ಕನ್ನಡಪ್ರಭ ವಾರ್ತೆ ಹರಿಹರ
ರಂಜಾನ್ ಉಪವಾಸ ನಂತರ ಪಟ್ಟಣದ ಜಾಮೀಯ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ, ಮಸೀದಿ ಮುಂಬದಿಯ ತಳ್ಳು ಗಾಡಿಯಲ್ಲಿ ಪಾನಿಪೂರಿ ಸೇವಿಸಿದ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಅಂಗಡಿ ಮಾಲೀಕ ಪರಾರಿಯಾಗಿದ್ದು, ಎಫ್‌ಐಆರ್ ದಾಖಲಾಗಿದೆ. ರಂಜಾನ್ ಅವಧಿಯಲ್ಲಿ ಪರಸ್ಥಳದವರೂ ಬಂದು ಅಂಗಡಿ ಹೂಡುವುದರಿಂದ ಆರೋಪಿ ಪತ್ತೆ ಕಾರ್ಯ ನಡೆದಿದೆ ಎಂದು ಪೊಲೀಸರು ಸಭೆಯಲ್ಲಿ ಮಾಹಿತಿ ನೀಡಿದರು.
ಆರೋಗ್ಯ ಇಲಾಖೆ ಅಧಿಕಾರಿಗಳು ಮಾತನಾಡಿ, ಹರಿಹರ ಮತ್ತು ಮಲೇಬೆನ್ನೂರಿನ ಎಲ್ಲಾ ಫುಟ್‌ಪಾತ್ ತಿಂಡಿ ಅಂಗಡಿ ಮಾಲೀಕರಿಗೆ ಸ್ವಚ್ಛತೆ ಕಾಪಾಡಲು ಸೂಚಿಸಲಾಗಿದೆ. ಪಾನಿಪುರಿ ಸೇವಿಸಿದ್ದ ಮಕ್ಕಳಲ್ಲಿ ಒಬ್ಬ ಮೃತಪಟ್ಟಿದ್ದರೆ, ಮತ್ತೊಬ್ಬ ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಉಳಿದ ೧೭ ಮಕ್ಕಳ ಆರೋಗ್ಯ ಚೇತರಿಸಿದ್ದು, ಮನೆಗೆ ಮರಳಿದ್ದಾರೆ ಎಂದರು.ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರಾದ ಶಾರದಾದೇವಿ, ಇಂತಹ ಘಟನೆಗಳು ನಡೆದಾಗ ಮಾತ್ರ ಎಚ್ಚೆತ್ತುಕೊಳ್ಳಬಾರದು, ತಿಂಡಿ ಅಂಗಡಿಗಳಿಗೆ ಆಗಾಗ ಭೇಟಿ ನೀಡಿ, ಅಲ್ಲಿ ಸ್ವಚ್ಛತೆ ಕಾಪಾಡುವುದು, ಕುಡಿಯಲು ಶುದ್ಧ ನೀರು ನೀಡುತ್ತಿರುವ ಬಗ್ಗೆ ಪರಿಶೀಲಿಸಬೇಕು. ವಾರಕ್ಕೆ ಒಮ್ಮೆಯಾದರೂ ದಿಢೀರ್ ಭೇಟಿ ನೀಡುತ್ತಿದ್ದರೆ ತಿಂಡಿ ಅಂಗಡಿಯವರು ಎಚ್ಚರಿಕೆಯಿಂದ ಇರುತ್ತಾರೆ ಎಂದರು.
ತಿಂಡಿ ಅಂಗಡಿ ನಡೆಸುವವರಿಗೆ ಸ್ವಚ್ಛತೆ ಕಾಪಾಡುವ ಕುರಿತು ತಿಳಿಸಿಕೊಡಬೇಕು. ಸಾರ್ವಜನಿಕರಲ್ಲೂ ಶುದ್ಧ ಆಹಾರ, ನೀರು ಸೇವಿಸುವ ಬಗ್ಗೆ ಜಾಗೃತಿ ಮೂಡಿಸಬೇಕಿದೆ. ಈ ದಿಸೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿಯಿಂದ ಮಾ.೨೨ರಂದು ಮಲೇಬೆನ್ನೂರು ಮತ್ತು ಮಾ.೨೯ರಂದು ಹರಿಹರದಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಫುಡ್ ಕೋರ್ಟ್ ನಿರ್ಮಿಸಿ
ಶಾರದಾದೇವಿ ಸಿ.ಹಟ್ಟಿ, ಹಿರಿಯ ಸಿವಿಲ್ ನ್ಯಾಯಾಧೀಶರು