ಕನ್ನಡಪ್ರಭ ವಾರ್ತೆ ಕೋಲಾರಶಾಲೆಯಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿ ಶಾಲಾ ಮಕ್ಕಳನ್ನು ತಮ್ಮ ಮಕ್ಕಳಂತೆ ಭಾವಿಸಿ, ಊಟದಲ್ಲಿ ಶುಚಿ, ರುಚಿ, ಗುಣಮಟ್ಟ ಇರುವಂತೆ ನೋಡಿಕೊಳ್ಳಬೇಕು ಎಂದು ಅಕ್ಷರದಾಸೋಹ ಜಿಲ್ಲಾ ಶಿಕ್ಷಣಾಧಿಕಾರಿ ತಿಮ್ಮರಾಯಪ್ಪ ಕರೆ ನೀಡಿದರು.ತಾಲೂಕಿನ ವೇಮಗಲ್ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಧಾನ ಮಂತ್ರಿ ಶಕ್ತಿ ಪೋಷಣ್‌ನಿರ್ಮಾಣ್ ಯೋಜನೆ ಆಶ್ರಯದಲ್ಲಿ ವೇಮಗಲ್ ಹೋಬಳಿ ಸರ್ಕಾರಿ, ಅನುದಾನಿತ ಶಾಲಾ ಅಡುಗೆ ಸಿಬ್ಬಂದಿಗೆ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.ಅಡುಗೆಯಲ್ಲೂ ಶುಚಿತ್ವ ಕಾಪಾಡಿ
ಅಕ್ಷರದಾಸೋಹ ಕಾರ್ಯಕ್ರಮವನ್ನು ಕೋಲಾರ ತಾಲೂಕಿನಲ್ಲಿ ಅತ್ಯಂತ ಯಶಸ್ವಿಯಾಗಿ ಯಾವುದೇ ಸಮಸ್ಯೆಗಳಿಲ್ಲದಂತೆ ನಿರ್ವಹಿಸಿಕೊಂಡು ಬರುತ್ತಿದ್ದೇವೆ, ಅಡುಗೆ ಸಾಮಗ್ರಿಗಳ ನಿರ್ವಹಣೆ, ಲೆಕ್ಕಪತ್ರಗಳನ್ನು ಸರಿಯಾಗಿ ನಿರ್ವಹಿಸಿ, ಮಕ್ಕಳ ಹಾಜರಾತಿಗೆ ತಕ್ಕಂತೆ ಧಾನ್ಯಗಳ ಬಳಕೆ, ಸಂಗ್ರಹಣೆ ಇರಬೇಕು ಎಂದರು.ಮಕ್ಕಳ ಆರೋಗ್ಯ ಕಾಪಾಡಬೇಕು
ಅಕ್ಷರದಾಸೋಹ ಸಹಾಯಕ ನಿರ್ದೇಶಕ ಟಿ.ಎಸ್.ಸುಬ್ರಮಣಿ ಮಾತನಾಡಿ, ಒಟ್ಟಾರೆ ಮಕ್ಕಳ ಆರೋಗ್ಯ ಕಾಪಾಡುವುದು ಶಿಕ್ಷಕರ ಜತೆಗೆ ಅಡುಗೆ ಸಿಬ್ಬಂದಿಯದ್ದು ಜವಾಬ್ದಾರಿಯಾಗಿದೆ, ಶಾಲೆಯ ಅಡುಗೆ ಮನೆ ನಿಮ್ಮ ಮನೆಯ ಅಡುಗೆ ಮನೆ ಎಂದೇ ಭಾವಿಸಿ, ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ, ಅಡುಗೆ ಮನೆಯಲ್ಲಿ ಜೇಡರ ಬಲೆ, ಹಲ್ಲಿ, ಇಲಿ, ಹೆಗ್ಗಣಗಳು ಇರದಂತೆ ಎಚ್ಚರವಹಿಸಿ ಎಂದು ಕಿವಿಮಾತು ಹೇಳಿದರು.ಆರೋಗ್ಯ ಶಿಕ್ಷಣಾಧಿಕಾರಿ ಗೀತಾ ಮಾತನಾಡಿ, ಸಾಂಕ್ರಾಮಿಕ ರೋಗಗಳ ತಡೆ, ಸೊಳ್ಳೆಗಳ ನಾಶ ಮತ್ತಿತರ ಆರೋಗ್ಯ ರಕ್ಷಣಾ ಕಾರ್ಯಕ್ರಮಗಳ ಕುರಿತು ಮಕ್ಕಳಿಗೆ ಅರಿವು ಮೂಡಿಸಿದರು. ಶೌಚಕ್ಕೆ ಹೋದ ನಂತರ, ಊಟಕ್ಕೆ ಮುನ್ನ ತಪ್ಪದೇ ಕೈತೊಳೆಯುವ ಅಭ್ಯಾಸ ಮಾಡಿ ಎಂದು ಸಲಹೆ ನೀಡಿದರು.ಶ್ರೀ ಗುರು ಚೈತನ್ಯ ಗ್ಯಾಸ್ ಏಜೆನ್ಸಿಯ ಗುರುರಾಜ್, ಅಡುಗೆ ಅನಿಲ ಬಳಕೆ, ಅವಘಡ ತಪ್ಪಿಸಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ನೀಡಿ, ತಿಂಗಳಿಗೆ ಅಗತ್ಯವಾದ ಅಡುಗೆ ಅನಿಲ ಸಿಲೆಂಡರ್‌ಗಳ ಕುರಿತು ಮಾಹಿತಿ ಇಂಡೆಂಟ್ ನೀಡಿ ಎಂದರು.ಸಿಲಿಂಡರ್ ಬಗ್ಗೆ ಮುನ್ನೆಚ್ಚರಿಕೆ