ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕಿನ ಚಿನಕುರಳಿಯ ಎಸ್‌ಟಿಜಿ ಪಬ್ಲಿಕ್ ಶಾಲೆಯಲ್ಲಿ ನಡೆದ ಸಂಸ್ಕೃತಿ ಸಮಾಗಮ- ೨೦೨೫ರ ಶಾಲಾ ವಾರ್ಷಿಕೋತ್ಸವ ಎರಡನೇ ದಿನದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳು ಅದ್ಬುತವಾದ ಸಾಧನೆ ಮಾಡಬೇಕು. ಸಮಾಜದಲ್ಲಿ ಉನ್ನತವಾದ ಸ್ಥಾನಕ್ಕೆ ಏರಬೇಕು ಎಂಬ ಕನಸು ಕಾಣುತ್ತಾರೆ. ಹೆತ್ತವರ ಆಶಯಕ್ಕೆ ಪೂರಕವಾಗಿ ಮಕ್ಕಳು ಸಿಕ್ಕಂತಹ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ದೊಡ್ಡಮಟ್ಟದಲ್ಲಿ ಸಾಧನೆ ಮಾಡುವ ಕಡೆಗೆ ಆಸಕ್ತಿ ವಹಿಸಬೇಕು ಎಂದು ಸಲಹೆ ನೀಡಿದರು.
ಸಂಸ್ಥೆ ಅಧ್ಯಕ್ಷ ಹಾಗೂ ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು ಮಾತನಾಡಿ, ನಮ್ಮ ಎಸ್‌ಟಿಜಿ ಶಿಕ್ಷಣ ಸಂಸ್ಥೆಯಲ್ಲಿ ಕೆಲಸ ಮಾಡುವ ಅಧ್ಯಾಪಕರು, ಸಿಬ್ಬಂದಿ ಎಲ್ಲರೂ ನಮ್ಮ ಕುಟುಂಬದ ಸದಸ್ಯರಿದ್ದಂತೆ, ನಮ್ಮ ಕುಟುಂಬ ಅವರ ಎಲ್ಲಾ ಕಷ್ಟ- ಸುಖ, ನೋವು- ನಲಿವುಗಳಲ್ಲಿ ಜತೆಗೆ ನಿಲ್ಲುತ್ತದೆ ಎಂದರು.ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದಲೇ ಶಾಲೆಯನ್ನು ಆರಂಭಿಸಿದ್ದೇವೆ. ಮಕ್ಕಳ ಭವಿಷ್ಯ ರೂಪಿಸಿಲು ಪೋಷಕರು ಅತ್ಯುತ್ತಮವಾದ ಶಿಕ್ಷಣ ನೀಡಬೇಕಿದೆ. ಅದಕ್ಕಾಗಿ ನಮ್ಮ ಸಂಸ್ಥೆಯು ಅಮೆರಿಕದ ವಿಶ್ವವಿದ್ಯಾನಿಲಯದೊಂದಿಗೆ ವಿದ್ಯಾರ್ಥಿ ವಿನಿಮಯಕ್ಕೆ ಒಪ್ಪಂದ ಮಾಡಿಕೊಂಡು ಶಿಕ್ಷಣ ನೀಡುವ ಕೆಲಸ ಮಾಡುತ್ತಿದ್ದೇವೆ. ನಮ್ಮ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ನೂರಾರು ಮಂದಿ ವಿದ್ಯಾರ್ಥಿಗಳು ಮೆಡಿಕಲ್, ಎಂಜಿನಿಯರಿಂಗ್ ಸೇರಿದಂತೆ ಅನೇಕ ಉನ್ನತ ಶಿಕ್ಷಣ ಮಾಡುತ್ತಿದ್ದಾರೆ ಎಂದರೆ ನಮಗೆ ಖುಷಿಯಾಗುತ್ತದೆ, ನಮ್ಮ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರಮಟ್ಟದಲ್ಲೂ ಸಹ ಸಹಕಾರ ಬೇಕೆಂದರೆ ನಮ್ಮ ಸಂಸ್ಥೆ ಅವರಿಗೆ ನೆರವು ನೀಡಲಿದೆ ಎಂದು ಭರವಸೆ ನೀಡಿದರು.
ಇದೇ ವೇಳೆ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ನೃತ್ಯ ಕಾರ್ಯಕ್ರಮ ಮೂಡಿಬಂದವು. ಪ್ರಸ್ತುತ ಸೋಷಿಯಲ್ ಮೀಡಿಯದಿಂದ ಆಗುತ್ತಿರುವ ದುಷ್ಪರಿಣಾಮ, ಪರಿಸರ ಸಂರಕ್ಷಣೆ, ಹಳ್ಳಿಯ ಪರಿಸರ ಸೇರಿದಂತೆ ನಾಡು- ನುಡಿ, ಭಾಷೆಗೆ ಸಂಬಂಧಿಸಿದ ಹಲವು ನೃತ್ಯ ಪ್ರದರ್ಶನಗಳು ಮೂಡಿಬಂದವು, ಮಕ್ಕಳ ನೃತ್ಯ ಪ್ರದರ್ಶನ ಕಂಡು ಪೋಷಕರು ಚಪ್ಪಾಳೆತಟ್ಟಿ ಸಂಭ್ರಮಿಸಿದರು.ಕಾರ್ಯಕ್ರಮದಲ್ಲಿ ಎಸ್‌ಟಿಜಿ ಶಿಕ್ಷಣ ಸಂಸ್ಥೆಯ ಸಿಇಒ ಸಿ.ಪಿ.ಶಿವರಾಜು, ಪ್ರಾಂಶುಪಾಲರಾದ ಮಾಚಮ್ಮ, ಆಡಳಿತಾಧಿಕಾರಿ ನಿವೇದಿತ ನಾಗೇಶ್, ಉಪಪ್ರಾಂಶುಪಾಲ ಲಿಂಗರಾಜು, ಅನಂತು ಹಾಜರಿದ್ದರು.