ಸುದ್ದಿಯ ವಿಶ್ವಾಸಾರ್ಹತೆ ಉಳಿಸಿಕೊಳ್ಳುವುದು ಇಂದಿನ ಅಗತ್ಯ: ಸುಕೇಶ್

KannadaprabhaNewsNetwork |  
Published : Aug 04, 2025, 12:15 AM IST
 ಪತ್ರಿಕಾ ದಿನಾಚರಣೆ ಕಾರ್ಯಕ್ರಮ | Kannada Prabha

ಸಾರಾಂಶ

ಕೊಪ್ಪ, ಸುದ್ದಿ ವಿಶ್ವಾಸಾರ್ಹತೆ ಉಳಿಸಿಕೊಳ್ಳುವುದು ಇಂದಿನ ಅಗತ್ಯವಾಗಿದ್ದು, ಪ್ರಸ್ತುತ ಸುದ್ದಿ ಮೂಲ ಕಂಡುಕೊಳ್ಳುವುದರಲ್ಲಿ ಪತ್ರಕರ್ತರಾದ ನಾವು ಎಡವುತ್ತಿದ್ದೇವೆ ಎಂದು ಪತ್ರಕರ್ತ ಸುಕೇಶ್ ಡಿ.ಎಚ್. ಹೇಳಿದರು.

ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ಕನ್ನಡಪ್ರಭ ವಾರ್ತೆ, ಕೊಪ್ಪ

ಸುದ್ದಿ ವಿಶ್ವಾಸಾರ್ಹತೆ ಉಳಿಸಿಕೊಳ್ಳುವುದು ಇಂದಿನ ಅಗತ್ಯವಾಗಿದ್ದು, ಪ್ರಸ್ತುತ ಸುದ್ದಿ ಮೂಲ ಕಂಡುಕೊಳ್ಳುವುದರಲ್ಲಿ ಪತ್ರಕರ್ತರಾದ ನಾವು ಎಡವುತ್ತಿದ್ದೇವೆ ಎಂದು ಪತ್ರಕರ್ತ ಸುಕೇಶ್ ಡಿ.ಎಚ್. ಹೇಳಿದರು.ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪಟ್ಟಣದಲ್ಲಿನ ಯಸ್ಕಾನ್ ಸಭಾಂಗಣದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯಲ್ಲಿ ಮಾತನಾಡಿದ ಅವರು ಪ್ರತಿಯೊಬ್ಬರಲ್ಲೂ ಪ್ರಶ್ನಿಸುವ ಗುಣ ಇರಬೇಕು. ಸುಳ್ಳು ಸುದ್ದಿ ಪ್ರಕಟಿಸುವುದು ಅಪರಾಧವಾಗುತ್ತದೆ. ಈ ನಿಟ್ಟಿನಲ್ಲಿ ರಾಜ್ಯ ಮಟ್ಟದಲ್ಲಿ ಫ್ಯಾಕ್ಟ್ ಚೆಕ್ ಮೂಲಕ ಮಾಧ್ಯಮ ನಿಯಂತ್ರಣಕ್ಕೆ ಮುಂದಾಗಿದೆ. ಪತ್ರಕರ್ತರು ಸಮಾಜ ಸುಧಾರಣೆ ಜೊತೆಗೆ ವೈಯಕ್ತಿಕ ಜೀವನದಲ್ಲಿ ಸುಧಾರಣೆ ಕಂಡುಕೊಳ್ಳಬೇಕು ಎಂದರು.ಪತ್ರಕರ್ತರ ಸಂಘದ ಗೌರವ ಸಲಹೆಗಾರ ಡಿ.ಎಸ್. ವಿಶ್ವನಾಥಶೆಟ್ಟಿ ಮಾತನಾಡಿ, ಪತ್ರಕರ್ತರು ತಮ್ಮ ತಪ್ಪುಗಳನ್ನು ಅವಲೋಕನ ಮಾಡಿ ಸರಿಪಡಿಸಿಕೊಳ್ಳಬೇಕು. ಸಮಸ್ಯೆಗಳನ್ನು ಎದುರಿಸಿದಾಗ ಮಾತ್ರ ಗೆಲುವು ಸಾಧ್ಯವಾಗುತ್ತದೆ. ಪತ್ರಕರ್ತರು ಸಮಾಜವನ್ನು ಗಲಿಬಿಲಿಗೊಳಿಸುವ ಕೆಲಸ ಮಾಡಬಾರದು ಎಂದರು.ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ. ಎಸ್.ಅನಂತ ಮಾತನಾಡಿ, ಸುದ್ದಿ ಲೇಖನ ವಸ್ತುನಿಷ್ಟವಾಗಿರಬೇಕು. ಪತ್ರಕರ್ತರು ಪೂರ್ವಾಗ್ರಹ ಪೀಡಿತರಾಗಬಾರದು. ಸಮಾಜ, ಸರ್ಕಾರದ ನಡುವೆ ಮಾಧ್ಯಮ ಸಂಪರ್ಕ ಸೇತುವೆ. ಜನರು ಪತ್ರಿಕೆಗಳನ್ನು ಕೊಂಡು ಓದುವ ಗುಣ ಬೆಳೆಸಿ ಕೊಂಡಾಗ ಪತ್ರಿಕೆಗಳು ಉಳಿಯುತ್ತದೆ ಎಂದರು.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಂಸ್ಥಾಪಕ ಕೆ.ಜಯಕುಮಾರ್ ಮಾತನಾಡಿ, ಸಮಾಜ ಸೇವೆಯಲ್ಲಿ ತೊಡಗಿಸಿ ಕೊಂಡ ಪತ್ರಕರ್ತರ ಬಗ್ಗೆ ಸರ್ಕಾರ ಗಮನ ಕೊಡಬೇಕು. ವಾಣಿಜ್ಯೋಧ್ಯಮಿ, ರಾಜಕಾರಣಿಗಳ ಹಿಂದೆ ಇರುವ ಪತ್ರಕರ್ತರಿಂದ ಸಮಾಜ ಸುಧಾರಣೆ ಸಾಧ್ಯವಿಲ್ಲ ಎಂದು ತಿಳಿಸಿದರು.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಎಚ್.ಮೂರ್ತಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಿನೇಶ್ ಇರ್ವತ್ತೂರು ಮಾತನಾಡಿದರು.ಪತ್ರಕರ್ತ ಸುಕೇಶ್ ಅವರನ್ನು ಸಂಘದಿಂದ ಸನ್ಮಾನಿಸಲಾಯಿತು. ಪತ್ರಿಕಾ ದಿನಾಚರಣೆ ಪ್ರಯುಕ್ತ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಿ, ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ, ಪ್ರಶಸ್ತಿ ಪತ್ರ ವಿತರಿಸಲಾಯಿತು.ಪತ್ರಕರ್ತರಿಗೆ ಆರೋಗ್ಯಕಾರ್ಡ್ ಸೇರಿದಂತೆ ವಿವಿಧ ಸೌಲಭ್ಯ ವಿತರಿಸಲಾಯಿತು. ಪತ್ರಿಕಾ ದಿನಚರಣೆ ಅಂಗವಾಗಿ ಸರ್ಕಾರಿ ಪ್ರಥರ್ಜೆ ಮತ್ತು ಸ್ನಾತೋಕೊತ್ತರ ಕಾಲೇಜು ಅವರಣಗಳಲ್ಲಿ ಗಿಡಗಳನ್ನು ನೆಟ್ಟು ವನಮಹೋತ್ಸವ ಅಚರಿಸಲಾಯಿತು.

ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಮುರಳಿ, ಕರ್ನಾಟಕ ಒಕ್ಕೂಟ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯ ಚಂದ್ರಶೇಖರ್ ತೇರದಾಳ್, ಕಡೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೊಕೇಶಪ್ಪ, ತಾಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಸಿ.ರಾಜೇಂದ್ರ, ಪತ್ರಕರ್ತರ ಸಂಘದ ಕಾರ್ಯದರ್ಶಿ ಹಮೀದ್, ಜೆ.ಎಂ. ಶ್ರೀಹರ್ಷ, ಚಿಂತನ್ ಬೆಳಗೊಳ, ಭಾಸ್ಕರ್ ಶೆಟ್ಟಿ, ಸಂತೋಷ್ ಕುಲಾಸೊ, ಜಯೇಂದ್ರ, ಫ್ರಾನ್ಸಿಸ್ ಕಾರ್ಡೊಜ, ಇದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...