ಮಕ್ಕಳಿಗೆ ಪೌಷ್ಟಿಕ ಆಹಾರದ ಅರಿವು ಮೂಡಿಸಿ

KannadaprabhaNewsNetwork |  
Published : Oct 02, 2024, 01:03 AM IST
ಸುದ್ದಿಚಿತ್ರ ೧  ಶಿಡ್ಲಘಟ್ಟ ಸ್ತ್ರೀಶಕ್ತಿ ಭವನದಲ್ಲಿ ಪೌಷ್ಠಿಕ ಆಹಾರ ಸಪ್ತಾಹ ಪ್ರಯುಕ್ತ ನಡೆದ ಪ್ರದರ್ಶನವನ್ನು ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.‌ಸಿನ್ಯಾಯಾಧೀಶ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಮೊಹಮ್ಮದ್ ರೋಷನ್ ಶಾ ವೀಕ್ಷಿಸಿದರು | Kannada Prabha

ಸಾರಾಂಶ

ಅಪೌಷ್ಟಿಕತೆಯಿಂದ ಮಕ್ಕಳು ವಿದ್ಯಾಭ್ಯಾಸದಲ್ಲಿ ಹಿಂದುಳಿಯುವ ಸಾಧ್ಯತೆ ಇದೆ. ಈ ಬಗ್ಗೆ ಪೋಷಕರು ಹಾಗೂ ಶಿಕ್ಷಕರು ಗಮನ ಹರಿಸಬೇಕು. ಹಣ್ಣು, ತರಕಾರಿಗಳನ್ನು ಹೆಚ್ಚು ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು. ನೇರಳೆ ಹಣ್ಣು, ಪಪ್ಪಾಯ, ಬಾಳೆ ಹಣ್ಣು ಸೇರಿದಂತೆ ದೇಹಕ್ಕೆ ಶಕ್ತಿ ನೀಡುವ ಹಣ್ಣುಗಳ ಸೇವನೆ ಅಗತ್ಯ

ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ

ಆರೋಗ್ಯ ರಕ್ಷಣೆಯಲ್ಲಿ ಪೌಷ್ಟಿಕ ಆಹಾರವು ಹೆಚ್ಚಿನ ಮಹತ್ವ ಹೊಂದಿದೆ. ಶಿಕ್ಷ ಕರು, ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರಗಳ ಬಗ್ಗೆ ಮಾಹಿತಿ ನೀಡಿ ಜ್ಞಾನ ಮೂಡಿಸಬೇಕು ಎಂದು ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.‌ಸಿ ನ್ಯಾಯಾಧೀಶ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಮೊಹಮ್ಮದ್ ರೋಷನ್ ಶಾ ಹೇಳಿದರು.

ನಗರದ ಸ್ತ್ರೀಶಕ್ತಿ ಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಪೊಲೀಲಿಸ್ ಇಲಾಖೆ ಮತ್ತು ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಪೌಷ್ಟಿಕ ಆಹಾರ ಸಪ್ತಾಹ ಪ್ರಯುಕ್ತ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಆರೋಗ್ಯಕ್ಕಾಗಿ ಪೌಷ್ಟಿಕ ಆಹಾರ ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ಪೌಷ್ಟಿಕ ಆಹಾರ ಸೇವಿಸಿ ಆರೋಗ್ಯದಿಂದ ಇದ್ದರೆ ಮಾತ್ರ ನವ ಭಾರತ ನಿರ್ಮಾಣ ಮಾಡಲು ಸಾಧ್ಯವಾಗಲಿದೆ. ಅಂಗನವಾಡಿ ನೌಕರರು, ಆಶಾ ಕಾರ್ಯಕರ್ತೆರು ಪೌಷ್ಟಿಕ ಆಹಾರದ ಬಗ್ಗೆ ಜನರಿಗೆ, ಮಕ್ಕಳಿಗೆ ತಿಳಿಸಬೇಕು ಎಂದರು. ಹಣ್ಣು, ತರಕಾರಿ ಸೇವಿಸಿ

ಅಪೌಷ್ಟಿಕತೆಯಿಂದ ಮಕ್ಕಳು ವಿದ್ಯಾಭ್ಯಾಸದಲ್ಲಿ ಹಿಂದುಳಿಯುವ ಸಾಧ್ಯತೆ ಇದೆ. ಈ ಬಗ್ಗೆ ಪೋಷಕರು ಹಾಗೂ ಶಿಕ್ಷಕರು ಗಮನ ಹರಿಸಬೇಕು. ಹಣ್ಣು, ತರಕಾರಿಗಳನ್ನು ಹೆಚ್ಚು ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು. ನೇರಳೆ ಹಣ್ಣು, ಪಪ್ಪಾಯ, ಬಾಳೆ ಹಣ್ಣು ಸೇರಿದಂತೆ ದೇಹಕ್ಕೆ ಶಕ್ತಿ ನೀಡುವ ಹಣ್ಣುಗಳ ಸೇವನೆ ಅಗತ್ಯ. ಬೇಯಿಸದ ಹಸಿ ತರಕಾರಿಗಳನ್ನು ತಿನ್ನುವುದು ಉತ್ತಮ ಎಂದು ಹೇಳಿದರು. ಸಿಡಿಪಿಓ ವಿದ್ಯಾ ವಸ್ತ್ರದ್, ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ಎ. ನಾರಾಯಣಸ್ವಾಮಿ, ಕಾರ್ಯದರ್ಶಿ ಸಿ.ಜಿ.ಭಾಸ್ಕರ್, ಪ್ಯಾನಲ್ ವಕೀಲೆ ಕೆ.ಎಂ.ನಾಗಮಣಿ, ಶಾಲಾ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರಲ್ಲಿ ಬಸವಣ್ಣ ಜೀವ ವೈವಿಧ್ಯ ಉದ್ಯಾನವನ
ಕೆಎಂಎಫ್‌ನಲ್ಲಿ ಉದ್ಯೋಗದ ನೆಪದಲ್ಲಿ50 ಲಕ್ಷ ವಂಚನೆ:ಇಬ್ಬರ ವಿರುದ್ಧ ಕೇಸ್‌