ಮಕ್ಕಳಿಗೆ ಕೃಷಿ ಬಗ್ಗೆ ಅರಿವು ಮೂಡಿಸಿ: ಉಮಾಶಂಕರ್

KannadaprabhaNewsNetwork |  
Published : Dec 31, 2024, 01:03 AM IST
ಪೋಟೋ 9 : ದಾಬಸ್‍ಪೇಟೆ ಪಟ್ಟಣದ ವಿದ್ಯಾಸ್ಪೂರ್ತಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಹಮ್ಮಿಕೊಂಡಿದ್ದು ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ರೈತರ ವೇಷಭೂಷಣ ತೊಟ್ಟು ಸಂಭ್ರಮಿಸಿದರು. | Kannada Prabha

ಸಾರಾಂಶ

ರೈತ ಸಮೂಹ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಕೃಷಿ ಚಟುವಟಿಕೆ ಕಷ್ಟದಲ್ಲಿದೆ. ರೈತರು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೆ ರೈತರು ಕೃಷಿ ಚಟುವಟಿಕೆಯಿಂದ ವಿಮುಖರಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿ ದೆಸೆಯಿಂದಲೇ ಕೃಷಿ ಪದ್ಧತಿ, ರೈತರ ಸಮಸ್ಯೆಗಳ ಬಗ್ಗೆ ಮಕ್ಕಳಿಗೆ ಪಠ್ಯೇತರ ಶಿಕ್ಷಣ ನೀಡಿ ಸ್ವಾವಲಂಬಿ ಬದುಕಿನ ಬಗ್ಗೆ ಜಾಗೃತಿ ಮೂಡಿಸುವುದು ನಮ್ಮ ಶಿಕ್ಷಣ ಸಂಸ್ಥೆಗಳ ಕೆಲಸವಾಗಿದೆ.

ದಾಬಸ್‍ಪೇಟೆ: ಮಕ್ಕಳಿಗೆ ಚಿಕ್ಕಂದಿನಲ್ಲಿಯೇ ಕೃಷಿ ಅರಿವು ಮೂಡಿಸುವ ಅವಶ್ಯವಿದೆ ಎಂದು ವಿದ್ಯಾಸ್ಪೂರ್ತಿ ಸಮೂಹ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಉಮಾಶಂಕರ್ ಅಭಿಪ್ರಾಯಪಟ್ಟರು.

ಪಟ್ಟಣದ ವಿದ್ಯಾಸ್ಪೂರ್ತಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಹಮ್ಮಿಕೊಂಡಿದ್ದು ರೈತ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ದೇಶಕ್ಕೆ ಅನ್ನ ನೀಡುವ ರೈತರನ್ನು ಗೌರವಿಸಬೇಕು. ನಾವು ತಿನ್ನುವ ಪ್ರತಿ ಅಗುಳು ಅನ್ನವನ್ನು ನೂರಾರು ದಿನ ಶ್ರಮಪಟ್ಟು ಬಿತ್ತಿ ಬೆಳೆಯುತ್ತಾರೆ. ಅದನ್ನು ಯಾವುದೇ ಕಾರಣಕ್ಕೂ ಹಾಳು ಮಾಡಬಾರದು. ಪ್ರಸಕ್ತ ದಿನಗಳಲ್ಲಿ ಮರೆಯಾಗುತ್ತಿರುವ ಕೃಷಿ ಪದ್ಧತಿ, ಆಧುನಿಕ ಬೇಸಾಯ, ಸಾವಯವ ಕೃಷಿ ಪದ್ಧತಿ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುವ ಅವಶ್ಯಕತೆ ಇದೆ ಎಂದು ಸಲಹೆ ನೀಡಿದರು.ಆಡಳಿತಾಧಿಕಾರಿ ರಾಮಚಂದ್ರ ಮಾತನಾಡಿ, ರೈತ ಸಮೂಹ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಕೃಷಿ ಚಟುವಟಿಕೆ ಕಷ್ಟದಲ್ಲಿದೆ. ರೈತರು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೆ ರೈತರು ಕೃಷಿ ಚಟುವಟಿಕೆಯಿಂದ ವಿಮುಖರಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿ ದೆಸೆಯಿಂದಲೇ ಕೃಷಿ ಪದ್ಧತಿ, ರೈತರ ಸಮಸ್ಯೆಗಳ ಬಗ್ಗೆ ಮಕ್ಕಳಿಗೆ ಪಠ್ಯೇತರ ಶಿಕ್ಷಣ ನೀಡಿ ಸ್ವಾವಲಂಬಿ ಬದುಕಿನ ಬಗ್ಗೆ ಜಾಗೃತಿ ಮೂಡಿಸುವುದು ನಮ್ಮ ಶಿಕ್ಷಣ ಸಂಸ್ಥೆಗಳ ಕೆಲಸವಾಗಿದೆ ಎಂದರು.ಕಾರ್ಯಕ್ರಮಲ್ಲಿ ವ್ಯವಸ್ಥಾಪಕ ಸೋಮಶೇಖರ್, ಪ್ರಾಂಶುಪಾಲರುಗಳಾದ ವನಜಾಕ್ಷಿ, ದಿಲೀಪ್ ಕುಮಾರ್, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಪೋಟೋ 9 : ದಾಬಸ್‍ಪೇಟೆ ಪಟ್ಟಣದ ವಿದ್ಯಾಸ್ಪೂರ್ತಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಹಮ್ಮಿಕೊಂಡಿದ್ದು ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ರೈತರ ವೇಷಭೂಷಣ ತೊಟ್ಟು ಸಂಭ್ರಮಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!