ಶಿವಮೊಗ್ಗ: ಕರ್ನಾಟಕ ಹಾಲು ಮಹಾಮಂಡಳಿಯು ರೈತರಿಂದ ಮೆಕ್ಕೆಜೋಳವನ್ನು ನೇರವಾಗಿ ಪ್ರತಿ ಕ್ವಿಂಟಲ್‌ಗೆ ₹2250 ಬೆಲೆಯಲ್ಲಿ ಖರೀದಿಸಲು ಆರಂಭಿಸಿದೆ.
ಕಹಾಮ ಶಿಕಾರಿಪುರ ಪಶು ಆಹಾರ ಘಟಕಕ್ಕೆ ಅವಶ್ಯವಿರುವ 30000 ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ಶಿವಮೊಗ್ಗ, ದಕ್ಷಿಣ ಕನ್ನಡ ಹಾಗೂ ದಾವಣಗೆರೆ ಜಿಲ್ಲಾ ವ್ಯಾಪ್ತಿಯ ಪ್ರದೇಶದ ರೈತರಿಂದ ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಪ್ರಸ್ತುತ ಬಳಕೆ ಮಾಡುತ್ತಿರುವ ಕ್ಷೀರಸಿರಿ ಮತ್ತು ಸರ್ಕಾರದ ಕೃ ಇಲಾಖೆ ಸಿದ್ಧಪಡಿಸಿರುವ ಫ್ರೂಟ್ಸ್ ತಂತ್ರಾಂಶದ ಮೂಲಕ ಮೆಕ್ಕೆಜೋಳ ಖರೀದಿ ಪ್ರಕ್ರಿಯೆಯನ್ನು ಅನುಷ್ಠಾನಕ್ಕೆ ತರಲಾಗುವುದು.
ಪ್ರತಿ ರೈತರಿಂದ ಗರಿಷ್ಠ 1000 ಕ್ವಿಂ. ಮೆಕ್ಕೆಜೋಳ ಸರಬರಾಜಿಗೆ ಸೀಮಿತಗೊಳಿಸಿದ್ದು, ಮಧ್ಯವರ್ತಿಗಳಿಗೆ ಅವಕಾಶ ಇಲ್ಲ. ಈ ಅವಕಾಶ ಸದುಪಯೋಗಪಡಿಸಿಕೊಂಡು ರೈತರೇ ನೇರವಾಗಿ ಉತ್ತಮ ಗುಣಮಟ್ಟದ ಮೆಕ್ಕೆಜೋಳವನ್ನು ತಲಾ 50 ಕೆ.ಜಿ ತೂಕದಂತೆ ಉತ್ತಮ ಗುಣಮಟ್ಟದ ಗೋಣಿಚೀಲಗಳಲ್ಲಿ ಸರಬರಾಜು ಮಾಡಬಹುದು.ಹೆಚ್ಚಿನ ಮಾಹಿತಿಗೆ ದೂ: 9606012571 ಮತ್ತು ಇಮೇಲ್ ವಿಳಾಸ: kmfcfps@gmail.com ಇಲ್ಲಿಗೆ ಸಂಪರ್ಕಿಸಬಹುದು ಎಂದು ಶಿಕಾರಿಪುರ ಕ.ಹಾ.ಮ. ಪಶು ಆಹಾರ ಘಟಕದ ತಿಳಿಸಿದೆ.