ರಸ್ತೆ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಿ: ಬಸವಂತಪ್ಪ ಸೂಚನೆ

KannadaprabhaNewsNetwork |  
Published : Nov 05, 2026, 01:45 AM IST
ಕ್ಯಾಪ್ಷನ30ಕೆಡಿವಿಜಿ34, 35ದಾವಣಗೆರೆ ತಾಲೂಕಿನ ಅತ್ತಿಗೆರೆ ಗ್ರಾಮದಲ್ಲಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿಯನ್ನು ಸಚಿವ ಕೆ.ಎಸ್.ಬಸವಂತಪ್ಪ ಪರಿಶೀಲನೆ ನಡೆಸಿದರು. | Kannada Prabha

ಸಾರಾಂಶ

ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಅತ್ತಿಗೆರೆ ಗ್ರಾಮದಿಂದ ಮಲೇನಹಳ್ಳಿ ಗ್ರಾಮದವರೆಗೆ ಲೋಕೋಪಯೋಗಿ ಇಲಾಖೆ ವತಿಯಿಂದ ಸಿ.ಸಿ. ರಸ್ತೆ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದ್ದು, ಸಚಿವ ಕೆ.ಎಸ್. ಬಸವಂತಪ್ಪ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಗುಣಮಟ್ಟ ಪರಿಶೀಲಿಸಿದ್ದಾರೆ.

- ಅತ್ತಿಗೆರೆ-ಮಲೇನಹಳ್ಳಿ ಸಿ.ಸಿ. ರಸ್ತೆ ಕಾಮಗಾರಿ ಪರಿಶೀಲನೆ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಅತ್ತಿಗೆರೆ ಗ್ರಾಮದಿಂದ ಮಲೇನಹಳ್ಳಿ ಗ್ರಾಮದವರೆಗೆ ಲೋಕೋಪಯೋಗಿ ಇಲಾಖೆ ವತಿಯಿಂದ ಸಿ.ಸಿ. ರಸ್ತೆ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದ್ದು, ಸಚಿವ ಕೆ.ಎಸ್. ಬಸವಂತಪ್ಪ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಗುಣಮಟ್ಟ ಪರಿಶೀಲಿಸಿದರು.

ರಸ್ತೆ ನಿರ್ಮಾಣದಲ್ಲಿ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡಬಾರದು. ಸರ್ಕಾರ ನಿಗದಿಪಡಿಸಿರುವ ಮಾನದಂಡಗಳು ಮತ್ತು ತಾಂತ್ರಿಕ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಕಾಮಗಾರಿ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಆಗುವಂತೆ ರಸ್ತೆಗಳನ್ನು ನಿರ್ಮಿಸುವುದು ಸರ್ಕಾರದ ಆದ್ಯತೆಯಾಗಿದೆ. ಗ್ರಾಮೀಣ ಪ್ರದೇಶಗಳ ರಸ್ತೆ ಅಭಿವೃದ್ಧಿಯಿಂದ ರೈತರು, ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ಹೆಚ್ಚಿನ ಅನುಕೂಲ ಆಗಲಿದೆ. ಹೀಗಾಗಿ, ಅಭಿವೃದ್ಧಿ ಕಾಮಗಾರಿಗಳನ್ನು ಕೇವಲ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವುದಷ್ಟೇ ಅಲ್ಲದೇ, ದೀರ್ಘಕಾಲ ಬಾಳಿಕೆ ಬರುವಂತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಕಾಮಗಾರಿ ನಡೆಯುವ ಸಂದರ್ಭ ಬಳಸುವ ಸಾಮಗ್ರಿಗಳ ಗುಣಮಟ್ಟ, ರಸ್ತೆ ನಿರ್ಮಾಣದ ತಾಂತ್ರಿಕ ವಿಧಾನ ಹಾಗೂ ಕಾಮಗಾರಿಯ ಪ್ರತಿ ಹಂತದ ಮೇಲೂ ಅಧಿಕಾರಿಗಳು ನಿಗಾ ವಹಿಸಬೇಕು. ಗುತ್ತಿಗೆದಾರರು ನಿಯಮಾನುಸಾರ ಕೆಲಸ ನಿರ್ವಹಿಸುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೇ ಕಾಮಗಾರಿಯನ್ನು ಸಮರ್ಪಕವಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಸಾರ್ವಜನಿಕರ ತೆರಿಗೆ ಹಣದಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗಳು ಜನರಿಗೆ ದೀರ್ಘಕಾಲ ಉಪಯೋಗವಾಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸಚಿವರು ಹೇಳಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಅರುಣ್ ಕುಮಾರ್, ಶಿವಣ್ಣ, ಸಿದ್ದಪ್ಪ, ರವಿ, ನಿತಿನ್, ಮನೋಜ್, ಮಂಜುನಾಥ್, ಸುನಿಲ್ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

- - -

-30ಕೆಡಿವಿಜಿ34, 35: ದಾವಣಗೆರೆ ತಾಲೂಕಿನ ಅತ್ತಿಗೆರೆ ಗ್ರಾಮದಲ್ಲಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿಯನ್ನು ಸಚಿವ ಕೆ.ಎಸ್.ಬಸವಂತಪ್ಪ ಪರಿಶೀಲನೆ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ಟಿಂಗ್ ಪ್ರಕರಣದಲ್ಲಿ ಎಚ್ಡಿಕೆ ತನಿಖೆಗೆ ಸಹಕರಿಸಲಿ
ಕಿತ್ತೂರು ತಾಲೂಕಿನ 4ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರೊ.ಜಿ.ಸಿ.ಕೋಟಗಿ ಸರ್ವಾಧ್ಯಕ್ಷ