ಪ್ರತಿವರ್ಷ ಫಲಿತಾಂಶದಲ್ಲಿ ಗುಣಮಟ್ಟ ಕಾಯ್ದುಕೊಳ್ಳಿ

KannadaprabhaNewsNetwork |  
Published : May 03, 2026, 03:00 AM IST
ರಾಮದುರ್ಗದ ಗುರುಭವನದಲ್ಲಿ ಗುರುವಾರ ಹಮ್ಮಿಕೊಂಡ ಅಭಿನಂದನಾ ಸಮಾರಂಭದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರತಿಶತ 98.17 ಅಂಕದೊಂದಿಗೆ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದ ಆಯುಷ್ ಶಲವಡಿ ಅವರನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ರಾಮದುರ್ಗ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶಿಕ್ಷಕರು ಮಕ್ಕಳ ಫಲಿತಾಂಶದಲ್ಲಿ ಮಾಡಿರುವ ಸಾಧನೆಯು ಪ್ರತಿವರ್ಷವೂ ಪುನಾರಾವರ್ತನೆಯಾಗುವಂತೆ ಗುಣಮಟ್ಟ ಕಾಯ್ದುಕೊಳ್ಳಬೇಕು. ತಾಲೂಕಿನ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ತಾಪಂ ಇಒ ಬಸವರಾಜ ಐನಾಪೂರ ಹೇಳಿದರು.

ಕನ್ನಡಪ್ರಭ ವಾರ್ತೆ ರಾಮದುರ್ಗ

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶಿಕ್ಷಕರು ಮಕ್ಕಳ ಫಲಿತಾಂಶದಲ್ಲಿ ಮಾಡಿರುವ ಸಾಧನೆಯು ಪ್ರತಿವರ್ಷವೂ ಪುನಾರಾವರ್ತನೆಯಾಗುವಂತೆ ಗುಣಮಟ್ಟ ಕಾಯ್ದುಕೊಳ್ಳಬೇಕು. ತಾಲೂಕಿನ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ತಾಪಂ ಇಒ ಬಸವರಾಜ ಐನಾಪೂರ ಹೇಳಿದರು.

ರಾಮದುರ್ಗದ ಗುರು ಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘದ ಸಹಯೋಗದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನೂರಕ್ಕೆ ನೂರರಷ್ಟು ಫಲಿತಾಂಶ ಪಡೆದ ಶಾಲಾ ಮುಖ್ಯಸ್ಥರು ಮತ್ತು ತಾಲೂಕಿಗೆ ಪ್ರಥಮ ಸ್ಥಾನ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ 7 ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಮುಂಚಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಮದುರ್ಗ ತಾಲೂಕಿನ ಹೆಸರು ಕೊನೆಯ ಸ್ಥಾನದಲ್ಲಿ ಇರುತ್ತಿತ್ತು. ಶಿಕ್ಷಕರ ನಿರಂತರ ಪ್ರಯತ್ನದಿಂದ ಜಿಲ್ಲೆಯಲ್ಲಿ ಈ ಸಾರಿ ನಾಲ್ಕನೇ ಸ್ಥಾನಕ್ಕೆ ಬಂದು ತಲುಪಿದೆ ಎಂದು ಹರ್ಷ ವ್ಯಕ್ತಪಡಿಸಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬಳೆ ಮಾತನಾಡಿ, ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ರಾಮದುರ್ಗ ತಾಲೂಕು ಐತಿಹಾಸಿಕ ಸಾಧನೆ ಮಾಡಿದೆ. ಈ ಫಲಿತಾಂಶ ಬರಲು ವಿಷಯ ತಜ್ಞ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರ ಸತತ ಪ್ರಯತ್ನ ಫಲ ನೀಡಿದೆ. ಮಕ್ಕಳು ನಿರಂತರ ಅಧ್ಯಯನ ಕೈಗೊಂಡು ತಾಲೂಕಿನ ಕೀರ್ತಿ ಹೆಚ್ಚಿಸಿದ್ದಾರೆ ಎಂದು ಹೇಳಿದರು.ಶಿಕ್ಷಣ ಸಂಯೋಜಕ ಶ್ರೀಕಾಂತ ಕರಲಿಂಗಪ್ಪನವರ ಪ್ರಾಸ್ತಾವಿಕ ಮಾತನಾಡಿದರು. ಅಕ್ಷರದಾಸೋಹದ ರಾಜಶೇಖರ ಹಿರೇಮಠ, ಎಸ್.ವೈ.ಸನ್ನಿ, ಉಮಾ ಕಡಕೋಳ, ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಆಯೂಷ್ ಶಲವಡಿ ಮಾತನಾಡಿದರು. ಎ.ವಿ.ಪಾಟೀಲ ಸ್ವಾಗತಿಸಿದರು. ಮಾರುತಿ ಜಂಗವಾಡ ನಿರೂಪಿಸಿದರು.ಪ್ರಥಮ ಶ್ರೇಣಿಯಲ್ಲಿ ಪಾಸಾದ ಆಯುಷ್ ಶಲವಡಿ, ಸೃಷ್ಠಿ ಸತ್ತಿಗೇರಿ, ನಾಗರಾಜ ಮಿಂಚಲ, ವಿಜಯಲಕ್ಷ್ಮೀ ದಡ್ಡಿ, ರಂಜನಾ ಅಂಗಡಿ, ಸಂದೀಪ ಈಟಿ, ಮಹ್ಮದ ಇಕ್ಬಾಲ ಪಡದಾರ ಸೇರಿ ತಾಲೂಕಿನ 22 ಶಾಲೆಗಳ ಮುಖ್ಯಸ್ಥರನ್ನೂ ಸನ್ಮಾನಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತುಂಗಭದ್ರಾ ಜಲಾಶಯ ಈಗ ಸುಭದ್ರ: ಸಚಿವ ತಂಗಡಗಿ
ಉಷ್ಣ ಭೂಮಿಯಲ್ಲಿ ಸೇಬು ಬೆಳೆದ ಮಾಜಿ ಸೈನಿಕ