ಕನ್ನಡಪ್ರಭ ವಾರ್ತೆ ನಾಗಮಂಗಲ
ಪಟ್ಟಣದ ಶಿಕ್ಷಕರ ಭವನದಲ್ಲಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ವತಿಯಿಂದ ತಾಲೂಕಿನ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಎನ್‌ಆರ್‌ಎಲ್‌ಎಂ ಒಕ್ಕೂಟದ ಮಹಿಳಾ ಸಿಬ್ಬಂದಿಗೆ ಆಯೋಜಿಸಿದ್ದ ಮುಟ್ಟಿನ ಕಪ್ ಕುರಿತು ಅರಿವು ಮೂಡಿಸುವ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದರು.
ಮಹಿಳೆಯರು ಋತುಚಕ್ರವಾದಾಗ ಈ ಹಿಂದೆ ಬಟ್ಟೆ ನಂತರದ ದಿನಗಳಲ್ಲಿ ಸ್ಯಾನಿಟರಿ ಪ್ಯಾಡ್‌ಗಳನ್ನು ಬಳಸುತ್ತಿದ್ದರು. ಇದರಿಂದ ಬಳಸಿದ ಪ್ಯಾಡ್‌ಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದ ಕಾರಣ ಪರಿಸರ ಮಾಲಿನ್ಯ ಉಂಟಾಗುತ್ತಿತ್ತು. ಜೊತೆಗೆ ಸಾಕಷ್ಟು ಆರೋಗ್ಯ ಸಮಸ್ಯೆ ಎದುರಿಸುವಂತಾಗಿತ್ತು. ಆದ್ದರಿಂದ ಮಹಿಳೆಯರು ಆರೋಗ್ಯದಾಯಕ ಮತ್ತು ಪರಿಸರ ಸ್ನೇಹಿಯಾಗಿರುವ 5 ರಿಂದ 10 ವರ್ಷ ಕಾಲ ಮರುಬಳಕೆ ಮಾಡಬಹುದಾದ ಮುಟ್ಟಿನ ಕಪ್ ಬಳಕೆಮಾಡುವುದನ್ನು ರೂಢಿಸಿಕೊಳ್ಳಬೇಕು ಎಂದರು.ತಾಪಂ ಇಒ ಬಿ.ಎಸ್.ಸತೀಶ್ ಮಾತನಾಡಿ, ಮಹಿಳೆಯರು ಆರೋಗ್ಯವಾಗಿದ್ದರೆ ಇಡೀ ಕುಟುಂಬವೇ ಆರೋಗ್ಯವಾಗಿರುತ್ತದೆ. ಆ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಮಾರುಕಟ್ಟೆಯಲ್ಲಿ ಸಿಗುವ ಬಹುತೇಕ ಪ್ಯಾಡ್‌ಗಳು ರಾಸಾಯನಿಕ ಮತ್ತು ಸಿಂಥೆಟಿಕ್ ವಸ್ತುಗಳನ್ನು ಹೊಂದಿರುತ್ತವೆ. ಇವುಗಳನ್ನು ಬಳಸುವುದರಿಂದ ಮಹಿಳೆಯರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಇದೆ. ಉತ್ತಮ ಗುಣಮಟ್ಟದ ಮುಟ್ಟಿನ ಕಪ್‌ಗಳನ್ನು ವೈದ್ಯಕೀಯ ಮಟ್ಟದ ಸಿಲಿಕಾನ್‌ನಿಂದ ಮಾಡಲಾಗಿದೆ. ಇದರಿಂದ ಯಾವುದೇ ಆರೋಗ್ಯ ಸಮಸ್ಯೆ ಎದುರಾಗುವುದಿಲ್ಲ ಎಂದು ಹೇಳಿದರು.
ನಂತರ ತಾಲೂಕಿನ ಎಲ್ಲಾ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಎನ್‌ಆರ್‌ಎಲ್‌ಎಂ ಒಕ್ಕೂಟದ ಮಹಿಳಾ ಸಿಬ್ಬಂದಿಗಳಿಗೆ ಉಚಿತವಾಗಿ ಮುಟ್ಟಿನ ಕಪ್‌ಗಳನ್ನು ವಿತರಿಸಲಾಯಿತು. ಬೇಸಿಗೆಯಲ್ಲಿ ಬಿಸಿಯಾದ ಗಾಳಿ ಶಾಖ ತರಂಗ ನಿಯಂತ್ರಿಸಿ ಆರೋಗ್ಯ ಸುರಕ್ಷತೆ ಕಾಪಾಡಿಕೊಳ್ಳುವ ಕುರಿತು ಜನಜಾಗೃತಿ ಮೂಡಿಸುವ ಕರಪತ್ರ ಬಿಡುಗಡೆ ಮಾಡಲಾಯಿತು.