ಬೀದಿಬದಿಯ ತಿಂಡಿ, ತಿನಿಸು ಅಂಗಡಿಗಳಲ್ಲಿ ಶುಚಿತ್ವ, ಗುಣಮಟ್ಟ ಕಾಪಾಡಿ: ಮುಖ್ಯಾಧಿಕಾರಿ

KannadaprabhaNewsNetwork |  
Published : Oct 01, 2026, 01:45 AM IST
ಆಹಾರದ ಗುಣಮಟ್ಟವನ್ನು ಪರಿಶೀಲಿಸುತ್ತೀರುವ ಪುರಸಭೆಯ ಮುಖ್ಯಾಧಿಕಾರಿ ಜೆ.ವಿ.ಮಂಜುನಾಥ್, ಹಿರಿಯ ಆರೋಗ್ಯ ನಿರೀಕ್ಷಕ ಶಿವರುದ್ರಪ್ಪ | Kannada Prabha

ಸಾರಾಂಶ

Maintain hygiene and quality at roadside food stalls: Chief Officer

- ನಿಯಮ ಉಲ್ಲಂಘಿಸಿದ ಕೆಲ ಅಂಗಡಿಗಳ ಮಾಲೀಕರಿಗೆ ನೋಟಿಸ್

- - -

ಚನ್ನಗಿರಿ: ಪಟ್ಟಣದ ಪುರಸಭಾ ವ್ಯಾಪ್ತಿಯ ಮುಖ್ಯ ರಸ್ತೆಗಳ ಬದಿಗಳಲ್ಲಿನ ತಿಂಡಿ-ತಿಸಿಸು ಅಂಗಡಿಗಳಿಗೆ ಬುಧವಾರ ಪುರಸಭೆ ಮುಖ್ಯಾಧಿಕಾರಿ ಜೆ.ವಿ.ಮಂಜುನಾಥ್, ಹಿರಿಯ ಆರೋಗ್ಯ ನಿರೀಕ್ಷಕ ಶಿವರುದ್ರಪ್ಪ ಭೇಟಿ ನೀಡಿ, ಆಹಾರದ ಗುಣಮಟ್ಟ ಮತ್ತು ಸುಚಿತ್ವ ಪರಿಶೀಲನೆ ಮಾಡಿದರು. ಈ ಸಂದರ್ಭ ನಿಯಮ ಉಲ್ಲಂಘಿಸಿದ ಕೆಲ ಬೀದಿಬದಿ ಅಂಗಡಿಗಳ ಮಾಲೀಕರಿಗೆ ನೋಟಿಸ್ ನೀಡಿದರು.

ಈ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿದ ಅಧಿಕಾರಿಗಳು, ಪಟ್ಟಣದ ಮುಖ್ಯ ಬಸ್ ನಿಲ್ದಾಣದ ಪಕ್ಕದಲ್ಲಿ ಮತ್ತು ಎಲ್.ಐ.ಸಿ. ಕಚೇರಿಗೆ ಹೋಗುವ ರಸ್ತೆಯು ಸದಾ ವಾಹನಗಳು ಮತ್ತು ಜನದಟ್ಟಣೆ ಪ್ರದೇಶವಾಗಿದೆ. ಈ ಪ್ರದೇಶದಲ್ಲಿ ಇಟ್ಟುಕೊಂಡಿರುವ ತಿಂಡಿ-ತಿನಿಸು ಅಂಗಡಿಗಳಲ್ಲಿ ಯಾವುದೇ ಆಹಾರದ ಶುಚಿತ್ವ ಕಾಪಾಡಿಕೊಳ್ಳದೇ ತಿಂಡಿ-ತಿನಿಸುಗಳನ್ನು ತೆರೆದ ತಟ್ಟೆಗಳಲ್ಲಿಟ್ಟು ಮಾರಾಟ ಮಾಡುತ್ತಿದ್ದಾರೆ. ರಸ್ತೆಯಲ್ಲಿ ಸಂಚರಿಸುವ ವಾಹನಗಳಿಂದ ಬರುವ ಧೂಳು, ಕ್ರಿಮಿ, ಕೀಟಗಳು ನೇರವಾಗಿ ತೆರೆದಿಟ್ಟ ಆಹಾರ ಪದಾರ್ಥಗಳ ಮೇಲೆ ಕುಳಿತುಕೊಳ್ಳುತ್ತವೆ. ಪರಿಣಾಮ ಜನರ ಆರೋಗ್ಯದ ಮೇಲೆ ದುಶ್ಪರಿಣಾಮ ಬೀರುವ ಮತ್ತು ಸಾಂಕ್ರಾಮಿಕ ರೋಗಗಳು ಹರಡುತ್ತವೆ. ಈ ಹಿನ್ನೆಲೆ ಹಲವಾರು ದೂರುಗಳ ಬಂದಿವೆ. ಶುಚಿತ್ವದಲ್ಲಿ ಮತ್ತು ಆಹಾರದ ಗುಣಮಟ್ಟ ರಕ್ಷಣೆ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಹಿರಿಯ ಆರೋಗ್ಯ ನಿರೀಕ್ಷಕ ಶಿವರುದ್ರಪ್ಪ ಮಾತನಾಡಿ, ಪ್ಲಾಸ್ಟಿಕ್ ಮನುಷ್ಯನ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಪ್ಲಾಸ್ಟಿಕ್ ಹಾಳೆಗಳನ್ನು ಬಳಸಿ ಇಡ್ಲಿ ಬೇಯಿಸುವುದು, ಬಿಸಿ ಆಹಾರವನ್ನು ಪ್ಲಾಸ್ಟಿಕ್ ಹಾಳೆಗಳ ಮೇಲೆ ಹಾಕಿಕೊಡುವುದು ಕಂಡುಬಂದರೆ ಅಂತಹ ಅಂಗಡಿಗಳ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಜರುಗಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಕಿರಿಯ ಆರೋಗ್ಯ ನಿರೀಕ್ಷಕ ಲೋಕೇಶ್ ಸೇರಿದಂತೆ ಕಚೇರಿ ಸಿಬ್ಬಂದಿ ಹಾಜರಿದ್ದರು.

- - -

-30ಕೆಸಿಎನ್ಜಿ2:

ಚನ್ನಗಿರಿ ಪುರಸಭೆ ಮುಖ್ಯಾಧಿಕಾರಿ ಜೆ.ವಿ.ಮಂಜುನಾಥ್, ಹಿರಿಯ ಆರೋಗ್ಯ ನಿರೀಕ್ಷಕ ಶಿವರುದ್ರಪ್ಪ ಆಹಾರದ ಗುಣಮಟ್ಟವನ್ನು ಪರಿಶೀಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಕರು ರಾಜಕೀಯದಿಂದ ದೂರ ಉಳಿಯಬೇಕು: ಪಿ.ಎಂ.ನರೇಂದ್ರಸ್ವಾಮಿ
ಅಂಕಗಳು ಕಲಿಕೆಯ ಒಂದು ಭಾಗವೇ ಹೊರತು ಅದೇ ಶಿಕ್ಷಣದ ಮೂಲ ಗುರಿಯಲ್ಲ