾಲಿ ಪಾಟೀಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಆರೋಗ್ಯ ತಪಾಸಣಾ ಶಿಬಿರದ ನೇತೃತ್ವ ವಹಿಸಿ ಮಾತನಾಡಿ, ಪ್ರತಿ ವರ್ಷ ಅವರ ಹೆಸರಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಗುತ್ತಿದೆ. ಶನಿವಾರ ನಡೆದ ಶಿಬಿರದಲ್ಲಿ ಸುಮಾರು 850 ನೇತ್ರ ತಪಾಸಣೆ ಮಾಡಿಸಿಕೊಂಡಿದ್ದಾರೆ. ಅದರಲ್ಲಿ 360 ಜನರಿಗೆ ಉಚಿತ ನೇತ್ರ ಚಿಕಿತ್ಸೆಗೆ ಮಾಡಲಾಗುವುದು. ಆಧುನಿಕ ತಂತ್ರಜ್ಞಾನದ ಮೂಲಕ ಸುಮಾರು 450 ಜನರಿಗೆ ಕ್ಯಾನ್ಸರ್ ತಪಾಸಣೆ ಮಾಡಲಾಯಿತು. ಅದರಲ್ಲಿ 10 ಜನರಿಗೆ ಕ್ಯಾನ್ಸರ್ ದೃಢಪಟ್ಟಿದೆ, ಅವರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದರು.

ಈ ಶಿಬಿರದಲ್ಲಿ 2500 ಜನ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಆರೋಗ್ಯಮೇಳದ ಉಸ್ತುವಾರಿ ನೋಡಿಕೊಂಡ ಸಹೋದರ ಡಾ. ಮಲ್ಲನಗೌಡ ಪಾಟೀಲ್, ರಾಜು ಗೌಡ ಪಾಟೀಲ್, ದೇವನನ್ ಪಾಟೀಲ್ ವಿಕ್ರಂ ಪಾಟೀಲ್, ಲಿಂಗರಾಜ್ ಪಾಟೀಲ್, ಶರಣ ಪಾಟೀಲ್ ಶಿಬಿರದಲ್ಲಿ ಲೋಪದೋಷವಾದಂತೆ ಪ್ರತಿ ವ್ಯವಸ್ಥೆಯನ್ನು ನಿರ್ವಹಿಸಿದ್ದಾರೆ ಎಂದರು.

ಆರೋಗ್ಯ ಮೇಳಕ್ಕೆ ಆಗಮಿಸಿದ ಸಾರ್ವಜನಿಕರಿಗೆ ಅಚ್ಚುಕಟ್ಟಾದ ಉಟೋಪಚಾರ ವ್ಯವಸ್ಥೆ ಮಾಡಲಾಗಿದೆ. ಶಿಬಿರದ ವೈದ್ಯಕೀಯ ಜವಾಬ್ದಾರಿಯನ್ನು ಡಾ. ನಂದೀಶ್ ಜೀವಣಿಗಿ ಡಾ. ಬಿ. ಎಲ್. ಪ್ರಭುಗೌಡ ವಹಿಸಿಕೊಂಡು ಶಿಬಿರವನ್ನು ಯಶಸ್ವಿಗೊಳಿಸಿದ್ದಾರೆ. ಈ ಶಿಬಿರದ ಯಶಸ್ವಿಗೆ ಪರೋಕ್ಷವಾಗಿ ಪ್ರತ್ಯಕ್ಷವಾಗಿ ಸಹಕರಿಸಿದ ಎಲ್ಲಾ ಮಹನೀಯರಿಗೆ ಅಭಿನಂದನೆಗಳನ್ನು ಈ ಮೂಲಕ ಸಲ್ಲಿಸುತ್ತೇನೆ ಎಂದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ