ಮಕ್ಕಳನ್ನು ಸಂಸ್ಕಾರಯುತ ನಾಗರಿಕರನ್ನಾಗಿಸಿ: ಚಂದ್ರಶೇಖರ ಶ್ರೀ

KannadaprabhaNewsNetwork |  
Published : Feb 09, 2025, 01:31 AM IST
ರಾಯಬಾಗ ಪಟ್ಟಣದ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಿ, ಮಾತನಾಡಿದರು. | Kannada Prabha

ಸಾರಾಂಶ

ಮಕ್ಕಳ ಮನಸ್ಸಿನಲ್ಲಿ ಒಳ್ಳೆಯ ಆಚಾರ-ವಿಚಾರ ತುಂಬಿ, ಅವರನ್ನು ಒಳ್ಳೆಯ ಸಂಸ್ಕಾರಯುತ ನಾಗರಿಕರನ್ನಾಗಿ ರೂಪಿಸಬೇಕು ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯವರು ಹೇಳಿದರು.

ಕನ್ನಡಪ್ರಭ ವಾರ್ತೆ ರಾಯಬಾಗ

ಮಕ್ಕಳ ಮನಸ್ಸಿನಲ್ಲಿ ಒಳ್ಳೆಯ ಆಚಾರ-ವಿಚಾರ ತುಂಬಿ, ಅವರನ್ನು ಒಳ್ಳೆಯ ಸಂಸ್ಕಾರಯುತ ನಾಗರಿಕರನ್ನಾಗಿ ರೂಪಿಸಬೇಕು ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯವರು ಹೇಳಿದರು.

ಪಟ್ಟಣದ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆ ಆವರಣದಲ್ಲಿ ನಡೆದ ಆದರ್ಶ ಕನ್ನಡ ಮಾಧ್ಯಮ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಎಂ.ಎನ್.ಐಹೊಳೆ ಸ್ವತಂತ್ರ ಪದವಿಪೂರ್ವ ಕಾಲೇಜ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ನಮ್ಮ ಮಕ್ಕಳು ದೇಶ ಕಟ್ಟುವಂತಹ ವ್ಯಕ್ತಿ ಆಗಬೇಕು. ವೃದ್ಧಾಶ್ರಮ ಕಟ್ಟುವಂತಹ ವ್ಯಕ್ತಿ ಆಗಬಾರದು ಎಂದರು.

ರಬಕವಿ ಜಾನಪದ ವಿದ್ವಾಂಸ ಶ್ರೀಕಾಂತ ಕೆಂದೋಳ್ಳಿ ಮಾತನಾಡಿ, ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರು ಹೋಗಿ ದಾರಿ ತಪ್ಪುತ್ತಿರುವ ಯುವ ಜನಾಂಗಕ್ಕೆ ನಮ್ಮ ಭಾರತೀಯ ಸಂಸ್ಕೃತಿ ಬಗ್ಗೆ ತಿಳಿಸುವ ಕಾರ್ಯವನ್ನು ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆ ಮಾಡುತ್ತಿರುವ ಅತ್ಯಂತ ಶ್ಲಾಘನೀಯ ಎಂದರು. ಸಂಸ್ಥೆ ಕಾರ್ಯದರ್ಶಿ ಅರುಣ ಐಹೊಳೆ ಮಾತನಾಡಿ, ಹುಕ್ಕೇರಿ ಹಿರೇಮಠದ ಶ್ರೀಗಳ ಆಶೀರ್ವಾದದಿಂದ ಈ ಸಂಸ್ಥೆ ಯಶಸ್ವಿಯಾಗಿ ಬೆಳೆಯುತ್ತಿದೆ. ಇಂದು ದೇಶದಲ್ಲಿ ವೃದ್ಧಾಶ್ರಮ, ಅನಾಥಾಶ್ರಮ ಹೆಚ್ಚುತ್ತಿರುವುದು ಅತ್ಯಂತ ಕಳವಳಕಾರಿ ವಿಷಯ. ಇದನ್ನು ತಡೆಯಲು ನಮ್ಮ ಮಕ್ಕಳಗೆ ಒಳ್ಳೆಯ ಶಿಕ್ಷಣ, ಸಂಸ್ಕಾರವನ್ನು ಶಿಕ್ಷಕರು ಮತ್ತು ಪಾಲಕರು ನೀಡಬೇಕೆಂದರು.

ವಿದ್ಯಾರ್ಥಿಗಳಿಂದ ತಂದೆ-ತಾಯಿಯಂದಿರ ಪಾದ ಪೂಜೆ ಮಾಡುವ ಕಾರ್ಯಕ್ರಮ ನಡೆಯಿತು. ತಹಸೀಲ್ದಾರ್‌ ಸುರೇಶ ಮುಂಜೆ, ಸಿಆರ್‌ಪಿ ರಾಜು ಕುರಾಡೆ, ಮಾಯವ್ವ ಐಹೊಳೆ, ಬಸವರಾಜ ಸನದಿ, ಸದಾನಂದ ಹಳಿಂಗಳಿ, ಪೃಥ್ವಿರಾಜ ಜಾಧವ, ಸದಾಶಿವ ಘೋರ್ಪಡೆ, ಅಣ್ಣಾಸಾಹೇಬ ಖೆಮಲಾಪೂರೆ, ಎಸ್.ಎಸ್.ಕಾಂಬಳೆ, ಸಂಗನಗೌಡ ಐಹೊಳೆ, ಶಿವಾನಂದ ಐಹೊಳೆ, ಮಹೇಶ ಕರಮಡಿ ಸೇರಿ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪಾಲಕರು ಇದ್ದರು. ಮುಖ್ಯೋಪಾಧ್ಯಾಯ ಬಿ.ಬಿ.ಪೂಜಾರ ಸ್ವಾಗತಿಸಿ, ಪ್ರಾಚಾರ್ಯ ಎಮ್.ಎಲ್.ಗಿಜ್ಜನ್ನವರ ನಿರೂಪಿಸಿ, ವಂದಿಸಿದರು.

PREV

Recommended Stories

ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
ವಿಠಲಗೌಡ ತಲೆಬುರುಡೆ ತಂದ ಬಂಗ್ಲೆಗುಡ್ಡೆಯಲ್ಲಿ ಇಂದು ಮಹಜರು?