-ಮಣ್ಣಿನ ಆರೋಗ್ಯ ಕುರಿತು ಪ್ರಬಂಧ, ಚಿತ್ರಕಲಾ ಸ್ಪರ್ಧೆ ಕಾರ್ಯಕ್ರಮದಲ್ಲಿ ರಾಜಕುಮಾರ್ ಸಲಹೆ
ಕನ್ನಡಪ್ರಭ ವಾರ್ತೆ ವಡಗೇರಾ
ಮಣ್ಣಿನ ಆರೋಗ್ಯ ಮತ್ತು ಮಣ್ಣಿನ ಫಲವತ್ತತೆ ಸಂರಕ್ಷಣೆ ಕುರಿತು ಮಕ್ಕಳಲ್ಲಿ ಅರಿವು ಮೂಡಿಸುವುದು ಅವಶ್ಯಕವಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ರಾಜಕುಮಾರ್ ತಿಳಿಸಿದರು.ವಡಗೇರಾ ತಾಲೂಕಿನ ಹಾಲಗೇರಾ ಸರ್ಕಾರಿ ಪ್ರೌಢಶಾಲೆಯಲ್ಲಿ ಮಣ್ಣು ಆರೋಗ್ಯ ಚೀಟಿ ಸಂಪೂರ್ಣತಾ ಅಭಿಯಾನ ಅಂಗವಾಗಿ ಕೃಷಿ ಇಲಾಖೆಯಿಂದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಮಣ್ಣಿನ ಆರೋಗ್ಯ ಕುರಿತು ಪ್ರಬಂಧ, ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಮುಖ್ಯಗುರು ಮಂಜುನಾಥ್ ರಾಠೋಡ್, ಸರ್ಕಾರ ಒಳ್ಳೆಯ ಕಾರ್ಯಕ್ರಮ ಆಯೋಜಿಸುವುದರಿಂದ ವಿದ್ಯಾರ್ಥಿಗಳಲ್ಲಿ ಮಣ್ಣಿನ ಆರೋಗ್ಯದ ಕುರಿತು ಮಾಹಿತಿ ನೀಡಿ ವಿದ್ಯಾರ್ಥಿಗಳಿಂದ ಅವರ ಪಾಲಕರಿಗೆ ತಿಳಿಸಬಹುದು ಎಂದು ಹೇಳಿದರು.
----
ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ-ಪರಶುರಾಮ್ 10ನೇ ತರಗತಿ, ದ್ವಿತೀಯ-ರಾಧಿಕಾ 9ನೇ ತರಗತಿ ಮತ್ತು ತೃತೀಯ-ಸ್ವಾತಿ 9ನೇ ಸ್ಥಾನ. ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ-ತರುಣ್ ಕುಮಾರ್ 9ನೆ ತರಗತಿ, ದ್ವಿತೀಯ-ಸೌಂದರ್ಯ ಶರಣಪ್ಪ, ತೃತೀಯ-ನಿಖಿಲಾ ಹಾಗೂ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಮೋದಿನ್, ದ್ವಿತೀಯ ಪರಶುರಾಮ, ತೃತೀಯ ಚಂದ್ರಶೇಖರ್ 9ನೇ ತರಗತಿ ವಿದ್ಯಾರ್ಥಿಗಳು ಸ್ಥಾನಗಳನ್ನು ಪಡೆದರು.
22ವೈಡಿಆರ್7: ವಡಗೇರಾ ತಾಲೂಕಿನ ಹಾಲಗೇರಾ ಸರ್ಕಾರಿ ಪ್ರೌಢಶಾಲೆಯಲ್ಲಿ ಮಣ್ಣು ಆರೋಗ್ಯ ಚೀಟಿ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಮಣ್ಣಿನ ಆರೋಗ್ಯ ಕುರಿತು ಪ್ರಬಂಧ, ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು.