ದೊಡ್ಡಬಳ್ಳಾಪುರ: ಶಿಕ್ಷಕರು ದೇಶದ ಅಭಿವೃದ್ಧಿಯ ಚಿಂತನೆ ಹೊಂದುವುದರೊಂದಿಗೆ ಮಕ್ಕಳನ್ನು ಸಂಸ್ಕಾರವಂತರನ್ನಾಗಿ ರೂಪಿಸಬೇಕಿದೆ ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.
ನವೆಂಬರ್ 14ರಂದು ಮಕ್ಕಳ ದಿನಾಚರಣೆಯನ್ನು ನಗರದ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆಸಲು ಚಿಂತನೆ ನಡೆಸಿದ್ದು, ಶಿಕ್ಷಕರು ಈ ಕಾರ್ಯಕ್ರಮದ ನೇತೃತ್ವ ವಹಿಸಬೇಕು ಎಂದರು.
ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಹನುಮಂತರಾಯಪ್ಪ, ಸರ್ಕಾರಿ ಶಾಲೆಗಳಲ್ಲಿ ಕಟ್ಟಡ, ಶಿಕ್ಷಕರ ಕೊರತೆ ಮೊದಲಾದ ಸಮಸ್ಯೆಗಳಿದ್ದರೂ ಶಿಕ್ಷಕರು ತಮ್ಮ ಕಾರ್ಯಕ್ಕೆ ಚ್ಯುತಿ ಬಾರದಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಓದಿರುವ ಮಕ್ಕಳು ಐಎಎಸ್, ಕೆಎಎಸ್ ಸೇರಿದಂತೆ ಉನ್ನತ ಅಧಿಕಾರಿಗಳಾಗಿ ರೂಪುಗೊಂಡಿದ್ದಾರೆ ಎಂದರು.ಇದೇ ಸಂದರ್ಭದಲ್ಲಿ 2024-25ನೇ ಸಾಲಿನಲ್ಲಿ ನಿವೃತ್ತರಾದ ಶಿಕ್ಷಕರನ್ನು ಸನ್ಮಾನಿಸಲಾಯಿತು.
ತಹಸೀಲ್ದಾರ್ ವಿಭಾ ವಿದ್ಯಾ ರಾಥೋಡ್, ನಗರಸಭೆ ಉಪಾಧ್ಯಕ್ಷ ಎಂ.ಮಲ್ಲೇಶ್, ಭಾರತ ಸೇವಾ ದಳದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಲಕ್ಷ್ಮೀಪತಿ, ಕೇಂದ್ರ ರೇಷ್ಮೆ ಮಂಡಲಿ ಮಾಜಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕ (ಆಡಳಿತ) ಪಿ.ಬೈಲಾಂಜಿನಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್. ಶಂಕರಯ್ಯ, ಸಮನ್ವಯಾಧಿಕಾರಿ ಜಿ.ಆರ್.ಹನುಮಂತರಾಯಪ್ಪ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಂ.ಎಸ್.ರಾಜಶೇಖರ್, ಕಾರ್ಯದರ್ಶಿ ಧನಂಜಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ವಾಸುದೇವಮೂರ್ತಿ, ತಾಲೂಕು ಅಧ್ಯಕ್ಷ ಬಸವಲಿಂಗಯ್ಯ, ಕಾರ್ಯದರ್ಶಿ ಎ.ವಿ.ಚಂದ್ರಪ್ಪ, ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಆರ್.ಶಿವಕುಮಾರ್, ಕಾರ್ಯದರ್ಶಿ ಸಿದ್ದಲಿಂಗಸ್ವಾಮಿ, ನಿವೃತ್ತ ಅಧಿಕಾರಿ ಪದ್ಮರಾಜ್ ಮತ್ತಿತರರು ಉಪಸ್ಥಿತದ್ದರು.7ಕೆಡಿಬಿಪಿ4-
ದೊಡ್ಡಬಳ್ಳಾಪುರ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ 2024-25ನೇ ಸಾಲಿನಲ್ಲಿ ನಿವೃತ್ತರಾದ ಶಿಕ್ಷಕರನ್ನು ಶಾಸಕ ಧೀರಜ್ ಮುನಿರಾಜ್ ಮತ್ತಿತರರು ಅಭಿನಂದಿಸಿದರು.