ಸ್ವಚ್ಛತೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ: ಬಿ.ಆರ್.ಯೋಗೀಶ್ ಕನ್ಯಾಡಿ

KannadaprabhaNewsNetwork | Published : Jan 9, 2025 12:46 AM

ಸಾರಾಂಶ

ಈಗಾಗಲೇ ಜ.5ರಿಂದ ದೇವಾಲಯಗಳ ಸ್ವಚ್ಛತಾ ಕಾರ್ಯ ಆರಂಭವಾಗಿದೆ. ಸಂಕ್ರಾಂತಿ ಹಬ್ಬದವರೆಗೆ ಸ್ವಚ್ಛತಾ ಕಾರ್ಯ ನಿರಂತರವಾಗಿ ನಡೆಯಲಿದೆ. ಪಟ್ಟಣದ ಪುರಾಣ ಪ್ರಸಿದ್ಧ ಉಗ್ರನರಸಿಂಹಸ್ವಾಮಿ, ವರದರಾಜಸ್ವಾಮಿ, ಶ್ರೀರಾಮ ದೇವಸ್ಥಾನ, ಶ್ರೀ ಮದ್ದೂರಮ್ಮ, ಶ್ರೀ ಹೊಳೆ ಆಂಜನೇಯ ಸ್ವಾಮಿ, ಶ್ರೀ ವೈದ್ಯನಾಥೇಶ್ವರ ಸ್ವಾಮಿ, ಚಿಕ್ಕ ಅಂಕನಹಳ್ಳಿ ಶ್ರೀ ನಂದಿ ಬಸವೇಶ್ವರ ದೇವಾಲಯಗಳುದಲ್ಲಿ ನಡೆಸಲಾಗಿದೆ.

ಕನ್ನಡಪ್ರಭ ವಾರ್ತೆ ಮದ್ದೂರು

ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಸಂಸ್ಥೆಯಿಂದ ತಾಲೂಕಿನ ಎಲ್ಲಾ ದೇವಾಲಯಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆ ತಾಲೂಕು ಯೋಜನಾಧಿಕಾರಿ ಬಿ.ಆರ್.ಯೋಗೀಶ್ ಕನ್ಯಾಡಿ ಹೇಳಿದರು.ಯೋಜನಾ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಕ್ಷೇತ್ರದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರ ಆಶಯದಂತೆ ತಾಲೂಕು, ಪಟ್ಟಣ ಒಳಗೊಂಡಂತೆ ಕಸಬಾ, ಚಿಕ್ಕ ಅರಸಿನಕೆರೆ, ಆತಗೂರು, ಕೊಪ್ಪ ಹೋಬಳಿಗಳಲ್ಲಿ ಒಟ್ಟು 800 ದೇವಾಲಯಗಳ ಸ್ವಚ್ಛತಾ ಕಾರ್ಯ ನಡೆಸಲಾಗುವುದು ಎಂದರು.

ಈಗಾಗಲೇ ಜ.5ರಿಂದ ದೇವಾಲಯಗಳ ಸ್ವಚ್ಛತಾ ಕಾರ್ಯ ಆರಂಭವಾಗಿದೆ. ಸಂಕ್ರಾಂತಿ ಹಬ್ಬದವರೆಗೆ ಸ್ವಚ್ಛತಾ ಕಾರ್ಯ ನಿರಂತರವಾಗಿ ನಡೆಯಲಿದೆ. ಪಟ್ಟಣದ ಪುರಾಣ ಪ್ರಸಿದ್ಧ ಉಗ್ರನರಸಿಂಹಸ್ವಾಮಿ, ವರದರಾಜಸ್ವಾಮಿ, ಶ್ರೀರಾಮ ದೇವಸ್ಥಾನ, ಶ್ರೀ ಮದ್ದೂರಮ್ಮ, ಶ್ರೀ ಹೊಳೆ ಆಂಜನೇಯ ಸ್ವಾಮಿ, ಶ್ರೀ ವೈದ್ಯನಾಥೇಶ್ವರ ಸ್ವಾಮಿ, ಚಿಕ್ಕ ಅಂಕನಹಳ್ಳಿ ಶ್ರೀ ನಂದಿ ಬಸವೇಶ್ವರ ದೇವಾಲಯಗಳುದಲ್ಲಿ ನಡೆಸಲಾಗಿದೆ ಎಂದರು.

ಅಲ್ಲದೇ, ಚಿಕ್ಕ ಅರಸಿನಕೆರೆ ಶ್ರೀ ಕಾಲಭೈರವೇಶ್ವರ, ಕೊಪ್ಪ ಹೋಬಳಿಯ ಆಬಲವಾಡಿ ಗ್ರಾಮದ ಶ್ರೀ ತೋಪಿನ ತಿಮ್ಮಪ್ಪ, ಮರಳಿಗ ಗ್ರಾಮದ ಶ್ರೀ ಚನ್ನಕೇಶ್ವರ ಸ್ವಾಮಿ, ಅರೆತಿಪ್ಪೂರು ಗ್ರಾಮದ ಜೈನಬಸದಿ ಸೇರಿದಂತೆ ತಾಲೂಕಿನ ಸುಮಾರು 800 ದೇವಾಲಯಗಳ ಆವರಣದಲ್ಲಿ ಗಿಡಗಂಟಿಗಳನ್ನು ತೆರವುಗೊಳಿಸುವ ಮೂಲಕ ಪ್ರಗತಿ ಬಂದು-ಸ್ವಸಹಾಯ ಸಂಘ ಸದಸ್ಯರುಗಳು, ಒಕ್ಕೂಟ ಪದಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಯೋಜನಾ ಕಚೇರಿ ಹಣಕಾಸು ಪ್ರಬಂಧಕರಾದ ಆರ್.ಪುಷ್ಪ, ಆಡಳಿತ ಸಹಾಯಕ ಪ್ರಬಂಧಕರಾದ ಎಸ್. ಪುನೀತ್ ಕುಮಾರ್ ಇದ್ದರು.

ಇಂದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

ಮಂಡ್ಯ: ನಗರದ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ಜ.9ರಂದು ಜಿಲ್ಲಾ ಮಟ್ಟದ 2024-25ರ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಮತ್ತು ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಬೆಳಗ್ಗೆ 9:30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಉಪಸ್ಥಿತಿ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಲಿದ್ದಾರೆ. ಶಾಸಕ ಪಿ.ರವಿಕುಮಾರ್ ಅಧ್ಯಕ್ಷತೆ ವಹಿಸುವರು. ಚೆಸ್ಕ್ ಅಧ್ಯಕ್ಷ, ಶಾಸಕ ರಮೇಶ ಬಂಡಿಸಿದ್ದೇಗೌಡ ಗೌರವ ಉಪಸ್ಥಿತಿಯಲ್ಲಿ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರಾದ ಮಧು ಜಿ. ಮಾದೇಗೌಡ, ದಿನೇಶ್ ಗೂಳಿಗೌಡ, ಕೆ.ವಿವೇಕಾನಂದ, ಜಿಲ್ಲೆಯ ಶಾಸಕರು, ಮೈಷುಗರ್ ಅಧ್ಯಕ್ಷ ಸಿ.ಡಿ ಗಂಗಾಧರ, ಮುಡಾ ಅಧ್ಯಕ್ಷ ನಯೀಮ್, ನಗರಸಭೆ ಅಧ್ಯಕ್ಷ ಎಂ.ವಿ.ಪ್ರಕಾಶ್ (ನಾಗೇಶ್), ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್, ಡೀಸಿ ಡಾ.ಕುಮಾರ, ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಎಡಿಸಿ ಡಾ.ಬಿ.ಸಿ ಶಿವಾನಂದಮೂರ್ತಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ನಾಗೇಶ ಭಾಗವಹಿಸಲಿದ್ದಾರೆ.

Share this article