ಸಂಡೂರು:
ಬಿಕೆಜಿ ಗಣಿ ಆವರಣದಲ್ಲಿ ಗುರುವಾರ ಬಿಕೆಜಿ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.ಬಿಕೆಜಿ ಸಂಸ್ಥೆಯು ಮೊದಲಿನಿಂದಲೂ ಹಲವು ಸಮಾಜ ಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ಸಂಸ್ಥೆ ವತಿಯಿಂದ ಸೆ.೧೪ರಿಂದ ಅ.೧ರವರೆಗೆ ಸ್ವಚ್ಛತೆಯನ್ನು ಕಾಪಾಡುವ ಕುರಿತಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ನಾವು ನಮ್ಮ ಮನೆ ಮತ್ತು ಸುತ್ತಲಿನ ಪರಿಸರದಲ್ಲಿ ಸ್ವಚ್ಛತೆ ಕಾಪಾಡಲು ಹೆಚ್ಚು ಗಮನ ನೀಡಬೇಕು ಎಂದರು.
ಐಬಿಎಂ (ಇಂಡಿಯನ್ ಬ್ಯುರೋ ಆಫ್ ಮೈನ್ಸ್) ಬೆಂಗಳೂರು ವಿಭಾಗದ ಪ್ರಾದೇಶಿಕ ಗಣಿ ನಿಯಂತ್ರಕ ಡಾ. ಸುರೇಶ್ ಪ್ರಸಾದ್ ಹಾಗೂ ಗಣಿ ಭೂವಿಜ್ಞಾನಿ ಡಾ. ಸುಧಾಕರ್ ಅವರು ಬಿಕೆಜಿ ಸಂಸ್ಥೆ ವತಿಯಿಂದ ಕೈಗೊಳ್ಳಲಾದ ವಿವಿಧ ಪರಿಸರ ಸ್ನೇಹಿ ಚಟುವಟಿಕೆಗಳನ್ನು ಶ್ಲಾಘಿಸಿದರು.ಬಿಕೆಜಿ ಗ್ಲೋಬಲ್ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿವಿಧ ಸ್ಪರ್ಧೆಗಳಲ್ಲಿ ಜಯಗಳಿಸಿದ ವಿದ್ಯಾರ್ಥಿಗಳಿಗೆ ಖಾದಿ ಚೀಲ ಹಾಗೂ ಬಹುಮಾನಗಳನ್ನು ವಿತರಿಸಲಾಯಿತು.
ಸಂಡೂರಿನ ಬಿಕೆಜಿ ಗಣಿ ಆವರಣದಲ್ಲಿ ಗುರುವಾರ ಬಿಕೆಜಿ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ಬಿಕೆಜಿ ಗಣಿ ಕಂಪನಿಯ ನಿರ್ದೇಶಕ ನಾಗನಗೌಡ ಚಾಲನೆ ನೀಡಿದರು.