ಹುಬ್ಬಳ್ಳಿ:
ಇಲ್ಲಿನ ಗೋಕುಲ ರಸ್ತೆಯಲ್ಲಿರುವ ಹವ್ಯಕ ಭವನದಲ್ಲಿ ಭಗವದ್ಗೀತಾ ಅಭಿಯಾನ ಧಾರವಾಡ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಗೀತಾ ಜಯಂತಿ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಭಗವದ್ಗೀತೆಯ 9ನೇ ಅಧ್ಯಾಯದ ಮಹಾ ಸಮರ್ಪಣೆ ಹಾಗೂ 18 ಅಧ್ಯಾಯಗಳ ಪಠಣ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಪಾಲ್ಗೊಂಡು ಮಾತನಾಡಿದರು.
ಉದ್ಯಮಿ ಡಾ. ವಿ.ಎಸ್.ವಿ. ಪ್ರಸಾದ ಮಾತನಾಡಿ, ಭಗವದ್ಗೀತೆ ನಮಗೆ ನಮ್ಮ ಕರ್ತವ್ಯದ ಕುರಿತು ಅರಿವು ಮೂಡಿಸಿದ್ದು, ನಮ್ಮ ಕರ್ಮಗಳನ್ನು ನಿಷ್ಕಾಮವಾಗಿ ಮಾಡಿದರೆ ಸಾಮಾಜಿಕ ಸ್ವಾಸ್ಥ್ಯ ರಕ್ಷಣೆಯಾಗುತ್ತದೆ ಎಂದರು.ಭಗವದ್ಗೀತಾ ಅಭಿಯಾನ ಸಮಿತಿ ಅಧ್ಯಕ್ಷ ಗೋವಿಂದ ಜೋಶಿ ಮಾತನಾಡಿ, ಭಗವದ್ಗೀತೆ ಇಂದಿಗೂ ಪ್ರಸ್ತುತವಾಗಿದೆ. ಅದರಲ್ಲಿರುವ ಉಪದೇಶಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯ. ಪರಧರ್ಮ ಸಹಿಷ್ಣುತೆ ಹೊಂದಿರುವ ವಿಶ್ವದ ಏಕೈಕ ಧರ್ಮವೆಂದರೆ ಹಿಂದು ಧರ್ಮವೆಂದು ಅವರು ಪ್ರತಿಪಾದಿಸಿದರು.
ಇದಕ್ಕೂ ಮೊದಲು ಭಗವದ್ಗೀತೆಯ ಎಲ್ಲ 18 ಅಧ್ಯಾಯಗಳ ಸಾಮೂಹಿಕ ಪಠಣ ನಡೆಯಿತು. ವೀಣಾ ಶಿವರಾಮ ಹೆಗಡೆ ನೇತೃತ್ವ ವಹಿಸಿದ್ದರು. ಅಭಿಯಾನದಲ್ಲಿ ಭಾಗವಹಿಸಿದ್ದ ಎಲ್ಲ ಸಕ್ರಿಯ ಸದಸ್ಯರನ್ನು ಸನ್ಮಾನಿಸಲಾಯಿತು. ಅರವಿಂದ ಮುತ್ತಗಿ ಕಾರ್ಯಕ್ರಮ ನಿರೂಪಿಸಿದರು. ಸಮಿತಿ ಕಾರ್ಯದರ್ಶಿ ಸುದರ್ಶನ ಹೇಮಾದ್ರಿ ವಂದಿಸಿದರು.