ಕೃಷಿ ಪರಿಕರಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಿ: ರೇವಣಸಿದ್ದಪ್ಪ

KannadaprabhaNewsNetwork |  
Published : May 24, 2025, 12:13 AM IST
ಹೊನ್ನಾಳಿ ಫೋಟೋ 22ಎಚ್.ಎಲ್.ಐ1ಕೃಷಿ  ನಿರ್ದೇಶಕರ ಕಚೇರಿಯಲ್ಲಿ ಏರ್ಪಡಿಸಿದ್ದ 2025-26 ನೇ ಸಾಲಿನ ಮುಂಗಾರು ಹಂಗಾಮಿನ ಕೃಷಿ ಪರಿಕರ ದಾಸ್ತಾನು –ವಿತರಣೆ ಕುರಿತು ತರಬೇತಿ ಹಾಗೂ ಸುರಕ್ಷಿತ ಕೀಟ ನಾಶ ಬಳಕೆ - ಬೀಜೊಪಚಾರ ಆಂದೋಲನ ಕಾರ್ಯಕ್ರಮವನ್ನು ಉದ್ಗಾಟಿಸಿ ಹೊನ್ನಾಳಿ ವಿಭಾಗದ ುಪ ಕೃಷಿ ನಿರ್ದೇಶಕ ರೇವಣಸಿದ್ದಗೌಡ ಮಾತನಾಡಿದರು.                                                   | Kannada Prabha

ಸಾರಾಂಶ

ತಾಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಕೃಷಿಗೆ ಬಳಸುವ ಪರಿಕರಗಳಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಳ್ಳಬೇಕು ಹಾಗೂ ಕೃಷಿ ಪರಿಕರಗಳನ್ನು ಸರಿಯಾದ ಕ್ರಮದಲ್ಲಿ ಅಗತ್ಯ ದಾಖಲಾತಿ ನಿರ್ವಹಣೆ ಮಾಡಿ, ಎಚ್ಚರಿಕೆಯಿಂದ ವ್ಯವಹಾರ ಮಾಡಬೇಕು ಎಂದು ಹೊನ್ನಾಳಿ ವಿಭಾಗದ ಉಪ ಕೃಷಿ ನಿರ್ದೇಶಕ ರೇವಣಸಿದ್ದಪ್ಪ ಸೂಚನೆ ನೀಡಿದರು.

- ಹೊನ್ನಾಳಿಯಲ್ಲಿ ಕೀಟ ನಾಶಕ ಬಳಕೆ- ಬೀಜೋಪಚಾರ ಆಂದೋಲನ ಕಾರ್ಯಕ್ರಮ

- - -

ಕನ್ನಡಪ್ರಭ ವಾರ್ತೆ ಹೊನ್ನಾಳಿ

ತಾಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಕೃಷಿಗೆ ಬಳಸುವ ಪರಿಕರಗಳಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಳ್ಳಬೇಕು ಹಾಗೂ ಕೃಷಿ ಪರಿಕರಗಳನ್ನು ಸರಿಯಾದ ಕ್ರಮದಲ್ಲಿ ಅಗತ್ಯ ದಾಖಲಾತಿ ನಿರ್ವಹಣೆ ಮಾಡಿ, ಎಚ್ಚರಿಕೆಯಿಂದ ವ್ಯವಹಾರ ಮಾಡಬೇಕು ಎಂದು ಹೊನ್ನಾಳಿ ವಿಭಾಗದ ಉಪ ಕೃಷಿ ನಿರ್ದೇಶಕ ರೇವಣಸಿದ್ದಪ್ಪ ಸೂಚನೆ ನೀಡಿದರು.

ಕೃಷಿ ನಿರ್ದೇಶಕರ ಕಚೇರಿಯಲ್ಲಿ ಕೃಷಿ ಪರಿಕರ, ರಸಗೊಬ್ಬರ, ಬೀಜ ಮಾರಾಟಗಾರರಿಗೆ ಏರ್ಪಡಿಸಿದ್ದ 2025- 26ನೇ ಸಾಲಿನ ಮುಂಗಾರು ಹಂಗಾಮಿನ ಕೃಷಿ ಪರಿಕರ ದಾಸ್ತಾನು –ವಿತರಣೆ ಕುರಿತು ತರಬೇತಿ ಹಾಗೂ ಸುರಕ್ಷಿತ ಕೀಟ ನಾಶಕ ಬಳಕೆ- ಬೀಜೋಪಚಾರ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಒಂದು ವೇಳೆ ಸರಿಯಾದ ದಾಖಲೆಗಳನ್ನು ನಿರ್ವಹಿಸದೇ, ಕಾನೂನು ಬಾಹಿರವಾಗಿ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ಮಾರಾಟ ಮಾಡಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಲೈಸನ್ಸ್‌ ಸಹ ರದ್ದುಪಡಿಸಲಾಗುವುದು ಎಂದು ಎಚ್ಚರಿಸಿದರು.

ಸಹಾಯಕ ಕೃಷಿ ನಿರ್ದೇಶಕ ಬಿ.ಎನ್. ವಿಶ್ವನಾಥ ಮಾತನಾಡಿ, ಉತ್ತಮ ಗುಣಮಟ್ಟದ ಬಿತ್ತನೆ ಬೀಜ, ಕೀಟನಾಶಕ ಮತ್ತು ರಸಗೊಬ್ಬರಗಳನ್ನು ಹೊನ್ನಾಳಿ, ನ್ಯಾಮತಿ ತಾಲೂಕಿನ ರೈತರಿಗೆ ಮಾತ್ರ ನಿಗದಿತ ಬೆಲೆಯಲ್ಲಿ ಸಕಾಲಕ್ಕೆ ನೀಡಬೇಕೆಂದು ಮತ್ತು ಕಾಂಪ್ಲೆಕ್ಸ್ ರಸಗೊಬ್ಬರಗಳ ಬಳಕೆ, ಯೂರಿಯ ರಸಗೊಬ್ಬರದ ಬಳಕೆ ಮಹತ್ವ ರೈತರಿಗೆ ತಿಳಿಸಲು ಎಲ್ಲ ಕೃಷಿ ಪರಿಕರ ಮಾರಾಟಗಾರರಿಗೆ ಸೂಚಿಸಿದರು.

ಕೃಷಿ ಇಲಾಖೆಯ ಜಾರಿದಳ ಸಹಾಯಕ ಕೃಷಿ ನಿರ್ದೇಶಕರಾದ ಶ್ರೀ ಗೋವಧನ್‌ ಮಾತನಾಡಿ, ತಾಲೂಕಿನ ಎಲ್ಲ ಕೃಷಿ ಪರಿಕರ ಮಾರಾಟಗಾರರಿಗೆ ಬಿತ್ತನೆ ಬೀಜ, ಕೀಟನಾಶಕ ಮತ್ತು ರಸಗೋಬ್ಬರ ಕಾಯ್ದೆಗಳ ಮತ್ತು ಕಾನೂನಿನ ಬಗ್ಗೆ ಅರಿವು ಮೂಡಿಸುವ ಉಪನ್ಯಾಸ ನೀಡಿದರು.

ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕಿನ ಕೃಷಿ ಪರಿಕರ ಮಾರಾಟಗಾರರ ಸಂಘ ಅಧ್ಯಕ್ಷರಾದ ಪುಟ್ಟಣ್ಣ ಹಾಗೂ ನ್ಯಾಮತಿ ಸುಚ್ಚಿನ ವಾಗೀಶ್ ಮಾತನಾಡಿದರು. ಹೊನ್ನಾಳಿ, ನ್ಯಾಮತಿ ತಾಲೂಕಿನ ಕೃಷಿ ಅಧಿಕಾರಿಳು, ಸಿಬ್ಬಂದಿ ಭಾಗವಹಿಸಿದ್ದರು.

- - -

-22ಎಚ್.ಎಲ್.ಐ1.ಜೆಪಿಜಿ:

ಕಾರ್ಯಕ್ರಮವನ್ನು ಹೊನ್ನಾಳಿ ವಿಭಾಗದ ಉಪ ಕೃಷಿ ನಿರ್ದೇಶಕ ರೇವಣಸಿದ್ದಗೌಡ ಉದ್ಘಾಗಾಟಿಸಿದರು.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ