ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದ ಅಭಿನವ ಶ್ರೀ ರೇಣುಕಾ ಮಂದಿರದಲ್ಲಿ ಶುಕ್ರವಾರ ಜಿಲ್ಲಾ ಪೊಲೀಸ್ ಇಲಾಖೆ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಸಪ್ತಾಹ-2024ರ ಸಮಾರೋಪದ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಚಾರಿ ನಿಯಮಗಳ ಬಗ್ಗೆ ಕನಿಷ್ಠ ಅರಿವು ಇಲ್ಲದಿರುವುದೂ ಕಾರಣವಾಗುತ್ತಿದೆ. ಮದ್ಯಪಾನ ಮಾಡಿದಾಗ ಯಾವುದೇ ಕಾರಣಕ್ಕೂ ವಾಹನ ಚಾಲನೆ ಮಾಡಬಾರದು. ಅವಸರ, ಅತೀ ವೇಗ, ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಬಾರದು ಎಂದು ಹೇಳಿದರು.
ಮಕ್ಕಳಿಗೆ ವಾಹನ ಚಲಾಯಿಸಲೂ ಕೊಡಬೇಡಿ:ವಾಹನ ಚಾಲನೆ ಮಾಡುವವರಿಗೆ ಸಂಚಾರಿ ನಿಯಮಗಳ ಬಗ್ಗೆ ಅರಿತು ಅತ್ಯಗತ್ಯ. ಪಾಲಕರು ಅಪ್ರಾಪ್ತ ಮಕ್ಕಳಿಗೆ ಯಾವುದೇ ಕಾರಣಕ್ಕೂ ವಾಹನ ಚಲಾಯಿಸಲು ಬಿಡಬಾರದು. ಈಗ ಆಗುತ್ತಿರುವ ಅಪಘಾತ ಪ್ರಕರಣಗಳಲ್ಲಿ ಗರಿಷ್ಠ ಪ್ರಮಾಣದಲ್ಲಿ ವಿದ್ಯಾರ್ಥಿಗಳು, ಅಪ್ರಾಪ್ತ ಮಕ್ಕಳೇ ಹೆಚ್ಚಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಅಪ್ರಾಪ್ತರಿಗೆ ವಾಹನ ಚಲಾಯಿಸಲು ಕೊಡಬೇಡಿ. ಮಕ್ಕಳು ಪ್ರಾಪ್ತ ವಯಸ್ಕರಾಗುವವರೆಗೂ ವಾಹನ ಕೊಡಿಸುವುದರ ಜೊತೆಗೆ ಚಾಲನೆಗೆ ಬಿಡಬಾರದು ಎಂದು ಪಾಲಕರಿಗೆ ಸಲಹೆ ನೀಡಿದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ.ಮಂಜುನಾಥ, ಡಿವೈಎಸ್ಪಿ ಮಲ್ಲೇಶ ದೊಡ್ಮನಿ, ಶಶಿಧರ, ಇನ್ಸಪೆಕ್ಟರ್ ಗಳಾದ ಪ್ರಭಾವತಿ ಶೇತಸನದಿ, ಮಲ್ಲಮ್ಮ ಚೌಬೆ, ಇಮ್ರಾನ್ ಬೇಗ್, ಶೈಲಜಾ, ಜಯಪ್ರಕಾಶ, ನಿರ್ಮಲ, ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಹಾಯಕ ಆಯುಕ್ತ ಕೊಟ್ರೇಶ, ಪೊಲೀಸ್ ಅಧಿಕಾರಿ, ಸಿಬ್ಬಂದಿ, ವಿವಿಧ ಶಾಲಾ ಶಿಕ್ಷಕ-ಶಿಕ್ಷಕಿಯರು, ಮಕ್ಕಳು ಇದ್ದರು. ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಶಾಲಾ ಮಕ್ಕಳಿಗೆ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆ ವಿಜೇತರಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ವಿತರಿಸಲಾಯಿತು.
ಪ್ರಾದೇಶಿಕ ಸಾರಿಗೆ ಅಧಿಕಾರಿ ಸಿ.ಎಸ್.ಪ್ರಮುತೇಶ್ ಮಾತನಾಡಿ, ವಾಹನ ಸವಾರರು ರಸ್ತೆ ಸುರಕ್ಷತಾ ಕಾನೂನನ್ನು ಸರಿಯಾಗಿ ಪಾಲಿಸುತ್ತಿಲ್ಲವಾದ್ದರಿಂದ ಸಾಕಷ್ಟು ಅಪಘಾತ ಸಂಭವಿಸುತ್ತಿವೆ. ರಸ್ತೆ ಅಪಘಾತದ ಬಗ್ಗೆ ಜಾಗೃತಿ ಮೂಡಿಸಲು ಪ್ರಾದೇಶಿಕ ಸಾರಿಗೆ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆಗಳು ಸಾಕಷ್ಟು ಜಾಗೃತಿ ಕಾರ್ಯಕ್ರಮ ಆಯೋಜಿಸುತ್ತಿವೆ. ಪ್ರತಿಯೊಬ್ಬರೂ ಸಂಚಾರಿ ನಿಯಮ ಪಾಲಿಸಿ, ವಾಹನ ಚಾಲನೆ ಮಾಡಬೇಕು. ನಿಮ್ಮ ಪ್ರಾಣದಷ್ಟೇ ಮುಖ್ಯ ಇತರೆ ಪ್ರಯಾಣಿಕರು, ಇತರೆ ಚಾಲಕರು, ಪ್ರಯಾಣಿಕರ ಪ್ರಾಣವೂ ಅತ್ಯಮೂಲ್ಯವಾದುದು ಎಂಬ ಅರಿವು ಸದಾ ಇರಲಿ ಎಂದರು.
ಉಮಾ ಪ್ರಶಾಂತ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ