-ಶಾಸಕ ನಾರಾಯಣಸ್ವಾಮಿಗೆ ಸಚಿವ ಸ್ಥಾನಕ್ಕಾಗಿ ಬೃಹತ್ ಸಾಮರಸ್ಯ ಚಳವಳಿ

KannadaprabhaNewsNetwork |  
Published : Jun 12, 2026, 01:15 AM IST
  ಸಿಕೆಬಿ-2 ನಗರದ ಅಂಬೇಡ್ಕರ್ ವೃತ್ತದಲ್ಲಿ ಬಲಗೈ ಜಾತಿಗಳ ಒಕ್ಕೂಟದಿಂದ ಶಾಸಕ ಎಸ್.ಎನ್.ನಾರಾಯಣಸ್ವಾಮಿಗೆ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಬೃಹತ್ ಸಾಮರಸ್ಯ ಚಳುವಳಿ ನಡೆಸಿದರು | Kannada Prabha

ಸಾರಾಂಶ

ಬಲಗೈ ಜಾತಿಗಳ ಒಕ್ಕೂಟದ ಜಿಲ್ಲಾ ಸಮಿತಿ ವತಿಯಿಂದ ಗುರುವಾರ ಜಿಲ್ಲೆಯ ಎಲ್ಲ ತಾಲೂಕುಗಳ ಸಮುದಾಯದ ನೂರಾರು ಮುಖಂಡರು ನಗರದಲ್ಲಿ ಮೆರವಣಿಗೆ ನಡೆಸಿ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡಬೇಕು

ಕನ್ನಡಪ್ರಭ ವಾರ್ತೆ, ಚಿಕ್ಕಬಳ್ಳಾಪುರ:

ಬಲಗೈ ಜಾತಿಗಳ ಒಕ್ಕೂಟದ ಜಿಲ್ಲಾ ಸಮಿತಿ ವತಿಯಿಂದ ಗುರುವಾರ ಜಿಲ್ಲೆಯ ಎಲ್ಲ ತಾಲೂಕುಗಳ ಸಮುದಾಯದ ನೂರಾರು ಮುಖಂಡರು ನಗರದಲ್ಲಿ ಮೆರವಣಿಗೆ ನಡೆಸಿ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಬೃಹತ್ ಸಾಮರಸ್ಯ ಚಳವಳಿ ನಡೆಸಿದರು.

ಬಲಗೈ ಜಾತಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ರಾಮಕೃಷ್ಣ, ಕಾರ್ಯದರ್ಶಿ ವೆಂಕಟರೆಡ್ಡಿ ಅವರ ನೇತೃತ್ವದಲ್ಲಿ ನಗರದ ಜೈ ಭೀಮ್ ಹಾಸ್ಟೆಲ್‌ ಆವರಣದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಬಳಿಯಿಂದ ಮೆರವಣಿಗೆ ಆರಂಭಿಸಿದ ಮುಖಂಡರು, ವಿವಿಧ ರಸ್ತೆಗಳಲ್ಲಿ ಸಂಚರಿಸಿ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದರು. ಬಳಿಕ ಎಸ್.ಎನ್. ನಾರಾಯಣಸ್ವಾಮಿ ಅವರನ್ನು ಸಚಿವರನ್ನಾಗಿ ಮಾಡುವಂತೆ ಎಐಸಿಸಿ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಸುರ್ಜೇವಾಲ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಬಲಗೈ ಜಾತಿಗಳ ಒಕ್ಕೂಟದ ಕಾರ್ಯದರ್ಶಿ ವೆಂಕಟರೆಡ್ಡಿ ಮಾತನಾಡಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬಲಗೈ ಸಮುದಾಯದ ಜನಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದೆ. ಈ ಸಮುದಾಯದ ಪ್ರತಿನಿಧಿಯಾಗಿರುವ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಅವರು ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಈ ಹಿಂದೆಯೇ ಅವರಿಗೆ ಸಚಿವ ಸ್ಥಾನ ನೀಡಬೇಕಾಗಿತ್ತು. ಆದರೆ ಅವಕಾಶ ಸಿಕ್ಕಿರಲಿಲ್ಲ. ಇದೀಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಅವಕಾಶ ಬಂದಿದ್ದು, ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡಬೇಕು. ಇಲ್ಲವಾದಲ್ಲಿ ಮುಂದೆ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಚಲಾಯಿಸುವ ಬಗ್ಗೆ ಸಮುದಾಯ ಯೋಚಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ನಮ್ಮ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಿ ನ್ಯಾಯ ಒದಗಿಸಿದರೆ ಕಾಂಗ್ರೆಸ್ ಪಕ್ಷದೊಂದಿಗೆ ಸಮುದಾಯ ಸದಾ ಬೆಂಬಲವಾಗಿ ನಿಲ್ಲಲಿದೆ ಎಂದರು.

ಬಲಗೈ ಜಾತಿಗಳ ಜಿಲ್ಲಾ ಸಲಹಾ ಸಮಿತಿಯ ಏಡುಕೋಂಡಲು ಶ್ರೀನಿವಾಸಪ್ಪ ಮಾತನಾಡಿ, ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಯ ನಮ್ಮ ಜನಾಂಗವನ್ನು ಪ್ರತಿನಿಧಿಸುವ ಪ್ರಾಮಾಣಿಕ ಸರಳತೆ ಹೆಸರು ವಾಸಿ ಆಗಿರುವ ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಜಿಲ್ಲೆಯ ಎಲ್ಲ ತಾಲೂಕುಗಳ ಬಲಗೈ ಜನಾಂಗದ ಒತ್ತಾಯವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಕ್ಷ ರಾಮಕೃಷ್ಣ, ತ್ಯಾಗರಾಜ್, ನಾರಾಯಣಸ್ವಾಮಿ, ಹರೀಶ್, ವೆಂಕಟ್, ಮುನಿಶಾಮಪ್ಪ, ರವಿಕುಮಾರ್, ಅಶ್ವಥ್, ರಾಮಚಂದ್ರ, ಪ್ಯಾರೆ ಜಾನ್, ದೇವರಾಜ್, ನಾಗರಾಜ್, ಗಂಗಾಧರಪ್ಪ ಮತ್ತಿತರರು ಇದ್ದರು.

ಸಿಕೆಬಿ-2 ನಗರದ ಅಂಬೇಡ್ಕರ್ ವೃತ್ತದಲ್ಲಿ ಬಲಗೈ ಜಾತಿಗಳ ಒಕ್ಕೂಟದಿಂದ ಶಾಸಕ ಎಸ್.ಎನ್. ನಾರಾಯಣಸ್ವಾಮಿಗೆ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಬೃಹತ್ ಸಾಮರಸ್ಯ ಚಳವಳಿ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಳೆ ನಗರಕ್ಕೆ ಸೋಮನಾಥ ಜ್ಯೋತಿರ್ಲಿಂಗ ಆಗಮನ
ಜ್ಞಾನಜಾತ್ರೆಯ ಲೋಗೋ ಬಿಡುಗಡೆ ಮಾಡಿದ ಡಿಸಿ ಶುಭಾ ಕಲ್ಯಾಣ್