ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನಂತರ ಮೆಳ್ಳಿಗೇರಿ ಗ್ರಾಪಂ ವ್ಯಾಪ್ತಿಯ ಕಿಶೋರಿ ಗ್ರಾಮದಲ್ಲಿ ಜಲ ಜೀವನ್ ಮಿಷನ್ (ಎಎಒ) ಕಾಮಗಾರಿಗಳನ್ನು ಪರಿಶೀಲಿಸಿದರು. ಮೆಳ್ಳಿಗೇರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿರುವ ಶೈಕ್ಷಣಿಕ ವಾತಾವರಣ, ವಸತಿ ವ್ಯವಸ್ಥೆ, ಆಹಾರದ ಗುಣಮಟ್ಟ, ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯ ಹಾಗೂ ಇತರ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಿದ ಸಿಇಒ ಅವರು ವಿದ್ಯಾರ್ಥಿಗಳ ಆರೋಗ್ಯ, ಸುರಕ್ಷತೆ ಹಾಗೂ ಕಲಿಕಾ ವಾತಾವರಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಶಾಲಾ ಆಡಳಿತಕ್ಕೆ ಸೂಚಿಸಿದರು.
ಬಳಿಕ ಹಲಗಲಿ ಗ್ರಾಮಕ್ಕೆ ಭೇಟಿ ನೀಡಿ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಭ್ಯವಿರುವ ವೈದ್ಯಕೀಯ ಸೇವೆಗಳು, ಔಷಧಿ ಲಭ್ಯತೆ, ವೈದ್ಯರು ಹಾಗೂ ಸಿಬ್ಬಂದಿಯ ಹಾಜರಾತಿ, ತಾಯಿ-ಮಗು ಆರೋಗ್ಯ ಸೇವೆಗಳು ಹಾಗೂ ಸ್ವಚ್ಛತೆಯನ್ನು ಪರಿಶೀಲಿಸಿದರು. ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನಿರಂತರವಾಗಿ ಒದಗಿಸಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.ಅದೇ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಕಾಮಗಾರಿಗಳು ಹಾಗೂ ಡಿಜಿಟಲ್ ಗ್ರಂಥಾಲಯ ವೀಕ್ಷಿಸಿ, ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು. ಗ್ರಾಮೀಣ ಪ್ರದೇಶಗಳ ಯುವಜನರು ಮತ್ತು ವಿದ್ಯಾರ್ಥಿಗಳು ಡಿಜಿಟಲ್ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಗ್ರಾಪಂಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು. ಸಾರ್ವಜನಿಕರಿಗೆ ಗುಣಮಟ್ಟದ ಸೇವೆಗಳನ್ನು ಸಮಯಕ್ಕೆ ಸರಿಯಾಗಿ ತಲುಪಿಸುವುದು ಮತ್ತು ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟವನ್ನು ಕಾಪಾಡಿಕೊಳ್ಳುವುದು ಅಧಿಕಾರಿಗಳ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದರು. ಪರಿಶೀಲನೆಯ ಸಂದರ್ಭದಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳಿಗೆ ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು, ನಿಗದಿತ ಗಡುವಿನೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಹಾಗೂ ಸಾರ್ವಜನಿಕರ ಅಹವಾಲುಗಳಿಗೆ ತ್ವರಿತವಾಗಿ ಸ್ಪಂದಿಸಿ ಜನಸ್ನೇಹಿ ಆಡಳಿತವನ್ನು ಖಚಿತಪಡಿಸಬೇಕು ಎಂದು ನಿರ್ದೇಶನ ನೀಡಿದರು. ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವ ಹಾಗೂ ಪರಿಣಾಮಕಾರಿ ಮೇಲ್ವಿಚಾರಣೆಗೆ ಹೆಚ್ಚಿನ ಒತ್ತು ನೀಡುವಂತೆ ಸೂಚಿಸಿದರು.
-ಗಜಾನನ ಬಾಲೆ, ಜಿಪಂ ಸಿಇಒ