ಕನ್ನಡಪ್ರಭ ವಾರ್ತೆ ಮಾಲೂರು
ಸರ್ಕಾರಿ ಶಾಲೆಯಲ್ಲಿ ಗುಣಾತ್ಮಕ ಶಿಕ್ಷಣ
ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣವನ್ನು ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಶಿಸ್ತು ಸಂಸ್ಕಾರವನ್ನು ರೂಡಿಸಿಕೊಂಡರೆ ಮುಂದಿನ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ಅಧಿಕಾರಿಗಳಾಗಿ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಬಹುದು, ರಾಜ್ಯ ಸರ್ಕಾರ ಪ್ರಾಥಮಿಕ ಶಿಕ್ಷಣವನ್ನು ಕಡ್ಡಾಯಗೊಳಿಸಿದೆ. ೧ ರಿಂದ ೭ನೇ ತರಗತಿಯವರೆಗೆ ಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡುತ್ತಿದೆ. ಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ, ಪಠ್ಯಪುಸ್ತಕ, ಮಧ್ಯಾಹ್ನದ ಬಿಸಿಯೂಟ, ಇನ್ನಿತರೆ ಸವಲತ್ತುಗಳನ್ನು ಒದಗಿಸಲಾಗುತ್ತಿದೆ ಎಂದರು. ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ವ್ಯಾಸಂಗ ಮಾಡಿದರೆ ಸಮಾಜದಲ್ಲಿ ಉನ್ನತ ಮಟ್ಟದ ಅಧಿಕಾರಿಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಬಹುದಾಗಿದೆ, ಉತ್ತಮವಾದ ಗುಣಾತ್ಮಕವಾದ ಶಿಕ್ಷಣವನ್ನು ಪಡೆದಾಗ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ಆಗ ಮಾನವೀಯ ಮೌಲ್ಯಗಳನ್ನು ಪಡೆದು ಉತ್ತಮ ನಾಗರಿಕರಾಗಬಹುದು ಆಗ ಸಮಾಜದಲ್ಲಿ ನೆಮ್ಮದಿಯ ಜೀವನ ಸಾಗಿಸಬಹುದು ಎಂದರು.ಸರ್ಕಾರಿ ಶಾಲೆಯಲ್ಲಿ ಶಿಕ್ಷಣ
ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ತಾವು ಓದಿದ ಶಾಲೆಯನ್ನು ಎಂದಿಗೂ ಮರೆಯಬಾರದು ಅಂತಹ ಶಾಲೆಗಳ ಅಭಿವೃದ್ಧಿಗೆ ಸರ್ಕಾರದ ಜೊತೆಗೆ ಕೈಜೋಡಿಸಬೇಕು. ಶಿಕ್ಷಣ, ಸಂಸ್ಕಾರ, ಶಿಸ್ತು ಪಾಲನೆ ಮಾಡುವ ಮೂಲಕ ತಂದೆ ತಾಯಿ ಮತ್ತು ಹಿರಿಯರನ್ನು ಮಕ್ಕಳು ಗೌರವಿಸಬೇಕು ಎಂದರು.ಮಕ್ಕಳಿಗೆ ನೋಟ್‌ಬುಕ್ ವಿತರಣೆ
ಇಲ್ಲಿನ ಅದ್ವಿಕ್ ಫೌಂಡೇಶನ್ ಸಂಸ್ಥೆಯವರು ತಾಲ್ಲೂಕಿನಲ್ಲಿರುವ ಸರ್ಕಾರಿ ಶಾಲೆಯ ಮಕ್ಕಳಿಗೆ ನೋಟ್ ಪುಸ್ತಕ ಲೇಖನಿ ಸಾಮಗ್ರಿಗಳನ್ನು ವಿತರಣೆ ಮಾಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ, ಮುಂಬರುವ ದಿನಗಳಲ್ಲಿಯೂ ಸಹ ತಾಲೂಕಿನಾದ್ಯಂತ ಮಕ್ಕಳಿಗೆ ಅಗತ್ಯವಿರುವ ಶೈಕ್ಷಣಿಕ ಸಲಕರಣೆಗಳನ್ನು ವಿತರಣೆ ಮಾಡುವಂತೆ ಹೇಳಿದರು.ಈ ಸಂದರ್ಭದಲ್ಲಿ ತಹಸೀಲ್ದಾರ್ ಕೆ.ರಮೇಶ್, ಬಿಇಒ ಚಂದ್ರಕಲಾ, ಗ್ರೇಡ್-2 ತಹಸೀಲ್ದಾರ್ ಹರಿಪ್ರಸಾದ್, ಪುರಸಭಾ ಸದಸ್ಯ ಶ್ರೀನಿವಾಸ್, ಮುಖ್ಯಾಧಿಕಾರಿ ಎಬಿ ಪ್ರದೀಪ್, ಅದ್ವಿಕ್ ಫೌಂಡೇಶನ್ ಸಂಸ್ಥೆಯ ಅಧ್ಯಕ್ಷ ಮಂಜುನಾಥ್, ಸದಸ್ಯರಾದ ಶಿವಕುಮಾರ್, ಲೋಕೇಶ್, ಕಾರ್ತಿಕ್,ಶ್ರೀಕಾಂತ್, ರಾಹುಲ್, ವಿನೋಧ್, ಮುಖ್ಯ ಶಿಕ್ಷಕಿ ಆಶಾ, ಇನ್ನಿತರರು ಹಾಜರಿದ್ದರು.